Homeಕರ್ನಾಟಕಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

ಬೆಂಗಳೂರು | ಸ್ಕೈ ಡೆಕ್ ಕುರಿತು ಸಾರ್ವಜನಿಕ ಪ್ರತಿಕ್ರಿಯೆ ಆಹ್ವಾನಿಸಿದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಹೆಮ್ಮಿಗೆಪುರದಲ್ಲಿ ನಿರ್ಮಿಸಲು ಉದ್ದೇಶಿಲಾಗಿರುವ 250-ಮೀಟರ್ ಸ್ಕೈ ಡೆಕ್ ಕುರಿತು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಸಾರ್ವಜನಿಕರಿಗೆ ಕೇಳಿದೆ. ಸ್ಕೈ ಡೆಕ್ ನಿರ್ಮಾಣಕ್ಕೆ ಅನುಕೂಲಕರವಾಗುವ ಹಲವು ಪ್ರದೇಶಗಳಲ್ಲಿ ಹೆಮ್ಮಿಗೆಪುರ ಕೂಡಾ ಒಂದಾಗಿದೆ. ಬರೋಬ್ಬರಿ 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಉದ್ದೇಶಿತ ಸ್ಕೈ ಡೆಕ್ ಯೋಜನೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯಲ್ಲೊಂದಾಗಿದೆ. ಬೆಂಗಳೂರು

ನಗರದ ವಿಶಿಷ್ಟ ವಿಹಂಗಮ ನೋಟವನ್ನು ನೀಡಲು ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಜೊತೆಗೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಸರ್ಕಾರ ವಾದಿಸುತ್ತದೆ. ಇದು ಫುಡ್ ಕೋರ್ಟ್‌ಗಳು ಮತ್ತು ಇತರ ಸೌಕರ್ಯಗಳ ಜೊತೆಗೆ ಆಟದ ಮೈದಾನಗಳನ್ನು ಸಹ ಹೊಂದಿರುತ್ತದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆನ್ನಿಗಾನಹಳ್ಳಿಯಲ್ಲಿ ಎನ್‌ಜಿಇಎಫ್, ಯಶವಂತಪುರದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ವೈಟ್‌ಫೀಲ್ಡ್‌ನಲ್ಲಿರುವ ಕರ್ನಾಟಕ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಮತ್ತು ಜಕ್ಕೂರುನಲ್ಲಿರುವ ಜಿಕೆವಿಕೆ ಸೇರಿದಂತೆ ಯೋಜನೆಗಾಗಿ ಹಲವು ಸಂಭಾವ್ಯ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ.

ಆದಾಗ್ಯೂ, ಯೋಜನೆಗೆ ಉದ್ದೇಶಿಸಿರುವ ಹಲವಾರು ಪ್ರದೇಶಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಯಲಹಂಕ ರಕ್ಷಣಾ ವಿಮಾನ ನಿಲ್ದಾಣ ಮತ್ತು HAL ರಕ್ಷಣಾ ವಿಮಾನ ನಿಲ್ದಾಣದಂತಹ ಸೂಕ್ಷ್ಮ ವಲಯಗಳ ಬಳಿ ಬರುತ್ತವೆ. ಈ ಪ್ರದೇಶಗಳಲ್ಲಿ ಕಲರ್ ಕೋಡೆಡ್ ಝೋನಿಂಗ್ ಮ್ಯಾಪ್ (CCZM) ನಿರ್ಬಂಧವಿದ್ದು, ಇದು ಎತ್ತರದ ಕಟ್ಟಡಗಳ ನಿರ್ಮಾಣಗಳಿಗೆ ನಿಷೇಧವಿದೆ.

ಹಾಗಾಗಿ ಬೆಂಗಳೂರಿನ ಪಶ್ಚಿಮ ಮತ್ತು ನೈಋತ್ಯ ಭಾಗಗಳಿಗೆ ಸ್ಕೈ ಡೆಕ್‌ಗೆ ಕಾರ್ಯಸಾಧ್ಯವಾದ ಪ್ರದೇಶಗಳು ಮಿತಿಯಲ್ಲಿವೆ. ಇದಕ್ಕೆ ಪ್ರತಿಯಾಗಿ, ಬಿಬಿಎಂಪಿಯು ನೈಸ್ ಕ್ಲೋವರ್ ಲೀಫ್ ಬಳಿಯ ಹೆಮ್ಮಿಗೆಪುರ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಮತ್ತು ನೈಸ್ ರಸ್ತೆ ಬಳಿಯ ಕೊಮ್ಮಘಟ್ಟದಂತಹ ಪರ್ಯಾಯ ಸ್ಥಳಗಳನ್ನು ಪರಿಗಣಿಸುತ್ತಿದೆ.

ನೈಸ್ ರಸ್ತೆಯು ತುಮಕೂರು, ಕನಕಪುರ, ಮೈಸೂರು ಮತ್ತು ಹೊಸೂರಿನಂತಹ ಪ್ರಮುಖ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಹೆಮ್ಮಿಗೆಪುರದ ಬಗ್ಗೆ ಬಿಬಿಎಂಪಿ ವಿಶೇಷ ಒಲವು ತೋರಿದೆ. ಇಲ್ಲಿ ನಿರ್ಮಾಣದ ಸಮಯದಲ್ಲಿ ಟ್ರಾಫಿಕ್ ಅಡೆತಡೆಗಳು ಕೂಡಾ ಕಡಿಮೆ ಆಗಿರುತ್ತದೆ. ಅಲ್ಲದೆ, ತುರಹಳ್ಳಿ ಅರಣ್ಯಕ್ಕೆ ಈ ಪ್ರದೇಶ ಹತ್ತಿರ ಇರುವುದರಿಂದ, ಪ್ರವಾಸಿಗರಿಗೆ ಸ್ಕೈ ಡೆಕ್‌ನಿಂದ ರಮಣೀಯ ನೈಸರ್ಗಿಕ ನೋಟಗಳು ಕೂಡಾ ಒದಗುತ್ತದೆ.

ಸ್ಕೈ ಡೆಕ್ ನಿರ್ಮಾಣಕ್ಕೆ ಉದ್ದೇಶಿತ ಸ್ಥಳದ ಕುರಿತು ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಲು ಬಿಬಿಎಂಪಿ ನಿವಾಸಿಗಳು, ನಾಗರಿಕೆ ಗುಂಪುಗಳು ಮತ್ತು ಇತರ ಮಧ್ಯಸ್ಥಗಾರರನ್ನು ಬಿಬಿಎಂಪಿ ಆಹ್ವಾನಿಸಿದೆ. ವಿಶೇಷವಾಗಿ ಹೆಮ್ಮಿಗೆಪುರವು ಸೂಕ್ತವಾದ ಸ್ಥಳವಾಗಿದೆಯೇ ಅಥವಾ ನಗರದ ಪಶ್ಚಿಮ ಅಥವಾ ನೈಋತ್ಯದಲ್ಲಿ ಇತರ ಆದ್ಯತೆಯ ಸ್ಥಳಗಳಿದ್ದರೆ ಅಭಿಪ್ರಾಯ ತಿಳಿಸುವಂತೆ ಅದು ಕೇಳಿದೆ.

ಪ್ರತಿಕ್ರಿಯೆಯನ್ನು [email protected] ಗೆ ಇಮೇಲ್ ಮೂಲಕ ಸಲ್ಲಿಸಬಹುದು ಅಥವಾ ಬೆಂಗಳೂರಿನ N R ಸ್ಕ್ವೇರ್‌ನಲ್ಲಿರುವ BBMP ಕೇಂದ್ರ ಕಚೇರಿಗೆ ವೈಯಕ್ತಿಕವಾಗಿ ತಲುಪಿಸಬಹುದು. ಮುಂದಿನ ಏಳು ದಿನಗಳವರೆಗೆ ಪ್ರತಿಕ್ರಿಯೆ ವಿಂಡೋ ತೆರೆದಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಶಿವಕುಮಾರ್ ಅವರು ಅಮೆರಿಕಾಕ್ಕೆ ವೈಯಕ್ತಿಕ ಭೇಟಿ ನೀಡಿದ್ದ ಸಂದರ್ಭದಲ್ಲಿ ನ್ಯೂಯಾರ್ಕ್‌ನ ಸ್ಕೈ ಡೆಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಸ್ಕೈಡೆಕ್ ‘ದಿ ಎಡ್ಜ್’ ಮತ್ತು ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತು ಇತರ ಅಂಶಗಳನ್ನು ಪರಿಶೀಲಿಸಿ, ಬೆಂಗಳೂರಿನಲ್ಲಿ ಕೂಡಾ ಇದೇ ರೀತಿಯ ನಿರ್ಮಾಣವನ್ನು ತರುವ ಬಗ್ಗೆ ಸುಳಿವು ನೀಡಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...