Homeಅಂತರಾಷ್ಟ್ರೀಯಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ - 15 ಮಂದಿ ಸಾವು, 400 ಮಂದಿ ಕಣ್ಮರೆ

ಬಾಂಗ್ಲಾದೇಶ: ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ – 15 ಮಂದಿ ಸಾವು, 400 ಮಂದಿ ಕಣ್ಮರೆ

- Advertisement -
- Advertisement -

ದಕ್ಷಿಣ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 400 ಮಂದಿ ಕಾಣೆಯಾಗಿದ್ದಾರೆ. ಸಾವಿರಾರು ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾಕ್ಸ್ ಬಜಾರ್‌ನ ಬಾಲುಖಾಲಿ ಕ್ಯಾಂಪ್‌ನ ನಿವಾಸಿಯೊಬ್ಬರು ಚಿತ್ರೀಕರಿಸಿದ ವೀಡಿಯೊದಲ್ಲಿ ಈ ಭಯಂಕರ ದೃಶ್ಯಗಳು ಕಾಣಿಸಿಕೊಂಡಿವೆ. ಧಗಧಗಿಸುತ್ತಿರುವ ಬೆಂಕಿಯ ಮಧ್ಯೆ ಜನರು ತಪ್ಪಿಸಿಕೊಳ್ಳಲು ಮತ್ತು ತಮ್ಮ ವಸ್ತುಗಳನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ.

“ಅಗ್ನಿಶಾಮಕ ದಳಗಳು, ರಕ್ಷಣಾ ದಳ ತಂಡಗಳು ಮತ್ತು ಸ್ವಯಂಸೇವಕರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಮತ್ತಷ್ಟು ಹರಡುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಾಕ್ಸ್ ಬಜಾರ್‌ನಲ್ಲಿ ಯು.ಎನ್. ನಿರಾಶ್ರಿತರ ಸಂಸ್ಥೆ UNHCR ವಕ್ತಾರ ಲೂಯಿಸ್ ಡೊನೊವನ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

“ನಮ್ಮಲ್ಲಿ ಇನ್ನೂ 400 ಜನರು ಕಾಣಿಸುತ್ತಿಲ್ಲ, ಬಹುಶಃ ಎಲ್ಲೋ ಅವಶೇಷಗಳ ಅಡಿಯಲ್ಲಿದ್ದಾರೆ” ಎಂದು  ಹೇಳಿದ್ದಾರೆ. ಯುಎನ್‌ಹೆಚ್‌ಸಿಆರ್‌ ಪ್ರಕಾರ 560 ಜನರು ಗಾಯಗೊಂಡಿದ್ದಾರೆ ಮತ್ತು 45,000 ಜನರು ಇಲ್ಲಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ

ಕೃಪೆ: PressTV

ದಕ್ಷಿಣ ಬಾಂಗ್ಲಾದೇಶದ ಮುಖ್ಯ ಶಿಬಿರಗಳಲ್ಲಿ ಒಂದು ದಶಲಕ್ಷಕ್ಕೂ ಹೆಚ್ಚು ರೋಹಿಂಗ್ಯಾಗಳು ವಾಸಿಸುತ್ತಿದ್ದಾರೆ. ಮಿಲಿಟರಿ ನೇತೃತ್ವದ ದೌರ್ಜನ್ಯದಿಂದ 2017 ರಲ್ಲಿ ಮ್ಯಾನ್ಮಾರ್‌ನಿಂದ ಪಲಾಯನಗೈದ ಬಹುಪಾಲು ಜನರನ್ನು “ಜನಾಂಗೀಯ ಉದ್ದೇಶದಿಂದ” ಹತ್ಯೆ ಮಾಡಿದ್ದಾರೆ ಎಂದು ಯುಎನ್ ತನಿಖಾಧಿಕಾರಿಗಳು  ಹೇಳಿದ್ದಾರೆ. ಆದರೆ ಮ್ಯಾನ್ಮಾರ್ ಇದನ್ನು ನಿರಾಕರಿಸಿದೆ.

“ಬೆಂಕಿ ಎಷ್ಟು ಬೇಗನೆ ಹರಡಿತು ಎಂದರೆ, ಏನಾಯಿತು ಎಂದು ತಿಳಿಯುವ ಮೊದಲೇ ಅದು ನಮ್ಮ ಮನೆಯನ್ನು ಆವರಿಸಿತ್ತು. ಜನರು ಕಿರುಚುತ್ತಾ ಓಡುತ್ತಿದ್ದರು. ಮಕ್ಕಳು ಕೂಡ ಮನೆ ಬಿಟ್ಟು ಓಡುತ್ತಾ, ತಮ್ಮ ಕುಟುಂಬಕ್ಕಾಗಿ ಅಳುತ್ತಿದ್ದರು” ಎಂದು ಸೇವ್ ದಿ ಚಿಲ್ಡ್ರನ್ ಸ್ವಯಂಸೇವಕ ತೆಯೆಬಾ ಬೇಗಮ್ ಹೇಳಿದ್ದಾರೆ.

PC: Reuters

ಕಾಣೆಯಾಗಿರುವವರನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರುವ ಅಂಶವನ್ನು ತನಿಖೆ ಮಾಡುತ್ತಿದ್ದೇವೆ ಎಂದು ಬಾಂಗ್ಲಾದೇಶದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...