Homeಅಂತರಾಷ್ಟ್ರೀಯಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

- Advertisement -
- Advertisement -

ಬಾಂಗ್ಲಾದೇಶದ ದೇವಸ್ಥಾನವೊಂದಕ್ಕೆ ಪ್ರಧಾನಿ ಮೋದಿ ಉಡುಗೊರೆಯಾಗಿದ್ದ ಕಾಳಿ ದೇವಿಯ ಕಿರೀಟವನ್ನು ದಸರಾ ಆಚರಣೆಯ ವೇಳೆ ಕಳವು ಮಾಡಲಾಗಿದ್ದು, ಇದನ್ನು ಭಾರತ ಶನಿವಾರ ಖಂಡಿಸಿದೆ. ಇದು “ದೇಶದ ವ್ಯವಸ್ಥಿತ ಅಪವಿತ್ರಗೊಳಿಸುವಿಕೆ” ಎಂದು ಕರೆದಿದೆ. ಬಾಂಗ್ಲಾದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾರ್ಚ್ 2021 ರಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಸತ್ಖೈರಾದ ಜೆಶೋರೇಶ್ವರಿ ದೇವಸ್ಥಾನದಲ್ಲಿರುವ ಹಿಂದೂ ದೇವತೆಗೆ ಬೆಳ್ಳಿ, ಚಿನ್ನದ ಲೇಪಿತ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದಸರಾ ಆಚರಣೆ ನಡೆಯುತ್ತಿರುವ ವೇಳೆ ಕಿರೀಟವನ್ನು ಕಳ್ಳತನ ಮಾಡಲಾಗಿದ್ದು, ಕಳ್ಳತನ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಢಾಕಾದ ತಂತಿಬಜಾರ್‌ನಲ್ಲಿನ ಪೂಜಾ ಮಂಟಪದ ಮೇಲಿನ ದಾಳಿ ಮತ್ತು ಸತ್ಖೈರಾದ ಪೂಜ್ಯ ಜೇಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನವನ್ನು ನಾವು ಗಂಭೀರ ಕಳವಳದಿಂದ ಗಮನಿಸಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಬಾಂಗ್ಲಾದೇಶ

“ಇವು ಶೋಚನೀಯ ಘಟನೆಗಳಾಗಿದ್ದು, ಅವು ವ್ಯವಸ್ಥಿತ ಮಾದರಿಯಲ್ಲಿ ನಡೆಯುತ್ತಿವೆ. ಈ ಅಪವಿತ್ರಗೊಳಿಸುವಿಕೆ ಮತ್ತು ದೇವಾಲಯಗಳು ಮತ್ತು ದೇವತೆಗಳಿಗೆ ಹಾನಿಯನ್ನು ನಾವು ಹಲವಾರು ದಿನಗಳಿಂದ ನೋಡಿದ್ದೇವೆ” ಎಂದು ಸರ್ಕಾರ ಹೇಳದೆ.

“ವಿಶೇಷವಾಗಿ ಇಂತಹ ಮಂಗಳಕರ ಹಬ್ಬದ ಸಮಯದಲ್ಲಿ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬಾಂಗ್ಲಾದೇಶ ಸರ್ಕಾರಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜೇಶೋರೇಶ್ವರಿ ದೇವಸ್ಥಾನವು ಭಾರತ ಮತ್ತು ನೆರೆಯ ದೇಶಗಳಲ್ಲಿ ಹರಡಿರುವ 51 ಶಕ್ತಿ ಪೀಠಗಳಲ್ಲಿ ಒಂದಾಗಿದೆ.

ಇದನ್ನೂಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಶುಕ್ರವಾರ ಢಾಕಾದ ತಂತಿಬಜಾರ್ ಪ್ರದೇಶದಲ್ಲಿ ದುರ್ಗಾ ಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆಯನ್ನು ಸಚಿವಾಲಯ ಹೈಲೈಟ್ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದರು.

ದಸರಾ ಆಚರಣೆಯ ವಿರುದ್ಧ ಆರಂಭದಲ್ಲಿ ಹಿಂದೂ ಸಮುದಾಯಕ್ಕೆ ಬಹುಸಂಖ್ಯಾತ ಸಮುದಾಯದಿಂದ ಬೆದರಿಕೆಗಳು ಬಂದಿದ್ದವು. ಹಿಂದೂಗಳು ತಮ್ಮ ಹಬ್ಬವನ್ನು ಬಹುಸಂಖ್ಯಾತ ಮುಸ್ಲಿಮರ ಭಾವನೆಗಳನ್ನು ಉಲ್ಲಂಘಿಸುವುದರಿಂದ ತಮ್ಮ ಹಬ್ಬವನ್ನು ಬಹಿರಂಗವಾಗಿ ಆಚರಿಸದಂತೆ ಎಚ್ಚರಿಕೆ ನೀಡಲಾಗಿತ್ತು ಎಂದು ವರದಿಯಾಗಿದೆ.

“ಅಕ್ಟೋಬರ್ 1 ರಿಂದ, ನಡೆಯುತ್ತಿರುವ ದಸರಾ ಆಚರಣೆಗೆ ಸಂಬಂಧಿಸಿದ 35 ಘಟನೆಗಳು ದೇಶಾದ್ಯಂತ ಸಂಭವಿಸಿವೆ. ಒಟ್ಟು 11 ಪ್ರಕರಣಗಳನ್ನು ದಾಖಲಿಸಲಾಗಿದ್ದು, 24 ಸಾಮಾನ್ಯ ಡೈರಿಗಳು (ಜಿಡಿ) ದಾಖಲಿಸಲಾಗಿದೆ ಮತ್ತು 17 ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಎಂಡಿ ಮೊಯಿನುಲ್ ಇಸ್ಲಾಂ ಹೇಳಿದ್ದಾರೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ವಿಡಿಯೊ ನೋಡಿ: ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಸಿದವನಿಗೆ ಪೊಲೀಸರಿಂದ ಗುಂಡೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...