Homeಅಂತರಾಷ್ಟ್ರೀಯಬಾಂಗ್ಲಾದೇಶ: ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಮುಂದಾದ ಸರ್ಕಾರ

ಬಾಂಗ್ಲಾದೇಶ: ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಮುಂದಾದ ಸರ್ಕಾರ

ಬಾಂಗ್ಲಾದೇಶದ ನೊಖಾಲಿ ಎಂಬಲ್ಲಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆ ಬೆಳಕಿಗೆ ಬಂದು, ದೇಶಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾದ ಹಿನ್ನೆಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

- Advertisement -
- Advertisement -

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಘಟನೆಗಳ ಬಗ್ಗೆ ದಕ್ಷಿಣ ಏಷ್ಯಾದ ದೇಶದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆಗೆ ಅವಕಾಶ ನೀಡುವ ತಿದ್ದುಪಡಿಯನ್ನು ಬಾಂಗ್ಲಾದೇಶ ಸರ್ಕಾರ ಅನುಮೋದಿಸಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಸಾಪ್ತಾಹಿಕ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದಬ್ಬಾಳಿಕೆ ತಡೆ ಕಾಯ್ದೆ-2000ಕ್ಕೆ ತಿದ್ದುಪಡಿಯನ್ನು ಅನುಮೋದಿಸಲಾಗಿದೆ ಎಂದು ಕ್ಯಾಬಿನೆಟ್ ಕಾರ್ಯದರ್ಶಿ ಖಾಂಡ್ಕರ್ ಅನ್ವರುಲ್ ಇಸ್ಲಾಂ ತಿಳಿಸಿದ್ದಾರೆ.

ಈ ಮೂಲಕ ಬಾಂಗ್ಲಾದೇಶದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ವಿಧಿಸಲಾಗುತ್ತಿದ್ದ ಜೀವಾವಧಿ ಶಿಕ್ಷೆಗೆ ತಿದ್ದುಪಡಿ ಬರಲಿದ್ದು, ಇನ್ನು ಮುಂದೆ ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸದ್ಯ ಸರ್ಕಾರದ ಈ ಹೊಸ ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ ಸಿಗಬೇಕಿದೆ. ಅ.13 ರಂದು ರಾಷ್ಟ್ರಪತಿಗಳು ಅನುಮೋದನೆ ನೀಡುವ ನಿರೀಕ್ಷೆ ಇದೆ. ಬಳಿಕ ಹೊಸ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಿದ್ದೇವೆ ಎಂದು ಬಾಂಗ್ಲಾದ ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಿಸುಲ್​ ಹುಕ್​ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಬಾಂಗ್ಲಾದೇಶದ ನೊಖಾಲಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಕ್ಟೋಬರ್ 4 ರಂದು ಹಲ್ಲೆಯ ವಿಡಿಯೋ ವೈರಲ್ ಆಗಿದ್ದರಿಂದ ಈ ಘಟನೆ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಪೊಲೀಸರು ಎಂಟು ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ಘಟನೆಯನ್ನು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯದ ವಿರುದ್ಧ ಬಾಂಗ್ಲಾದೇಶ ಇಂತಹ ದೊಡ್ಡ ಪ್ರಮಾಣದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದ್ದು ಇದೇ ಮೊದಲು.

ಐನ್ ಓ ಸಲೀಶ್ ಕೇಂದ್ರ (Ain o Salish Kendra) ಎಂಬ ಮಾನವ ಹಕ್ಕುಗಳ ಗುಂಪು ಹೇಳುವಂತೆ ಈ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಸುಮಾರು 1,000 ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ. ಅವರಲ್ಲಿ ಐದನೇ ಒಂದು ಭಾಗ ಸಾಮೂಹಿಕ ಅತ್ಯಾಚಾರಗಳು. 975 ಅತ್ಯಾಚಾರ ಸಂತ್ರಸ್ತರಲ್ಲಿ 43 ಮಂದಿ ಹಲ್ಲೆಗೊಳಗಾದ ನಂತರ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದೆ.

ಇದನ್ನೂ ಓದಿ: ಕೇವಲ ಕ್ಯಾಂಡಲ್‌ ಸುಡುವುದಲ್ಲ, ಅತ್ಯಾಚಾರಿಗಳನ್ನೂ ಸುಡುವುದಲ್ಲ: ಸುಡಬೇಕಾದ್ದು…

ಇನ್ನೊಂದೆಡೆ ಪ್ರಗತಿಪರರು ಮತ್ತು ಹಲವು ಮಹಿಳಾ ಸಂಘಟನೆಗಳು ಅತ್ಯಾಚಾರಕ್ಕೆ ಮರಣದಂಡೆನೆ ಪರಿಹಾರವಲ್ಲ ಎಂದು ವಾದಿಸುತ್ತಿವೆ. “ಕೇವಲ ವಿಕೃತ ಲೈಂಗಿಕತೆಯನ್ನು ಮಾರುತ್ತಿರುವ ಕಂಪೆನಿಗಳಿರುವಾಗ ವ್ಯಕ್ತಿಗಳನ್ನಷ್ಟೇ ಮರಣದಂಡನೆಗೆ ದೂಡುವುದು ಪರಿಹಾರವಲ್ಲ ಎಂಬುದು ಮಾತ್ರವಲ್ಲ; ಬದಲಿಗೆ ಅಂತಹ ಶಿಕ್ಷೆ ಕೊಡುವ ದೇಶಗಳಲ್ಲೂ ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ಹಿಂಸಾಚಾರಗಳು ಹಲವು ವಿಕೃತ ರೂಪಗಳಲ್ಲಿ ಇಂದಿಗೂ ಚಾಲ್ತಿಯಲ್ಲಿವೆ” ಎಂಬುದು ಅವರ ವಾದ.


ಇದನ್ನೂ ಓದಿ: ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...