Homeಕರ್ನಾಟಕಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಖಾಸಗಿ ಬಸ್‌ಗಳು

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಖಾಸಗಿ ಬಸ್‌ಗಳು

- Advertisement -
- Advertisement -

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.  ವೀರಭದ್ರ ನಗರದಲ್ಲಿ ಖಾಸಗಿ ಬಸ್‌ಗಳು ನಿಲ್ಲಿಸಿದ್ದ ಶೆಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಬಸ್‌ಗಳ ಪೈಕಿ 6 ಬಸ್‌ಗಳಿಗೆ ಬೆಂಕಿ ತಗುಲಿದೆ.

ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್​ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 16 ಮಂದಿ ಮೃತಪಟ್ಟಿದ್ದರು. ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ ಈ ದುರಂತ ಸಂಭವಿಸಿತ್ತು.

ದುರಂತದ ನಂತರ ರಾಜ್ಯ ಸರ್ಕಾರ ಆನೇಕಲ್ ತಹಶೀಲ್ದಾರ್, ಅತ್ತಿಬೆಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.

ಇದಾದ ಬಳಿಕ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್​ಗಳು ಸ್ಫೋಟಗೊಂಡಿತ್ತು. ಈ ವೇಳೆ ಕಟ್ಟಡದಲ್ಲಿದ್ದ ಪ್ರೇಮ್​ ಎಂಬವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದರು. ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿತ್ತು.

ಇದನ್ನು ಓದಿ: ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...