Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

- Advertisement -
- Advertisement -

ದಿ ನ್ಯೂಸ್ ಮಿನಿಟ್‌ ಬಹಿರಂಗಡಿಸಿರುವ ತನಿಖಾ ವರದಿಯ ನಂತರ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನದಲ್ಲಿ ತೊಡಗಿರುವ ‘ಚಿಲುಮೆ ಎಜುಕೇಶನಲ್ ಕಲ್ಚರಲ್ ಮತ್ತು ರೂರಲ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್’ ಎಂಬ ಎನ್‌ಜಿಒ ಸಂಸ್ಥೆಯ ಇಬ್ಬರು ಉದ್ಯೋಗಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಚಿಲುಮೆಯ ನಿರ್ದೇಶಕ ರೇಣುಕಾ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಸಿಬ್ಬಂದಿ ಧರ್ಮೇಶ್ ಎಂದು ಗುರುತಿಸಲಾಗಿದ್ದು, ಹಲಸೂರು ಗೇಟ್ ಠಾಣೆಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ರಾತ್ರಿ ಅವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದಾಗ್ಯೂ, ಚಿಲುಮೆಯ ನಿರ್ದೇಶಕರೊಬ್ಬರಲ್ಲಾದ ಕೃಷ್ಣಪ್ಪ ರವಿಕುಮಾರ್‌ ಇನ್ನೂ ನಾಪತ್ತೆಯಾಗಿದ್ದು, ಅವರ ಬಂಧನ ಇನ್ನು ನಡೆದಿಲ್ಲ. ಅವರು 2013 ರಲ್ಲಿ ಟ್ರಸ್ಟ್ ಅನ್ನು ನೋಂದಾಯಿಸಿದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಚಿಲುಮೆ ಸಂಸ್ಥೆಯ ಪ್ರಮುಖ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬೆಂಗಳೂರಿನ ಮಲ್ಲೇಶ್ವರಂನ 16 ಮತ್ತು 17ನೇ ಅಡ್ಡರಸ್ತೆಯಲ್ಲಿರುವ ಚಿಲುಮೆ ಟ್ರಸ್ಟ್ ಮತ್ತು ಟ್ರಸ್ಟ್‌ಗೆ ಸಂಬಂಧಿಸಿದ ಖಾಸಗಿ ಕಂಪನಿಯ ಕಚೇರಿಗಳಲ್ಲೂ ಪೊಲೀಸ್ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಚುನಾವಣಾ ಅಧಿಕಾರಿಗಳ ಸೋಗು ಹಾಕಿ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಯಕರ್ತರನ್ನು ಕಳುಹಿಸುವ ಮೂಲಕ ಸಂಸ್ಥೆಯು ಮತದಾರರ ಮಾಹಿತಿಯನ್ನು ಗುಪ್ತವಾಗಿ ಸಂಗ್ರಹಣೆ ಮಾಡಿರುವುದನ್ನು ನ್ಯೂಸ್‌ ಮಿನಿಟ್‌ ತನಿಖಾ ವರದಿ ಮಾಡಿತ್ತು. ಇದರ ನಂತರ ಬೆಂಗಳೂರು ಪೊಲೀಸರು ಚಿಲುಮೆ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದರ ನಂತರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರ ದೂರಿನ ಆಧಾರದ ಮೇಲೆ  ಚಿಲುಮೆ ವಿರುದ್ಧ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಫೋರ್ಜರಿ ಆರೋಪವನ್ನು ದೂರಿನಲ್ಲಿ ಮಾಡಲಾಗಿದೆ. ಎಫ್‌ಐಆರ್‌‌ ಚಿಲುಮೆ ನಿಯೋಜಿಸಿದ ಕ್ಷೇತ್ರಕಾರ್ಯಕರ್ತ ಲೋಕೇಶ್ ಅವರನ್ನು ಹೆಸರಿಸಿದೆ.

ಇದನ್ನೂ ಓದಿ: ಅಹಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ: ಡಿ.ಕೆ.ಶಿವಕುಮಾರ್‌

ಮಹದೇವಪುರ ಚುನಾವಣಾ ನೋಂದಣಿ ಅಧಿಕಾರಿ ಚಂದ್ರಶೇಖರ್ ನೀಡಿದ ಮತ್ತೊಂದು ದೂರಿನ ಮೇರೆಗೆ ನಗರದ ಮಹದೇವಪುರದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ದೂರಿನಲ್ಲಿ ಕೂಡಾ ಲೋಕೇಶ್ ಅವರನ್ನು ಪ್ರಕರಣದ ಆರೋಪಿ ಎಂದು ಹೆಸರಿಸಲಾಗಿದೆ.

ಚುನಾವಣಾ ಅಧಿಕಾರಿಗಳನ್ನು ಯಾಮಾರಿಸಿ ಬೆಂಗಳೂರಿನಲ್ಲಿ ಮತದಾರರ ಡೇಟಾವನ್ನು ಗುಪ್ತವಾಗಿ ಸಂಗ್ರಹಿಸಲು ಚಿಲುಮೆಯಿಂದ ನಿಯೋಜಿಸಲ್ಪಟ್ಟ ಅನೇಕ ಯುವಕರೊಂದಿಗೆ ನ್ಯೂಸ್ ಮಿನಿಟ್‌‌ ಸ್ವತಂತ್ರವಾಗಿ ಮಾತನಾಡಿದ್ದು, ಹಗರಣವನ್ನು ಬಯಲಿಗೆಳೆದ್ದು, ಸರಣಿ ವರದಿಯನ್ನು ಮಾಡಿದೆ. ಈ ವರದಿಯನ್ನು ನ್ಯೂಸ್‌ ಮಿನಿಟ್‌‌ ನವೆಂಬರ್ 16 ರಂದು ಪ್ರಕಟಿಸಿದ್ದು, ತನಿಖಾ ವರದಿಯನ್ನು ನ್ಯೂಸ್ ಮಿನಿಟ್‌ ಮತ್ತು ‘ಪ್ರತಿಧ್ವನಿ’ ಜಂಟಿಯಾಗಿ ನಡೆಸಿತ್ತು.

ಮತದಾನದ ಹಕ್ಕುಗಳು ಮತ್ತು ಮತದಾರರ ಪಟ್ಟಿಗಳ ಪರಿಷ್ಕರಣೆ ಕುರಿತು ‘ಜಾಗೃತಿ ಮೂಡಿಸಲು’ ಚಿಲುಮೆಗೆ ನೀಡಿದ್ದ ಸರ್ಕಾರಿ ಆದೇಶವನ್ನು ದುರುಪಯೋಗಪಡಿಸಿದ್ದ ಸಂಸ್ಥೆಯು ಮತದಾರರ ಮಾಹಿತಿಯನ್ನು ಕಳ್ಳತನ ಮಾಡಿಕೊಂಡಿದೆ ಎಂದು ನ್ಯೂಸ್ ಮಿನಿಟ್‌ ವರದಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಚುನಾವಣಾ ಸಮೀಕ್ಷೆಗಳೆಂಬ ಏಜೆಂಟ್‌ಗಳು; ಮತದಾರರನ್ನು ಸುಲಭವಾಗಿ ದಾರಿ ತಪ್ಪಿಸುತ್ತವೆ!

ಬಿಜೆಪಿಯ ಮಾಜಿ ಶಾಸಕ ನಂದೀಶ ರೆಡ್ಡಿ ಅವರು ಮತದಾರರ ದತ್ತಾಂಶ ಸಮೀಕ್ಷೆಗಾಗಿ ಚಿಲುಮೆಗೆ 18 ಲಕ್ಷ ರೂ. ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...