Homeಮುಖಪುಟ'ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು' : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

- Advertisement -
- Advertisement -

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ ಸಿಂಧೂರ್‌ನಲ್ಲಿ ಪಾಕಿಸ್ತಾನಕ್ಕೆ ಪಾಠ ಕಲಿಸಿದಂತೆಯೇ ಅವರಿಗೂ ಪಾಠ ಕಲಿಸಬೇಕು” ಎಂದು ಹೇಳಿದ್ದಾರೆ.

ಗಾರ್ಮೆಂಟ್ಸ್ ಕಾರ್ಖಾನೆಯ ಕೆಲಸಗಾರ 27 ವರ್ಷದ ದೀಪು ಚಂದ್ರ ದಾಸ್ ಅವರನ್ನು ಬಾಂಗ್ಲಾದಲ್ಲಿ ಗುಂಪು ಹತ್ಯೆಗೈದಿರುವುದನ್ನು ಖಂಡಿಸಿ, ಡಿಸೆಂಬರ್ 22ರಿಂದ ಬಾಂಗ್ಲಾದೇಶದ ಉಪ ಹೈಕಮಿಷನ್ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಡಿಸೆಂಬರ್ 18ರಂದು ದೀಪು ಅವರನ್ನು ಬಾಂಗ್ಲಾದ ಮೆಯ್ಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪು ಹತ್ಯೆಗೈದು, ಬಳಿಕ ಅವರ ದೇಹವನ್ನು ಮರಕ್ಕೆ ತೂಗುಹಾಕಿ ಬೆಂಕಿ ಹಚ್ಚಲಾಗಿತ್ತು.

ಅಧಿಕಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಬಿಜೆಪಿ “ದ್ವೇಷ ಮತ್ತು ಅಸಹಿಷ್ಣುತೆಯನ್ನು ಒಂದು ಕಲಾರೂಪವಾಗಿ ಪರಿವರ್ತಿಸಿದೆ” ಎಂದು ಹೇಳಿದೆ.

“ಸುವೇಂದು ಅಧಿಕಾರಿ ತನ್ನ ವಿಷಪೂರಿತ ಧ್ವನಿಯಲ್ಲಿ ಮತ್ತೊಮ್ಮೆ ತನ್ನ ಫ್ಯಾಸಿಸ್ಟ್ ಕೋರೆಹಲ್ಲುಗಳನ್ನು ಹೊರತೆಗೆದು, ಇಸ್ರೇಲ್ ಗಾಝಾಗೆ ಕಲಿಸಿದಂತೆ ಭಾರತವು ಮುಸ್ಲಿಮರಿಗೆ ಪಾಠ ಕಲಿಸಬೇಕು ಎಂದು ಘೋಷಿಸುವ ಮೂಲಕ ನರಮೇಧದ ಪಿತ್ತವನ್ನು ಕಾರಿದ್ದಾರೆ. ಇದು ಬಹಿರಂಗ ದ್ವೇಷ ಭಾಷಣ, ಸಾಮೂಹಿಕ ಹತ್ಯೆ ಮತ್ತು ಜನಾಂಗೀಯ ಶುದ್ಧೀಕರಣಕ್ಕಾಗಿ ಕೊಟ್ಟ ರಕ್ತಪಿಪಾಸು ಕರೆಯಾಗಿದೆ. ಇವರ ವಿರುದ್ದ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಬಂಧಿಸಿಲ್ಲ, ಕನಿಷ್ಠ ಕಾನೂನು ಕ್ರಮ ಜರುಗಿಸಿಲ್ಲ. ಈ ಹಿಟ್ಲರ್ ವರ್ತನೆಯ ಮೇಲೆ ಯಾವುದೇ ಯುಎಪಿಎ ವಿಧಿಸಲಾಗಿಲ್ಲ” ಎಂದಿದೆ.

ಐವರು ಸದಸ್ಯರ ನಿಯೋಗದೊಂದಿಗೆ ಅಧಿಕಾರಿ ಶುಕ್ರವಾರ ಬಾಂಗ್ಲಾದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಹೊರಬಂದ ಬಳಿಕ ರಾಜತಾಂತ್ರಿಕರ ಬಳಿ ನಮ್ಮ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರವಿರಲಿಲ್ಲ ಎಂದು ಹೇಳಿದ್ದಾರೆ.

“ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮ್ಯಾನ್ಮಾರ್ ರೋಹಿಂಗ್ಯಾಗಳಿಗೆ ಕಾಕ್ಸ್ ಬಜಾರ್‌ನಲ್ಲಿ ಆಶ್ರಯ ನೀಡಿದ್ದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ, ಹೀಗಿರುವಾಗ ಹಿಂದೂಗಳನ್ನು ಏಕೆ ಅನಿಯಂತ್ರಿತವಾಗಿ ಗುರಿಯಾಗಿಸಲಾಗುತ್ತಿದೆ ಎಂದು ನಾನು ಅವರನ್ನು ಕೇಳಿದೆ? ಆ ದೇಶದಲ್ಲಿ ಎರಡು ಕೋಟಿ ಹಿಂದೂಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ. ಗಡಿಯ ಈ ಬದಿಯಲ್ಲಿರುವ 100 ಕೋಟಿ ಹಿಂದೂಗಳು ಮೌನವಾಗಿ ಕುಳಿತು ನೋಡುತ್ತಾರೆ ಎಂದು ಅವರು ಭಾವಿಸಿದ್ದರೆ, ಅದು ತಪ್ಪು” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಉಪ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮ ಕೈಗೊಂಡಿದ್ದಕ್ಕಾಗಿ ಅಧಿಕಾರಿ ಮಮತಾ ಬ್ಯಾನರ್ಜಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಗಡಿಯ ಆ ಬದಿಯಲ್ಲಿರುವ ಮುಮ್ಮಮದ್ ಯೂನುಸ್ ಪೊಲೀಸರಿಗೂ ಇಲ್ಲಿನ ಮಮತಾ ಬ್ಯಾನರ್ಜಿ ಪೊಲೀಸರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ತಮ್ಮ ಯಜಮಾನರಿಗೆ ಕುರುಡಾಗಿ ಸೇವೆ ಸಲ್ಲಿಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ಡಿಸೆಂಬರ್ 23 ರಂದು ಉಪ ಹೈಕಮಿಷನ್ ಮೇಲೆ ದಾಳಿ ಮಾಡಲು ಮುಂದಾದಾಗ ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಯ 19 ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಉಪ ಹೈಕಮಿಷನ್ ಕಚೇರಿಯ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನೆಲಕ್ಕೆ ಬಿಗಿಯಾಗಿ ಜೋಡಿಸಲಾದ ಲೋಹದ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದೆ.

ದಾಳಿಗಳು ನಿರಂತರವಾಗಿ ಮುಂದುವರಿದರೆ, ನೂರಾರು ಹಿಂದೂ ಸನ್ಯಾಸಿಗಳೊಂದಿಗೆ, ಇನ್ನೂ ದೊಡ್ಡ ಪಡೆಯೊಂದಿಗೆ ಹೈಕಮಿಷನ್ ಕಚೇರಿಗೆ ನುಗ್ಗುವುದಾಗಿ ಅಧಿಕಾರಿ ಬೆದರಿಕೆ ಹಾಕಿದ್ದಾರೆ.

“ಗಂಗಾಸಾಗರ ಮೇಳಕ್ಕೆ ಹೋಗುವ ದಾರಿಯಲ್ಲಿ ಸನ್ಯಾಸಿಗಳು ಬಾಬುಘಾಟ್‌ನಲ್ಲಿ ಶಿಬಿರಗಳನ್ನು ಸ್ಥಾಪಿಸುತ್ತಾರೆ. ಮುಂದಿನ ವರ್ಷದ ಆರಂಭದಲ್ಲಿ ನಾನು ಗಂಗಾಸಾಗರದ ಐದು ಲಕ್ಷ ಹಿಂದೂ ಯಾತ್ರಿಕರೊಂದಿಗೆ ಹಿಂತಿರುಗುತ್ತೇನೆ ಮತ್ತು ಹೈಕಮಿಷನ್ ಕಚೇರಿಗೆ ಮೆರವಣಿ ಮಾಡುವ ಮೂಲಕ ಈ ಬ್ಯಾರಿಕೇಡ್‌ಗಳನ್ನು ಕಿತ್ತುಹಾಕುತ್ತೇನೆ” ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...