Homeಮುಖಪುಟಪ್ರತಿಪಕ್ಷಗಳ ಬಹಿಷ್ಕಾರದ ನಡುವೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ

ಪ್ರತಿಪಕ್ಷಗಳ ಬಹಿಷ್ಕಾರದ ನಡುವೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ

- Advertisement -
- Advertisement -

ಪ್ರಬಲ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ(ಬಿಎನ್‌ಪಿ) ಮತ್ತು ಅದರ ಬೆಂಬಲಿಗ ಪಕ್ಷಗಳು ಚುನಾವಣೆ ಬಹಿಷ್ಕರಿಸಿರುವ ನಡುವೆಯೂ ಇಂದು (ಜ.7) ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ.

ಬೆಳಿಗ್ಗೆ 8 ಗಂಟೆಗೆ ಮತದಾನ ಪ್ರಾರಂಭಗೊಂಡಿದ್ದು, ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ. ಎಲೆಕ್ಟ್ರಾನಿಕ್ ಮತಯಂತ್ರ ಸಮಸ್ಯೆಯಿಂದ ರಾಜಧಾನಿ ಢಾಕಾದಿಂದ 70 ಕಿಲೋ ಮೀಟರ್ (43.5 ಮೈಲಿ) ದೂರದಲ್ಲಿರುವ ನರಸಿಂಗಡಿಯ ಕೇಂದ್ರ ಜಿಲ್ಲೆಯ ಮತದಾನ ಕೇಂದ್ರದಲ್ಲಿ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ದೇಶದಾದ್ಯಂತ ಮತದಾನ ಮುಂದುವರೆದಿದೆ.

ಹಾಲಿ ಪ್ರಧಾನಿ ಶೇಖ್ ಹಸೀನಾ ಐದನೇ ಭಾರೀ ಆಯ್ಕೆಯಾಗುವ ಉತ್ಸಾಹದಲ್ಲಿದ್ದು, ಅವರ ಅವಾಮಿ ಲೀಗ್ ನೇತೃತ್ವದ ಮೈತ್ರಿಕೂಟ ಐದನೇ ಭಾರೀ ಸರ್ಕಾರ ರಚಿಸುವ ಎಲ್ಲಾ ಸಾಧ್ಯತೆಗಳಿವೆ.

ಚುನಾವಣೆ ಬಹಿಷ್ಕರಿಸಿರುವ ಬಿಎನ್‌ಪಿ ಶನಿವಾರದಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪರಿಣಾಮ ದೇಶದ ವಿವಿದೆಡೆ ಹಿಂಸಾಚಾರ ನಡೆದಿದೆ. ಎಲ್ಲೆಡೆ ಸೇನೆ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಚುನಾವಣೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಬಿಎನ್‌ಪಿ ನೇತೃತ್ವದಲ್ಲಿ ಪ್ರತಿಪಕ್ಷಗಳು ಚುನಾವಣೆ ಬಹಿಷ್ಕರಿಸಿವೆ. ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ದುರ್ಬಲ ಅಭ್ಯರ್ಥಿಗಳನ್ನು ತಮ್ಮ ಅಭ್ಯರ್ಥಿಗಳ ವಿರುದ್ದ ಸ್ವತಂತ್ರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಿ ಜನರಿಗೆ ಮೋಸ ಮಾಡ್ತಿದೆ ಎಂದು ಬಿಎನ್‌ಪಿ ಆರೋಪಿಸಿದೆ. ಈ ಆರೋಪವನ್ನು ಅವಾಮಿ ಲೀಗ್ ತಳ್ಳಿ ಹಾಕಿದೆ.

ಕಳೆದ ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದಿತ್ತು. ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಚುನಾವಣೆಯ ಮೇಲ್ವಿಚಾರಣೆಗಾಗಿ ಉಸ್ತುವಾರಿ ಸರ್ಕಾರವನ್ನು ರಚಿಸಲು ಒತ್ತಾಯಿಸಿ ಹಮ್ಮಿಕೊಂಡಿದ್ದ ಬೃಹತ್ ಸರ್ಕಾರಿ ವಿರೋಧಿ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು.

ಪ್ರಧಾನಿ ಹಸೀನಾ ಅವರ ಆಡಳಿತವು ಚುನಾವಣೆಯ ಉಸ್ತುವಾರಿಯಾಗಿ ಹಂಗಾಮಿ ಸರ್ಕಾರವನ್ನು ರಚಿಸಲು ಯಾವುದೇ ಸಾಂವಿಧಾನಿಕ ಅವಕಾಶವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read