Homeಮುಖಪುಟಬಾಂಗ್ಲಾದೇಶ: ನೋಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಯೂನುಸ್‌ಗೆ ಜೈಲು

ಬಾಂಗ್ಲಾದೇಶ: ನೋಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಯೂನುಸ್‌ಗೆ ಜೈಲು

- Advertisement -
- Advertisement -

ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮುಹಮ್ಮದ್ ಯೂನುಸ್‌ ಅವರನ್ನು ಕಾರ್ಮಿಕ ಕಾನೂನು ಉಲ್ಲಂಘಿಸಿದ ಪ್ರಕರಣದಲ್ಲಿ ದೋಷಿ ಎಂದು ಬಾಂಗ್ಲಾದೇಶದ ನ್ಯಾಯಾಲಯ ಘೋಷಿಸಿದ್ದು, ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

“ಯೂನುಸ್‌ ಅವರ ವಿರುದ್ಧದ ಕಾರ್ಮಿಕ ಕಾನೂನು ಉಲ್ಲಂಘನೆ ಆರೋಪ ಸಾಬೀತಾಗಿದೆ” ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶೆ ಶೇಖ್ ಮೆರಿನಾ ಸುಲ್ತಾನಾ ತೀರ್ಪು ಪ್ರಕಟಿಸುವಾಗ ಹೇಳಿದ್ದಾರೆ.

83 ವರ್ಷದ ಯೂನುಸ್‌ ಅವರು ತಮ್ಮ ಕಿರು ಬಂಡವಾಳ ಬ್ಯಾಂಕ್ ಮೂಲಕ ಲಕ್ಷಾಂತರ ಜನರಿಗೆ ಬಡ ತನದಿಂದ ಹೊರಬರಲು ಸಹಾಯ ಮಾಡಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದಿದ್ದರು. ಯೂನುಸ್‌ ಅವರೊಂದಿಗೆ ವೈಮನಸ್ಸು ಹೊಂದಿದ್ದ ಪ್ರಧಾನಿ ಶೇಖ್ ಹಸೀನಾ ಅವರು, ಅರ್ಥಶಾಸ್ತ್ರಜ್ಞ ಬಡವರ ‘ರಕ್ತ ಹೀರುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಪ್ರಸ್ತುತ ಯೂನುಸ್‌ ಅವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿರುವುದನ್ನು ಅವರ ಬೆಂಬಲಿಗರು ‘ರಾಜಕೀಯ ಪ್ರೇರಿತ’ ಎಂದು ಎಂದು ಹೇಳಿದ್ದಾರೆ.

ಪ್ರೊ. ಯೂನುಸ್‌ ಅವರೊದಿಗೆ ಗ್ರಾಮೀಣ ಟೆಲಿಕಾಂನ ಮೂವರು ಸಹೋದ್ಯೋಗಿಗಳನ್ನು ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನಾಲ್ವರಿಗೆ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

“ಯೂನುಸ್‌ ಅವರಿಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಈ ಶಿಕ್ಷೆಯ ಅವಧಿ ವಿಸ್ತರಣೆಯಾಗಬಹುದು. ಯೂನುಸ್‌ ವಿರುದ್ದ ಕಾರ್ಮಿಕ ಕಾನೂನು ಉಲ್ಲಂಘನೆಯ 100ಕ್ಕೂ ಹೆಚ್ಚು ಪ್ರಕರಣಗಳಿವೆ” ಎಂದು ಕಾರ್ಮಿಕ ಪರ ವಕೀಲ ಖುರ್ಷಿದ್ ಆಲಂ ಖಾನ್ ಹೇಳಿದ್ದಾರೆ.

ತನ್ನ ಕಂಪನಿಯ ಸಿಬ್ಬಂದಿಗೆ ಹಣ ಪಾವತಿಸದ ಪ್ರಕರಣದಲ್ಲಿ ಯೂನುಸ್‌ ಅವರಿಗೆ ಜೈಲು ಶಿಕ್ಷೆಯಾಗಿದೆ. ಈ ಕುರಿತು ಮಾತನಾಡಿರುವ ಅವರ ಪರ ವಕೀಲ ಖಾಜಾ ತನ್ವೀರ್, “ಈ ತೀರ್ಪು ಆಧಾರ ರಹಿತ, ಸುಳ್ಳು ಮತ್ತು ಕೆಟ್ಟ ಉದ್ದೇಶದಿಂದ ಕೂಡಿದೆ” ಎಂದಿದ್ದಾರೆ.

ಯೂನುಸ್‌ ಅವರನ್ನು ಪ್ರಧಾನಿ ಶೇಖ್ ಹಸೀನಾ ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದರು. ಅವರ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು. ಯೂನುಸ್‌ ವಿರುದ್ದ ಹಲವು ಪ್ರಕರಣಗಳು ದಾಖಲಾಗಿತ್ತು. ಈ ಬೆಳವಣಿಗೆಯನ್ನು ಜಾಗತಿಕ ಪ್ರಮುಖರಾದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ವಿಶ್ವ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್ ಸೇರಿದಂತೆ ಅನೇಕರು ಖಂಡಿಸಿದ್ದರು.

ಯೂನುಸ್ ಅವರ ವಿರುದ್ದದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 160 ಜಾಗತಿಕ ಗಣ್ಯರು ಬಹಿರಂಗ ಪತ್ರ ಬರೆದಿದ್ದರು. ಇದೀಗ ಯೂನುಸ್‌ ಅವರಿಗೆ ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...