Homeಕರ್ನಾಟಕಬೆಂಗಳೂರು: ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ನಾಗರಿಕರ ಹತ್ಯಾಕಾಂಡ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಇಸ್ರೇಲ್ ನಡೆಸುತ್ತಿರುವ ಪ್ಯಾಲೆಸ್ತೀನ್ ನಾಗರಿಕರ ಹತ್ಯಾಕಾಂಡವನ್ನು ನಿಲ್ಲಿಸಬೇಕು. ಭಾರತವು ಪ್ಯಾಲೆಸ್ತೀನ್ ಪರವಾಗಿ, ಪ್ಯಾಲೆಸ್ತೀನಿಯರ ಉಳಿವಿಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವಾರು ಮಂದಿ ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ.

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ದಬ್ಬಾಳಿಕೆ ಮತ್ತು ನರಮೇಧವನ್ನು ಹಲವಾರು ವರ್ಷಗಳಿಂದ ಹಲವು ದೇಶಗಳು ವಿರೋಧಿಸಿವೆ. ಇಸ್ರೇಲಿನ ಪ್ರಜ್ಞಾವಂತ ನಾಗರಿಕರು ಪ್ಯಾಲೆಸ್ತೀನ್ ವಿರುದ್ಧದ ಇಸ್ರೇಲ್ ನೀತಿಯನ್ನು ಮತ್ತು ಯಹೂದಿಗಳ ಪರವಾದ ಧೋರಣೆಗಳನ್ನು ಖಂಡಿಸಿದ್ದಾರೆ. ಇಡೀ ಜಗತ್ತು ಪ್ಯಾಲೆಸ್ತೀನಿಯರ ಪರ ನಿಲ್ಲಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದಲ್ಲದೆ ಪ್ಯಾಲೆಸ್ತೀನಿ ಪರ ಪ್ರತಿಭಟನೆಗಳಿಗೆ ಅವಕಾಶ ಕೊಡದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 75 ವರ್ಷಗಳಲ್ಲಿ ಇಸ್ರೇಲ್‌ ಪ್ಯಾಲೆಸ್ತೀನಿಯರನ್ನು ಹತ್ಯಾಕಾಂಡ ನಡೆಸುತ್ತಾ ಬಂದಿದೆ. ಪ್ಯಾಲೆಸ್ತೀನ್ ಭೂ ಭಾಗವನ್ನು ಆಕ್ರಮಿಸಿಕೊಂಡಿದೆ. ಇಸ್ರೇಲ್‌ ನೀತಿಯನ್ನು ಹಲವಾರು ರಾಷ್ಟ್ರಗಳು ವಿರೋಧಿಸಿವೆ. ಭಾರತದಲ್ಲಿ ಈವರೆಗಿನ ಎಲ್ಲಾ ಸರಕಾರಗಳು ಪ್ಯಾಲೆಸ್ತೀನ್‌ ನಾಗರಿಕರ ಪರವಾಗಿ ತಮ್ಮ ನಿಲುವನ್ನು ಮಂಡಿಸಿದ್ದರು. ಆದರೆ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾತ್ರ ಪ್ಯಾಲೆಸ್ತೀನಿ ಪರ ನಿಲುವು ಮಂಡಿಸದೆ ತಟಸ್ಥವಾಗಿ ಉಳಿದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ಪ್ಯಾಲೆಸ್ತೀನಿ ಪರ ಕಾರ್ಯಕ್ರಮಗಳು, ಸಭೆಗಳಿಗೆ ನಡೆಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡದೆ ಇರುವ ಬಗ್ಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ಧೋರಣೆಗಳನ್ನು ಜನರ ಮೇಲೆ ಹೇರುತ್ತಿವೆ. ಪೊಲೀಸರು ಸಂವಿಧಾನದಿಂದ ಆಯ್ಕೆಯಾದವರು. ಅವರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಮನ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಚುನಾವಣೆಗೂ ಮುನ್ನ ಸಾಕಷ್ಟು ಮಾತನಾಡಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ರಾಜಕಾರಣಕ್ಕಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ ಕಡೆಗಣಿಸುತ್ತಿದೆ. ಕಾಂಗ್ರೆಸ್‌ ವರಿಷ್ಠರೆ ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ್ದಾರೆ. ಆದರೆ ಅದನ್ನು ಅನುಸರಿಸಲು ಕಾಂಗ್ರೆಸ್‌ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರ 2ಬಿ ಮೀಸಲಾತಿಯನ್ನು ಮರಳಿ ತರುತ್ತೇವೆ. ಜಾತಿ ಗಣತಿಯನ್ನು ಸ್ವೀಕರಿಸಿ, ಬಿಡುಗಡೆ ಮಾಡುತ್ತೇವೆ. ಸದಾಶಿವ ಆಯೋಗ, ಕಾಂತರಾಜ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುತ್ತೇವೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಭರವಸೆ ನೀಡಿತ್ತು. ಆದರೆ ಈಗ ಕಾಂಗ್ರೆಸ್‌ ಮೌನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...