Homeಮುಖಪುಟಬಾಂಗ್ಲಾದೇಶ: ರೈಲು ದುರಂತದಲ್ಲಿ ಕನಿಷ್ಠ 20 ಜನ ಸಾವು, ಹಲವರಿಗೆ ಗಾಯ

ಬಾಂಗ್ಲಾದೇಶ: ರೈಲು ದುರಂತದಲ್ಲಿ ಕನಿಷ್ಠ 20 ಜನ ಸಾವು, ಹಲವರಿಗೆ ಗಾಯ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 20 ಜನ ಮೃತಪಟ್ಟಿದ್ದಾರೆ, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕಿಶೋರ್‌ಗಂಜ್‌ನಿಂದ ಢಾಕಾಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ಸರಕು ಸಾಗಣೆ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯನ್ನು ಗಮನಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

”ಈ ವರೆಗೂ 20 ಶವಗಳು ಪತ್ತೆಯಾಗಿವೆ. ಹಲವರು ಗಾಯಗೊಂಡಿದ್ದಾರೆ” ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್‌ಪಿ ಗೆ ತಿಳಿಸಿದ್ದಾರೆ.

ರಾಜಧಾನಿ ಢಾಕಾದಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಕಿಶೋರಗಂಜ್ ಜಿಲ್ಲೆಯ ಭೈರಬ್ ಪ್ರದೇಶದಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ (ಸ್ಥಳೀಯ ಕಾಲಮಾನ) ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಢಾಕಾಕ್ಕೆ ಹೋಗುವ ಎಗರೋಸಿಂದೂರ್ ಗೋಧೂಲಿ ಎಕ್ಸ್‌ಪ್ರೆಸ್‌ನ ಹಿಂಭಾಗದ ಕೋಚ್‌ಗಳಿಗೆ, ಚಟ್ಟೋಗ್ರಾಮ್ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆ ರೈಲು ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ ಎಂದು, ಅಲ್ಲಿನ ಅಧಿಕಾರಿ ಸಿರಾಜುಲ್ ಇಸ್ಲಾಂ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಅಧಿಕಾರಿಗಳು ಮೂರು ಪ್ರಯಾಣಿಕರ ಬೋಗಿಗಳನ್ನು ಮೇಲಕ್ಕೆತ್ತಿದ್ದಾರೆ. ಸುಮಾರು 100 ಗಾಯಗಳನ್ನು ರಕ್ಷಿಸಿ ವಿವಿಧ ಆರೋಗ್ಯ ಕೇಂದ್ರಗಳಿಗೆ ರವಾನಿಸಲಾಗಿದೆ. ಹಳಿ ತಪ್ಪಿರುವ ಬೋಗಿಗಳ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾದೇಶ ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ಮಾಧ್ಯಮ ಮುಖ್ಯಸ್ಥ ಷಹಜಹಾನ್ ಸಿಕ್ದರ್ ಮಾತನಾಡಿ, ”ಅಗ್ನಿಶಾಮಕ ಸೇವೆಯ ಹನ್ನೆರಡು ಘಟಕಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಪ್ರಾಥಮಿಕ ವರದಿಯ ಪ್ರಕಾರ ಸರಕು ರೈಲು ಹಿಂದಿನಿಂದ ಎಗಾರೊ ಸಿಂದೂರ್‌ಗೆ ಡಿಕ್ಕಿ ಹೊಡೆದು ಎರಡು ಬೋಗಿಗಳಿಗೆ ಬಡಿದಿದೆ” ಎಂದು ಢಾಕಾ ರೈಲ್ವೇ ಪೊಲೀಸ್ ಅಧೀಕ್ಷಕ ಅನೋವರ್ ಹೊಸೈನ್ ಹೇಳಿದ್ದಾರೆ ಎಂದು bdnews24 ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಇದನ್ನೂ ಓದಿ: ಬಿಹಾರ: ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು: ನಾಲ್ವರು ಸಾವು, 100 ಮಂದಿಗೆ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...