Homeಮುಖಪುಟಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

- Advertisement -
- Advertisement -

ಭಾರತಕ್ಕೆ ಚಿಕಿತ್ಸೆಗೆಂದು ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ನ ಹಿರಿಯ ಸಂಸದ ಅನಾರ್ ಮೇ 13ರಿಂದ ನಾಪತ್ತೆಯಾಗಿದ್ದಾರೆ. ಅನ್ವರುಲ್ ಅಝೀಂ ಅನಾರ್ ಮೇ 12ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದು ಬಾರಾನಗರದಲ್ಲಿರುವ ತನ್ನ ಸ್ನೇಹಿತನ ಸ್ಥಳದಲ್ಲಿ ತಂಗಿದ್ದರು. ಮೇ 13ರಂದು ಅವರು ಯಾರನ್ನೋ ಭೇಟಿಯಾಗಲು ಹೋಗಿದ್ದರು, ಆದರೆ ಹಿಂತಿರುಗಲಿಲ್ಲ. ಈ ಬಗ್ಗೆ ಅವರ ಸ್ನೇಹಿತ ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅನಾರ್ ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರು ನವದೆಹಲಿಗೆ ತೆರಳಿರುವುದಾಗಿ ಕುಟುಂಬಸ್ಥರಿಗೆ ಸಂದೇಶಗಳನ್ನು ಕಳುಹಿಸಿರುವ ಬಗ್ಗೆಯೂ ಮಾಹಿತಿ ಇದೆ. ಆದರೆ ಈ ಬಗ್ಗೆ ದೃಢೀಕರಣವಿಲ್ಲ. ಅವರನ್ನು ಇದುವರೆಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ನಾವು ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿ ಹೇಳಿದ್ದಾರೆ.

ಅನಾರ್ ಸಂಪರ್ಕಕ್ಕೆ ಸಿಗದ ಬಗ್ಗೆ ಅವರ ಕುಟುಂಬವು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಪುತ್ರಿ ಮುಮ್ತಾರಿನ್ ಫಿರ್ದೌಸ್ ಢಾಕಾ ಮೆಟ್ರೋಪಾಲಿಟನ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದಾರೆ.

ಅನಾರ್ ಅವರು ಕೊನೆಯ ಬಾರಿಗೆ ಬಿಹಾರದಲ್ಲಿ ಮೊಬೈಲ್‌ ಬಳಕೆ ಮಾಡಿರುವುದು ನೆಟ್‌ವರ್ಕ್‌ ಪರಿಶೀಲಿಸಿದಾಗ ಪತ್ತೆಯಾಗಿದೆ. ಅವರ ಬಾಂಗ್ಲಾದೇಶ ಮತ್ತು ಭಾರತೀಯ ಸಿಮ್ ಕಾರ್ಡ್‌ಗಳನ್ನು ಮೇ 14ರಿಂದ ಸ್ವಿಚ್ ಆಫ್ ಮಾಡಲಾಗಿದೆ. ಅವರ ಹಠಾತ್ ಕಣ್ಮರೆ ಬಗ್ಗೆ ಕಳವಳ  ವ್ಯಕ್ತವಾಗಿದೆ. ಸಂಸದ ಅನ್ವರುಲ್ ಅಝೀಂ ಅನಾರ್ ಅವರಿಗೆ ಸೇರಿದ ಫೋನ್‌ಗಳು ಇತ್ತೀಚೆಗೆ ಸ್ವಿಚ್ ಆಫ್ ಮತ್ತು ಆನ್ ಆಗಿವೆ, ಆದರೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಬಾಂಗ್ಲಾದೇಶದ ಹಿರಿಯ ಗುಪ್ತಚರ ಅಧಿಕಾರಿ ಮೊಹಮ್ಮದ್ ಹರೂನ್ ರಶೀದ್ ಹೇಳಿದ್ದಾರೆ. ಇದೀಗ ಬಾಂಗ್ಲಾದೇಶ ಮತ್ತು ಭಾರತೀಯ ಅಧಿಕಾರಿಗಳು ಅನಾರ್ ಅವರಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನು ಓದಿ: ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...