Homeಕರ್ನಾಟಕಬೆಂಗಳೂರು: ಸ್ಕೂಟರ್‌ ತಡೆದು ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಸ್ಕೂಟರ್‌ ತಡೆದು ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ

- Advertisement -
- Advertisement -
ರ‍್ಯಾಪಿಡೋ ಚಾಲಕನಿಗೆ ಅಡ್ಡಗಟ್ಟಿದ ಪ್ರತಿಭಟನಾಕಾರರು ಪ್ರಯಾಣಿಕನಿಗೆ ಮತ್ತು ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಚಾಲುಕ್ಯ ಸರ್ಕಲ್‌ ಫ್ಲೈಓವರ್‌ ಮೇಲೆ ಬರುತ್ತಿದ್ದ ರ‍್ಯಾಪಿಡೋ  ಚಾಲಕನನ್ನು ತಡೆದು ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಲು ಮುಂದಾದ ಪ್ರಯಾಣಿಕನಿಗೂ ಚಾಲಕರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರನ್ನು ಚದುರಿಸಿದ್ದಾರೆ. ಹಲ್ಲೆಗೊಳಗಾದವರನ್ನು ಅಲ್ಲಿಂದ ಕಳುಹಿಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಟ್ಯಾಕ್ಸಿ ಚಾಲಕನಿಗೆ ಕೆಲವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರ‍್ಯಾಪಿಡೋ  ಚಾಲಕನನ್ನು ಸ್ಕೂಟರ್‌ನಿಂದ ಕೆಳಗಿಳಿಸಿ ಹಲ್ಲೆ ನಡೆಸಿ, ಸ್ಕೂಟರ್‌ನ್ನು ಹಾನಿಗೈದಿದ್ದಾರೆ.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ವತಿಯಿಂದ ಕಳೆದ ರಾತ್ರಿ 12 ಗಂಟೆಯಿಂದ ಇಂದು ರಾತ್ರಿ 12ರವೆರೆಗೆ ಬಂದ್‌ ಘೋಷಿಸಲಾಗಿತ್ತು. ಸರಕಾರ ಜಾರಿಗೊಳಿಸಿರುವ ‘ಶಕ್ತಿ ಯೋಜನೆ’ಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು. ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಿತ್ತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಖಾಸಗಿ ವಾಹನ ಸಂಘಟನೆಗಳ ಸದಸ್ಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದರು. ಈ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟ ಬಂದ್‌ ಕೈ ಬಿಟ್ಟಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ರಾಮಲಿಂಗಾರೆಡ್ಡಿ ಅವರು, ಸಂಘಟನೆಗಳ ಬೇಡಿಕೆ ಆಲಿಸಿ ಬಳಿಕ ಮಾತನಾಡಿದ್ದು, ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟಗಳ ಬಹುತೇಕ ಬೇಡಿಕೆ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ನಿಗಮ ಮಂಡಳಿಯನ್ನು ಮಾಡುತ್ತೇವೆ. ಅವರ ಸಮಸ್ಯೆಗಳು ಈ ಸರ್ಕಾರ ಬಂದಾಗಿನಿಂದ ಇರೋದಲ್ಲ ಹಿಂದಿನಿಂದಲೂ ಇದೆ. ಆದರೆ ಶಕ್ತಿ ಯೋಜನೆಯಿಂದ ಸಮಸ್ಯೆಯಾಗಿದೆ ಎಂದು ಅವರು ಹೇಳುತ್ತಿದ್ದಾರೆ. ಓಲಾ-ಊಬರ್ ಕುರಿತ 4 ಕೇಸ್‌ಗಳು ಕೋರ್ಟ್‌ನಲ್ಲಿವೆ. ವಕೀಲರೊಂದಿಗೆ ಈ ಬಗ್ಗೆ ಚರ್ಚಿಸಿ ಬೇಗ ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಇದರ ಜೊತೆ ಬೈಕ್ ಟ್ಯಾಕ್ಸಿ ಕೇಸ್ ಸಹ ಕೋರ್ಟ್‌ನಲ್ಲಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ಬಂದ್‌’ ವಾಪಸ್‌ ಪಡೆದ ಖಾಸಗಿ ವಾಹನ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...