Homeಕರ್ನಾಟಕನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

"ನಾನು ಮತ್ತು ವಸಂತ ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು"

- Advertisement -
- Advertisement -

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ನಾನು ಮತ್ತು ವಸಂತ ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಅವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ” ಎಂದು ಸಿಎಂ ಹೇಳಿದರು.

“ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ” ಎಂದರು.

“ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ‘ವಿಶ್ವ ಮಾನವ’ ಮೌಲ್ಯವನ್ನು ಪಾಲಿಸಿದವರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿಯಾಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ, ಅವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು” ಎಂದು ಬಣ್ಣಿಸಿದರು.

“2023ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು” ಎಂದು ಸಿಎಂ ಹೇಳಿದರು.

“ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ, ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ” ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಸ್ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ: ಸಿಎಂ

ಬೆಳ್ತಂಗಡಿಯ ಕೇಂದ್ರ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಬೆಳ್ತಂಗಡಿಯ ವೃತ್ತದಲ್ಲಿ ಬಂಗೇರ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ : ರಾಜ್ಯದ 5,8,9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...