Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಎನ್‌ಜಿಒಗೆ ನಕಲಿ ಐಡಿ ವಿತರಿಸಿದ ಮೂವರು ಅಧಿಕಾರಿಗಳು ಅಮಾನತು

- Advertisement -
- Advertisement -

ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡಿದ ಮೂವರು ಚುನಾವಣಾ ನೋಂದಣಿ ಅಧಿಕಾರಿಗಳನ್ನು (ಇಆರ್‌ಒ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ಅಮಾನತುಗೊಳಿಸಿದೆ.

ಅಮಾನತುಗೊಂಡ ಅಧಿಕಾರಿಗಳಲ್ಲಿ ಮಹದೇವಪುರದ ಇಆರ್‌ಒ ಕೆ. ಚಂದ್ರಶೇಖರ, ಚಿಕ್ಕಪೇಟೆ ಇಆರ್‌ಒ ವಿ.ಬಿ.ಭೀಮಾಶಂಕರ್‌, ಕಂದಾಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದ ಶಿವಾಜಿನಗರದ ಇಆರ್‌ಒ ಸುಹೇಲ್‌ ಅಹಮದ್‌ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ, ಯಾವುದೇ ಖಾಸಗಿ ಸಂಸ್ಥೆ ಅಥವಾ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳಿಗೆ ಗುರುತಿನ ಚೀಟಿ ನೀಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿ ಕಾರ್ಡ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಎಂದು ಬರೆದು ಸಂಸ್ಥೆಗೆ ಇಆರ್‌ಒ ಮೂಲಕ ಗುರುತಿನ ಚೀಟಿ ನೀಡಿರುವುದು ಕಂಡುಬಂದಿದೆ” ಎಂದು ಮಹದೇವಪುರ ಅಮಾನತು ಆದೇಶದಲ್ಲಿ ತಿಳಿಸಿದೆ.

ಶಿವಾಜಿನಗರದ ಆದೇಶದಲ್ಲಿ ಇಆರ್‌ಒ ಸುಹೇಲ್ ಅಹಮದ್ ಅವರು 14 ಬೂತ್ ಮಟ್ಟದ ಸಂಯೋಜಕ (ಬಿಎಲ್‌ಸಿ) ಕಾರ್ಡ್‌ಗಳನ್ನು ನೀಡಿದ್ದಾರೆ ಎಂದು ಹೆಚ್ಚುವರಿಯಾಗಿ ಉಲ್ಲೇಖಿಸಲಾಗಿದೆ.

ದಿ ನ್ಯೂಸ್ ಮಿನಿಟ್‌ ಮತ್ತು ಪ್ರತಿಧ್ವನಿ ನಡೆಸಿದ ಜಂಟಿ ತನಿಖಾ ವರದಿಯ ನಂತರ ಮತದಾರರರ ಮಾಹಿತಿ ಕಳ್ಳತನದ ಬೃಹತ್ ಹಗರಣ ಬಹಿರಂಗವಾಗಿದ್ದು, ಈ ವರೆಗೆ ಐವರನ್ನು ಬಂಧಿಸಲಾಗಿದೆ. ಅಲ್ಲದೆ ಹಗರಣದಲ್ಲಿ ಬಿಜೆಪಿಗೆ ನೇರ ಕೈವಾಡವಿದ್ದು, ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡಲಾಗಿತ್ತು ಎಂದು ಇತ್ತೀಚೆಗಿನ ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಹೆಸರಿದೆಯೆಂದು ಹುಡುಕುವುದು ಹೇಗೆ? ಡಿಲೀಟ್‌ ಆಗಿದ್ದರೆ ಸೇರಿಸುವುದು ಹೇಗೆ?

ಚುನಾವಣಾ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಅನುಮತಿ ಪತ್ರವನ್ನು ದುರುಪಯೋಗ ಪಡಿಸಿಕೊಂಡಿರುವ ಚಿಲುಮೆ ಎಂಬ ಖಾಸಗಿ ಎನ್‌ಜಿಒ ಮನೆ-ಮನೆ ಸಮೀಕ್ಷೆಯ ಮೂಲಕ ಮತದಾರರ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿದೆ ಎಂದು ಆರೋಪಿಸಲಾಗಿದ್ದು, ಬಿಬಿಎಂಪಿ ಅನುಮತಿ ನೀಡುವಲ್ಲಿ ಕೂಡಾ ಅಕ್ರಮ ಎಸಗಿದೆ ಎಂದು ವರದಿಯಾಗಿದೆ. ಬಿಬಿಎಂಪಿಯಿಂದ BLO ಗಳೆಂದು ಗುರುತಿಸಿಕೊಂಡ ಏಜೆಂಟರಿಗೆ ನಕಲಿ ಗುರುತಿನ ಚೀಟಿಗಳನ್ನು ನೀಡಲಾಗಿತ್ತು.

ಮಹದೇವಪುರ, ರಾಜರಾಜೇಶ್ವರಿ ನಗರ ಮತ್ತು ಚಿಕ್ಕಪೇಟೆ ಮೂರು ಕ್ಷೇತ್ರಗಳ ಸಮೀಕ್ಷೆಯನ್ನು ಚಿಲುಮೆ ಎನ್‌ಜಿಓದ ಏಜೆಂಟರು ಬಹುತೇಕ ಪೂರ್ಣಗೊಳಿಸಿದ್ದಾರೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ಅದಾಗ್ಯೂ ಏಜೆಂಟರುಗಳಿಗೆ, ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲಾಗುತ್ತಿದೆ ಎಂಬುದು ತಿಳಿದಿರಲಿಲ್ಲ ಎಂದು ವರದಿ ಹೇಳಿದೆ.

“ಸರ್ಕಾರವು ಅನುಮೋದಿಸಿದ ಕಾನೂನುಬದ್ಧ ಚಟುವಟಿಕೆಯನ್ನು ನಾವು ಮಾಡುತ್ತಿದ್ದೇವೆ ಎಂದು ಭಾವಿಸಿದ್ದೆವು” ಎಂದು ಏಜೆಂಟರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಏಜೆಂಟ್‌ಗಳಾಗಿ ಸೇರಿದ್ದ ಹಲವರು ವೇತನ ಪಾವತಿಸದ ಕಾರಣ ಮತ್ತು ಕೆಲಸದ ಭಯಾನಕ ಪರಿಸ್ಥಿತಿಗಳಿಂದಾಗಿ ಕೆಲಸವನ್ನು ತೊರೆದಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಭಾನುವಾರ ಚಿಲುಮೆಯ ನಿರ್ದೇಶಕ ರವಿಕುಮಾರ್ ಕೃಷ್ಣಪ್ಪ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ನವೆಂಬರ್ 17 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ರಂಗಪ್ಪ ಎಸ್. ಅವರು ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ನಕಲಿ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬಯಲಾದ ಮೂರು ದಿನಗಳವರೆಗೆ ಅವರು ತಲೆಮರೆಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...