Homeಮುಖಪುಟಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

- Advertisement -
- Advertisement -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆಯಾಗಿದ್ದರು.

“ಬಿಎನ್‌ಪಿ ಅಧ್ಯಕ್ಷೆ, ಮಾಜಿ ಪ್ರಧಾನಿ ಹಾಗೂ ರಾಷ್ಟ್ರೀಯ ನಾಯಕಿ ಬೇಗಂ ಖಾಲಿದಾ ಝಿಯಾ ಅವರು ಇಂದು ಬೆಳಿಗ್ಗೆ ಫಜ್ರ್ ಪ್ರಾರ್ಥನೆಯ ನಂತರ 6 ಗಂಟೆಗೆ ಕೊನೆಯುಸಿರೆಳೆದರು” ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. ಅವರ ಅಗಲಿಕೆಗೆ ಸಂತಾಪ ಸೂಚಿಸಿ, ಪ್ರಾರ್ಥನೆ ಸಲ್ಲಿಸುವಂತೆ ಬಿಎನ್‌ಪಿ ಮನವಿ ಮಾಡಿದೆ.

ವೈದ್ಯರ ಪ್ರಕಾರ, ಖಾಲಿದಾ ಝಿಯಾ ಅವರು ಯಕೃತ್ತಿನ ಸಮಸ್ಯೆ, ಸಂಧಿವಾತ, ಮಧುಮೇಹ ಹಾಗೂ ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮಗ ಹಾಗೂ ಬಿಎನ್‌ಪಿಯ ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ತಾಯಿಯನ್ನು ಭೇಟಿಮಾಡಿದ್ದರು.

ಖಾಲಿದಾ ಝಿಯಾ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಡುವಿನ ರಾಜಕೀಯ ಪೈಪೋಟಿ ದಶಕಗಳ ಕಾಲ ಬಾಂಗ್ಲಾದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಿತ್ತು. 1981ರಲ್ಲಿ ದಂಗೆಯಲ್ಲಿ ಹತ್ಯೆಯಾದ ಅಧ್ಯಕ್ಷ ಝಿಯಾವುರ್‌ ರೆಹಮಾನ್ ಅವರ ಪತ್ನಿಯಾದ ಖಾಲಿದಾ ಝಿಯಾ, ನಂತರ ಮಿಲಿಟರಿ ಆಡಳಿತದ ವಿರುದ್ಧ ನಡೆದ ಸಾಮೂಹಿಕ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಆಂದೋಲನದ ಫಲವಾಗಿ 1990ರಲ್ಲಿ ಮಿಲಿಟರಿ ಆಡಳಿತ ಪತನವಾಯಿತು.

1991ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದ ಖಾಲಿದಾ ಝಿಯಾ, 2001ರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅನೇಕ ಚುನಾವಣೆಗಳಲ್ಲಿ ಅವರ ಎದುರಾಳಿಯಾಗಿ ಶೇಖ್ ಹಸೀನಾ ಸ್ಪರ್ಧಿಸಿದ್ದರು. 2006ರಿಂದ ಅಧಿಕಾರದ ಹೊರಗಿದ್ದ ಅವರು, ರಾಜಕೀಯ ಪ್ರೇರಿತವೆಂದು ಹೇಳಲಾದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲು ಹಾಗೂ ಗೃಹಬಂಧನ ಅನುಭವಿಸಿದ್ದರು.

ಜನವರಿ 2025ರಲ್ಲಿ, ಸುಪ್ರೀಂ ಕೋರ್ಟ್ ಖಾಲಿದಾ ಅವರನ್ನು ಕೊನೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು. ಇದು ಮುಂದಿನ (2026) ಫೆಬ್ರವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ನೀಡುತ್ತಿತ್ತು. ಈ ನಡುವೆ ಅವರು ನಿಧನರಾಗಿದ್ದಾರೆ.

2020ರಲ್ಲಿ ಅನಾರೋಗ್ಯದ ಕಾರಣ ಖಾಲಿದಾ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆ ಬಳಿಕ ಅವರ ಕುಟುಂಬ ವಿದೇಶದಲ್ಲಿ ಚಿಕಿತ್ಸೆ ನೀಡಲು ಕನಿಷ್ಠ 18 ಬಾರಿ ಶೇಖ್ ಹಸೀನಾ ಸರ್ಕಾರವನ್ನು ವಿನಂತಿಸಿತು. ಆದರೆ, ಈ ವಿನಂತಿಗಳನ್ನು ತಿರಸ್ಕರಿಸಲಾಯಿತು ಎಂದು ಬಿಎನ್‌ಪಿ ಹೇಳಿದೆ.

ಹಸೀನಾ ಸರ್ಕಾರ ಪತನಗೊಂಡ ಬಳಿಕ ರಚನೆಯಾದ ಮಧ್ಯಂತರ ಸರ್ಕಾರ ಈ ವರ್ಷ ಆರಂಭದಲ್ಲಿ ಖಾಲಿದಾ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದೊಯ್ಯಲು ಅನುಮತಿ ನೀಡಿತು. ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಕಿಂಗ್‌ಡಮ್‌ಗೆ ತೆರಳಿದ್ದ ಅವರು, ಮೇ ತಿಂಗಳಲ್ಲಿ ಸ್ವದೇಶಕ್ಕೆ ಮರಳಿದ್ದರು.

ಅಧಿಕಾರದಿಂದ ದೂರವಿದ್ದರೂ ಖಾಲಿದಾ ಝಿಯಾ ಹಾಗೂ ಅವರ ಮಧ್ಯ–ಬಲಪಂಥೀಯ ಬಿಎನ್‌ಪಿ ದೇಶದ ರಾಜಕೀಯದಲ್ಲಿ ಪ್ರಭಾವವನ್ನು ಉಳಿಸಿಕೊಂಡಿತ್ತು. ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ತಿನ ಚುನಾವಣೆಯಲ್ಲಿ ಬಿಎನ್‌ಪಿ ಮುಂಚೂಣಿಯಲ್ಲಿದೆ. ಸುಮಾರು 17 ವರ್ಷಗಳ ಸ್ವಯಂ ಗಡಿಪಾರು ಜೀವನದ ಬಳಿಕ ಇತ್ತೀಚೆಗೆ ದೇಶಕ್ಕೆ ಮರಳಿದ ತಾರಿಕ್ ರೆಹಮಾನ್ ಪ್ರಧಾನಿಯಾಗುವ ಪ್ರಬಲ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...