Homeಚಳವಳಿಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಮೋದಿ ನಾಯಕತ್ವದ ವಿರುದ್ಧ ಯುವಸಮೂಹ ತಿರುಗಿಬಿದ್ದಿದೆ. ದೇಶಾದ್ಯಂತ ತಟ್ಟೆ, ಲೋಟಗಳನ್ನು ಬಡಿಯುತ್ತಾ ನಿರುದ್ಯೋಗದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಹೆಚ್ಚುತ್ತಿದ್ದ ನಿರುದ್ಯೋಗ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಗರಿಷ್ಟ ಮಟ್ಟ ತಲುಪಿದೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲೂ ಯುವಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದು ಅವರು ರೊಚ್ಚಿಗೇಳುವಂತೆ ಪ್ರೇರೇಪಿಸಿದೆ ಎನ್ನಲಾಗುತ್ತಿದೆ.

ಇಷ್ಟು ದಿನ ರಸ್ತೆಗಳಲ್ಲಿ, ಕಚೇರಿಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ನಡೆಯುತ್ತಿದ್ದ ಪ್ರತಿಭಟನೆ ಈಗ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಒಂದಾಗಿ ತಟ್ಟೆ, ಲೋಟಗಳನ್ನು ಬಡಿಯುತ್ತಾ, ಹಾಡುಗಳನ್ನು ಹಾಡುತ್ತಾ ರಸ್ತೆಗಳಲ್ಲಿ ಸಾಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಓಡಿಸಲು ತಟ್ಟೆ ಬಡಿಯುವ ಸಲಹೆ ನೀಡಿದ್ದನೇ ಇವರು ನಿರುದ್ಯೋಗ ಓಡಿಸಲು ತಟ್ಟೆ, ಲೋಟಗಳನ್ನು ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ದೇಶದ ಜಿಡಿಪಿ ಅತ್ಯಂತ ಕೆಳಮಟ್ಟದಲ್ಲಿದೆ, ಲಾಕ್‌ಡೌನ್ ಸಮಯದಲ್ಲಿ ಕೋಟ್ಯಾಂತರ ಜನರ ಉದ್ಯೋಗಗಳು ಕಳೆದುಹೋಗಿವೆ, ಕಳೆದ 45 ವರ್ಷಗಳಲ್ಲಿ ನಿರುದ್ಯೋಗವು ಅತ್ಯಧಿಕವಾಗಿದೆ, ಇದಕ್ಕೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿ ಕಾರಣವಾಗಿವೆ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಯುವಜನತೆ ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ವಾಯಸೇನೆಯ ನಿವೃತ್ತ ಪೈಲಟ್ ರಾಜೀವ್ ತ್ಯಾಗಿ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಹಂಚಿಕೊಂಡಿದ್ದು, ಆ ಪೋಸ್ಟ್‌ ಅನ್ನು 300ಕ್ಕೂ ಅಧಿಕ ಮಂದಿ ಹಂಚಿಕೊಂಡಿದ್ದಾರೆ.

Young citizens on 5th at 5 PM for 5 minutes, beating thaali for jobs… 🙂

Posted by Rajiv Tyagi on Sunday, September 6, 2020

ಇತ್ತ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಖಾಸಗೀಕರಣದ ವಿರುದ್ಧ ಲಂಕಾ ಗೇಟ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಿರುದ್ಯೋಗ ಹೆಚ್ಚಾಗಲೂ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ಚಪ್ಪಾಳೆ ತಟ್ಟಿ, ತಟ್ಟೆಗಳನ್ನು ಬಡಿಯುವ ಮೂಲಕ ಪ್ರತಿರೋಧ ದಾಖಲಿಸಿದ್ದಾರೆ.

ಸಾಂಕ್ರಾಮಿಕ ರೋಗ ಮತ್ತು ನಿರುದ್ಯೋಗದಿಂದ ದೇಶದ ಕೋಟ್ಯಂತರ ಬಡಜನರು ತೊಂದರೆಗೀಡಾದಾಗ, ಕೇಂದ್ರ ಸರ್ಕಾರವು ತನ್ನ ಸಾರ್ವಜನಿಕ ಆಸ್ತಿಯನ್ನು ದೇಶದ ಕೆಲವು ದೊಡ್ಡ ಕೈಗಾರಿಕೋದ್ಯಮಿಗಳಿಗೆ ನಿರಂತರವಾಗಿ ಮಾರಾಟ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

PC: Joint Action Committee – BHU/ FACEBOOK

ಈ ಕುರಿತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಅವರ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿಎಸ್‌ಟಿ, ಮುಂದಾಲೋಚನೆಯಿಲ್ಲದ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಇದನ್ನು ಒಪ್ಪಿಕೊಂಡು ಸರಿಪಡಿಸಬೇಕಾದ ಸರ್ಕಾರ ಮತ್ತೆ ಜಾತಿ, ಧರ್ಮಗಳ ಹೆಸರಿನಲ್ಲಿ ಯುವ ಜನರನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿದೆ. ಆದರೆ ಯುವಜನರು ಇದರಿಂದ ರೋಸಿಹೋಗಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮೋದಿ ವಿಡಿಯೋಗಳಿಗೆ ಡಿಸ್‌ಲೈಕ್ ಒತ್ತುತ್ತಿದ್ದಾರೆ” ಎಂದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳದೇ, ವೈದ್ಯರು ಮತ್ತು ಇತರರಿಗೆ ಸಹಾಯ ಮಾಡದೇ ಕೇವಲ ತಟ್ಟೆ ಲೋಟ ಬಡಿಯಿರಿ ಎಂದರು ಪ್ರಧಾನಿ. ಆದರೆ ಕೊರೊನಾ ಜಾಸ್ತಿ ಆಗಿದೆ. ಅದೇ ರೀತಿ ನಾವು ತಟ್ಟೆ ಲೋಟ ಬಡಿಯುವುದರಿಂದ ಉದ್ಯೋಗ ಜಾಸ್ತಿಯಾಗುವುದಿಲ್ಲ ಬದಲಿಗೆ ಸರ್ಕಾರ ಇದರಿಂದ ಎಚ್ಚೆತ್ತುಕೊಳ್ಳಬೇಕು. ಆದರೆ ಅವೈಜ್ಞಾನಿಕವಾಗಿ ಚಿಂತಿಸುವ ಸರ್ಕಾರಕ್ಕೆ ಯುವಜನರು ತಟ್ಟೆ ಲೋಟ ಬಡಿಯುವ ಮೂಲಕ ಅವೈಜ್ಞಾನಿಕ ರೀತಿಯಲ್ಲಿ ಎದುರೇಟು ನೀಡುತ್ತಿದ್ದಾರೆ. ಈಗಲಾದರು ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಸರೋವರ್ ತಿಳಿಸಿದ್ದಾರೆ.

ಯುವಸಮೂಹ ಉದ್ಯೋಗಕ್ಕಾಗಿ ಪಟ್ಟುಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದಾರೆ. ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

ಯುವ ಸಮೂಹದ ಈ ಪ್ರಯತ್ನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಿನ ದಿನಕ್ಕೂ ನಿರುದ್ಯೋಗ ಹೆಚ್ಚಾಗುತ್ತಿದೆ. ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಭಟನೆ, ವಿಭಿನ್ನ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡರೂ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...