Homeಮುಖಪುಟಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

- Advertisement -
- Advertisement -

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ.

ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಾಗಿರುವ ಅವರು ವಾಸಿಸುತ್ತಿದ್ದ ಮನೆ ‘ಧನ್ಮೊಂಡಿ -32’ ಕಡೆಗೆ ಬುಲ್ಡೋಝರ್ ಮೆರವಣಿಗೆಗೆ ಕರೆ ನೀಡಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಪ್ರತಿಭಟನೆ ಪ್ರಾರಂಭವಾಯಿತು ಎಂದು ಬಾಂಗ್ಲಾದ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ. ಪ್ರತಿಭಟನಾಕಾರರು ಏಕಾಏಕಿ ‘ಧನ್ಮೊಂಡಿ -32’ರ ಕಡೆಗೆ ಮೆರವಣಿಗೆ ಘೋಷಿಸಿದರು ಎಂದಿದೆ.

ಪ್ರತಿಭಟನಾಕಾರರು ಪ್ರವೇಶ ದ್ವಾರವನ್ನು ಮುರಿದು ‘ಧನ್ಮೊಂಡಿ -32’ರ ಆವರಣಕ್ಕೆ ನುಗ್ಗಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವಾರು ವಿಡಿಯೋಗಳಲ್ಲಿ ಅವರು ಮುಜಿಬುರ್ ರೆಹಮಾನ್ ನಿವಾಸಕ್ಕೆ ಬೆಂಕಿ ಹಚ್ಚುವುದನ್ನು ನೋಡಬಹುದು. ಪ್ರತಿಭಟನಾಕಾರರ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸಲುವಾಗಿ ಅವರ ಮನವೊಲಿಸಲು ಸೇನೆಯು ಸ್ಥಳಕ್ಕೆ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಪಿಟಿಐ ವರದಿ ವಿವರಿಸಿದೆ.

560 ಜನರ ಸಾವಿಗೆ ಕಾರಣವಾದ ಅವಾಮಿ ಲೀಗ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯ ನಂತರ, ಆಗಸ್ಟ್ 5, 2024 ರಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಈಗಲೂ ಅವರು ಭಾರತದಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಹಸೀನಾ 16 ವರ್ಷಗಳ ಕಾಲ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಹಸೀನಾ ಅವರ ಪಲಾಯನದ ಬಳಿಕ ಅವಾಮಿ ಲೀಗ್ ಸರ್ಕಾರ ಪತನಗೊಂಡಿದೆ. ನಂತರ ಮಧ್ಯಂತರ ಸರ್ಕಾರ ರಚನೆಯಾಗಿದೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ಅವರು ಆಗಸ್ಟ್ 8ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬುಧವಾರ ಅವಾಮಿ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಛಾತ್ರ ಲೀಗ್ ಆಯೋಜಿಸಿದ್ದ ಭಾಷಣದಲ್ಲಿ, ಹಸೀನಾ ಅವರು ಬಾಂಗ್ಲಾದೇಶದ ನಾಗರಿಕರು ಪ್ರಸ್ತುತ ಆಡಳಿತದ ವಿರುದ್ಧ ಪ್ರತಿರೋಧವನ್ನು ಸಂಘಟಿಸುವಂತೆ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬಲಿಕೊಟ್ಟು ನಾವು ಗಳಿಸಿದ ರಾಷ್ಟ್ರಧ್ವಜ, ಸಂವಿಧಾನ ಮತ್ತು ಸ್ವಾತಂತ್ರ್ಯವನ್ನು ಬುಲ್ಡೋಝರ್ ಬಳಸಿ ನಾಶಮಾಡುವ ಶಕ್ತಿ ಅವರಿಗೆ ಇನ್ನೂ ಬಂದಿಲ್ಲ” ಎಂದು ಯೂನುಸ್ ಆಡಳಿತದ ಬಗ್ಗೆ ಹಸೀನಾ ಹೇಳಿರುವುದಾಗಿ ವರದಿ ತಿಳಿಸಿದೆ.

“ಅವರು ಕಟ್ಟಡಗಳನ್ನು ಕೆಡವಬಹುದು, ಆದರೆ ಇತಿಹಾಸವನ್ನಲ್ಲ. ಇತಿಹಾಸವು ತನ್ನ ಸೇಡನ್ನು ತೀರಿಸಿಕೊಳ್ಳಲಿದೆ ಎಂಬುವುದನ್ನು ಅವರು ನೆನಪಿನಲ್ಲಿಡಬೇಕು” ಎಂದು ಹಸೀನಾ ಹೇಳಿದ್ದಾರೆ.

ಮಂಗಳವಾರ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ ಇಂಕಿಲಾಬ್ ಮಂಚ್‌ನ ಸಂಚಾಲಕ ಮತ್ತು ಜಾತ್ಯ ನಾಗೋರಿಕ್ ಸಮಿತಿಯ ಸದಸ್ಯ ಷರೀಫ್ ಒಸ್ಮಾನ್ ಬಿನ್ ಹಾದಿ ಧನ್ಮೊಂಡಿ -32ರ ಕಡೆಗೆ ಮೆರವಣಿಗೆ ನಡೆಸಲು ಕರೆ ನೀಡಿದ್ದಾರೆ ಎಂದು ಪ್ರೋಥೋಮ್ ಅಲೋ ವರದಿ ತಿಳಿಸಿದೆ.

“ಪ್ಯಾಸಿಸಂನ ಪವಿತ್ರ ಸ್ಥಳದಿಂದ ಬಾಂಗ್ಲಾದೇಶ ಇಂದು ಮುಕ್ತಿ ಹೊಂದಲಿದೆ” ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಸಂಚಾಲಕ ಹಸ್ನತ್ ಅಬ್ದುಲ್ಲಾ ಕೂಡ ಬುಧವಾರ ಸಂಜೆ 7 ಗಂಟೆಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದರು ಎಂದು ವರದಿ ಹೇಳಿದೆ.

2024ರ ಆಗಸ್ಟ್ 5 ರಂದು ಕೂಡ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಭಾರತಕ್ಕೆ ಮರಳಿದ ಅಕ್ರಮ ವಲಸಿಗರು; ಮೊದಲ ತಂಡದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 48 ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...