Homeಕರ್ನಾಟಕಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

ಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

- Advertisement -
- Advertisement -

ನಾಡೋಜ ಡಾ. ಬರಗೂರು ಪ್ರತಿಷ್ಠಾನದ ವತಿಯಿಂದ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ‘ನಾಡೋಜ ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಅಕ್ಟೋಬರ್‌ 30 ರ ಶನಿವಾರದಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.

ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆಯಾದರೂ ಕೊರೊನಾ ನಿರ್ಭಂದದ ಹಿನ್ನೆಲೆಯಲ್ಲಿ 2020 ಮತ್ತು 2021 ರ ಪ್ರಶಸ್ತಿಯನ್ನು ಒಟ್ಟಿಗೆ ನೀಡಲಾಗುತ್ತಿದೆ.

ಇದನ್ನೂ ಓದಿ: ಲಿಪಿ, ಲಿಪಿಕಾರನ ಇತಿಹಾಸ ಹಿಡಿದಿಡುವ ಷ. ಶೆಟ್ಟರ್ ಅವರ ’ಹಳಗನ್ನಡ’

2020 ನೇ ಸಾಲಿನ ಬರಗೂರು ಪ್ರಶಸ್ತಿಯ ಸಿನಿಮಾ ಕ್ಷೇತ್ರ ವಿಭಾಗದಲ್ಲಿ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಸಾರಾ ಅಬೂಬಕರ್‌ ಅವರು ಆಯ್ಕೆಯಾಗಿದ್ದಾರೆ. 2021 ನೇ ಸಾಲಿನಲ್ಲಿ ಸಿನಿಮಾ ಕ್ಷೇತ್ರದಲ್ಲಿ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ನೀಡಲಾಗುತ್ತದೆ.

ಹಿರಿಯ ಸಿನಿಮಾ ನಿರ್ದೇಶಕ ಎಸ್‌.ಕೆ. ಭಗವಾನ್ ಅವರು ಪ್ರಶಸ್ತಿ ಸಮ್ಮಾನಿತರಿಗೆ ಪ್ರದಾನ ಮಾಡಲಿದ್ದಾರೆ.

ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು,  ಭಾರತದ ಅತ್ಯಂತ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರಲ್ಲೊಬ್ಬರಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ತಮ್ಮ 27 ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ 14 ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ ದಕ್ಷಿಣ ಏಷ್ಯಾ ಫೆಡರೇಷನ್‌ನ ಕ್ರಿಸ್ಟಲ್ ಗ್ಲೋಬ್ ಪ್ರಶಸ್ತಿ, ರಜತ ಕಮಲ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಾಹಿತಿ ಸಾರಾ ಅಬೂಬಕರ್‌ ಅವರು ಮೂಲತಃ ಕೇರಳದ ಕಾಸರಗೋಡಿನವರಾಗಿದ್ದಾರೆ. ‘ಚಂದ್ರಗಿರಿಯ ತೀರದಲ್ಲಿ’, ‘ಸಹನಾ’, ‘ಚಪ್ಪಲಿಗಳು’ ಸೇರಿದಂರೆ ಹಲವಾರು ಕಾದಂಬರಿ, ಕಥೆ, ಬಾನುಲಿ ನಾಟಕ, ಲೇಕನ ಮತ್ತು ಅನುವಾದವನ್ನು ಮಾಡಿರುವ ಅವರು ಕನ್ನಡ ಪ್ರಮುಖ ಲೇಖಕಿಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿವೆ.

ಚಿಕ್ಕಮಗಳೂರು ಜಿಲ್ಲೆಯ ಬಿ. ಕೆ. ಸುಮಿತ್ರ ಅವರು ಕನ್ನಡ ಚಿತ್ರರಂಗದ ಪ್ರಮುಖ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರು. ಸಂಗೀತದ ಎಲ್ಲ ಪ್ರಕಾರಗಳಲ್ಲೂ ಹಾಡಿರುವ ಹೆಗ್ಗಳಿಕೆ ಇವರದು. ಇವರಿಗೆ ಕೆಂಪೇಗೌಡ ಪ್ರಶಸ್ತಿ, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶ್ತಸ್ತಿಗೆ ಲಭಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಚಂದ್ರಕಾಂತ ಪೋಕಳೆ ಅವರು 2007 ರವರೆಗೆ ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮರಾಠಿಯಿಂದ ಕನ್ನಡಕ್ಕೆ ಭಾಷಾಂತರಕಾರರಾಗಿ ಸಲ್ಲಿಸಿದ ಇವರ ಸೇವೆ ಗಮನಾರ್ಹವಾಗಿದೆ. ಇದುವರೆಗೆ ಸುಮಾರು 100 ಮರಾಠಿ ಕೃತಿಗಳನ್ನು ಭಾಷಾಂತರ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಇವರಿಗೆ ಸಂದಿವೆ.

ಇದನ್ನೂ ಓದಿ: ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...