ಬ್ಯಾಂಕಾಕ್‌ನ ಉಪನಗರದಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶಾಲಾ ಪ್ರವಾಸಕ್ಕಾಗಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜಧಾನಿಯ ಉತ್ತರದ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸಾರಿಗೆ ಸಚಿವ ಸೂರ್ಯ ಜುಂಗ್ರುಂಗ್ರುಂಗ್‌ಕಿಟ್ ಘಟನಾ ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಹೇಳಿದರು. ಆದರೆ, ಬದುಕುಳಿದವರ ಸಂಖ್ಯೆಯನ್ನು ಆಧರಿಸಿ, 25 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಅಂದಾಜು ಸಂಖ್ಯೆ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳಲ್ಲಿ, ಇಡೀ ಬಸ್ ಬೆಂಕಿಯಲ್ಲಿ ಉರಿಯುತ್ತಿರುವುದನ್ನು ಕಾಣಬಹುದು. ರಸ್ತೆ ಮಧ್ಯೆ ಬೆಂಕಿಗೆ ಆಹುತಿಯಾಗಿರುವ ಬಸ್‌ನಿಂದ ದೊಡ್ಡ ಮಟ್ಟದಲ್ಲಿ ಕಪ್ಪು ಹೊಗೆ ಕಾಣಿಸಿಕೊಂಡಿದೆ. ಘಟನೆಯಲ್ಲಿ ಮೃಪಟ್ಟ ವಿದ್ಯಾರ್ಥಿಗಳ ವಯಸ್ಸು ಮತ್ತು ಇತರ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಒಂದು ಟೈರ್ ಸ್ಫೋಟಗೊಂಡ ನಂತರ ಮತ್ತು ವಾಹನವು ರಸ್ತೆಯ ತಡೆಗೋಡೆಗೆ ಉಜ್ಜಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಘಟನಾಸ್ಥಳದಲ್ಲಿದ್ದ ರಕ್ಷಣಾ ತಂಡ ತಿಳಿಸಿದೆ.
ಇದನ್ನೂ ಓದಿ; ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ; ಮುಷ್ಕರ ಪುನರಾರಂಭಿಸಿದ ಪಶ್ಚಿಮ ಬಂಗಾಳದ ಕಿರಿಯ ವೈದ್ಯರು


