Homeಕರ್ನಾಟಕಕಾವೇರಿ ನದಿ ನೀರು ಹಂಚಿಕೆ ವಿವಾದ: ಸೆ.26ಕ್ಕೆ ಬೆಂಗಳೂರು ಬಂದ್‌

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸೆ.26ಕ್ಕೆ ಬೆಂಗಳೂರು ಬಂದ್‌

- Advertisement -
- Advertisement -

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಸೂಚನೆ ಬಳಿಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ಈ ಬಗ್ಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಬ್ರಿಟೀಷರ ಕಾಲದಿಂದಲೂ ಅನ್ಯಾಯವಾಗುತ್ತಿದೆ. ಇದನ್ನು ಖಂಡಿಸಿ ಸೆ.26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಯಲಿದೆ ಎಂದು ಹೇಳಿದ್ದಾರೆ.

ಸೆ.26ರಂದು ಬೆಂಗಳೂರು ಬಂದ್‌ ವೇಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿಕೊಂಡ ಅವರು, ಇದು ನಮ್ಮ ಬಂದ್‌ ಅಲ್ಲ, ರಾಜ್ಯದ ರೈತರ ಪರವಾಗಿ ಬೆಂಗಳೂರಿನ ನಾಗರಿಕರ ಬಂದ್‌ ಎಂದು ಹೇಳಿದ್ದಾರೆ

ಬಂದ್‌ ದಿನ ಕಾರ್ಮಿಕ ಸಂಘಟನೆಗಳು, ಐಟಿ ಕಂಪೆನಿಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸೂಚಿಸಿದ ಬೆನ್ನಲ್ಲೇ ರಾಜ್ಯದ ವಿವಧೆಡೆ ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಕಾವೇರಿ ವಿವಾದ: ಸುಪ್ರೀಂ ಆದೇಶಕ್ಕೆ ವಿರೋಧ; ರಾಜ್ಯದ ಹಲವೆಡೆ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...