Homeಮುಖಪುಟಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಬೃಹತ್ ದಾಖಲೆ ಮಾಡಿದ ಮೋದಿ ಸರ್ಕಾರ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ, ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ

- Advertisement -
- Advertisement -

2018-19ರ ಸಾಲಿನಲ್ಲಿ ಒಂದು ವರ್ಷದಲ್ಲಿಯೇ 71,500 ಕೋಟಿ ರೂಗಳಷ್ಟು ಬ್ಯಾಂಕ್ ವಂಚನೆ ನಡೆದಿದ್ದು 6800 ಕೇಸುಗಳು ದಾಖಲಾಗಿವೆ ಎಂಬ ಆಘಾತಕಾರಿ ಅಂಶವನ್ನು ಆರ್.ಬಿ.ಐ ತಿಳಿಸಿದೆ.

2017-18 ರ ಸಾಲಿನಲ್ಲಿ 5,916 ಪ್ರಕರಣಗಳಿಂದ ಒಟ್ಟು 41,167 ಕೋಟಿ ರೂಗಳ ವಂಚನೆ ನಡೆದಿತ್ತು ಎಂದು ಪಿಟಿಐ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಉತ್ತರಿಸಿ ರಿಸರ್ವ್ ಬ್ಯಾಂಕ್ ಇಂಡಿಯಾ ಈ ಮಾಹಿತಿ ಹೊರಹಾಕಿದೆ.

ಕಳೆದ 11 ವರ್ಷಗಳ ಡೆಟಾವನ್ನು ಗಮನಿಸಿದ್ದಲ್ಲಿ ಒಟ್ಟು 53ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು 2 ಲಕ್ಷ ಕೋಟಿ ಹಣವನ್ನು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಲಾಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ 2008-13ರ ಸಮಯದಲ್ಲಿ ವರ್ಷಕ್ಕೆ ಸರಾಸರಿ 5 ಸಾವಿರ ಕೋಟಿಯಂತೆ 30 ಸಾವಿರ ಕೊಟಿ ವಂಚನೆಯಾಗುತ್ತಿದ್ದರೆ 2013ರಿಂದ 2018ರ ವರೆಗೆ ನರೇಂದ್ರ ಮೋದಿಯವರ ನೇತೃತ್ವದ ಅವಧಿಯಲ್ಲಿ ಬ್ಯಾಂಕ್ ವಂಚನೆ ತೀರಾ ಅತಿರೇಕಕ್ಕೇರಿದೆ.

ಮೋದಿಯವರ 5 ವರ್ಷದ ಆಡಳಿತದಲ್ಲಿ ಸುಮಾರು 1 ಲಕ್ಷದ 70 ಸಾವಿರ ಕೋಟಿ ರೂಗಳಷ್ಟು ಬ್ಯಾಂಕುಗಳಿಗೆ ವಂಚನೆ ನಡೆದಿದೆ. ಆರಂಭದಲ್ಲಿ ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದು ಅವರು ದೇಶ ಬಿಟ್ಟು ಓಡಿಹೋಗಿದ್ದರು. ಇದರ ಕುರಿತು ವ್ಯಾಪಕ ವಿರೋಧ ಬಂದರೂ ಲೆಕ್ಕಿಸದೇ ನಂತರವೂ ಎರಡೇ ವರ್ಷದಲ್ಲಿ 1 ಲಕ್ಷದ 10ಸಾವಿರ ಕೋಟಿಯಷ್ಟು ವಂಚನೆ ನಡೆದಿದೆ ಎಂದು ದಿ ಎಕಾನಾಮಿಕ್ ಟೈಮ್ಸ್ ವರದಿ ಮಾಡಿದೆ.

ಈ ಕುರಿತು ಖ್ಯಾತ ಯುವ ಚಿಂತಕ ಧೃವ್ ರಾಠೀಯವರು “ಭಾರತದಲ್ಲಿ ಮೂವರಲ್ಲಿ ಒಬ್ಬ ವ್ಯಕ್ತಿ ಚೌಕಿದಾರ್ ಆಗಿದ್ದಾರೆ. ಆದರೆ ಅವರು ಸೋಷಿಯಲ್ ಮೀಡಿಯಾದಲ್ಲಿ ಜನರನ್ನು ನಿಂದಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿಯೇ ಬ್ಯಾಂಕ್‍ಗಳಿಗೆ ವಂಚನೆಯಲ್ಲಿ ಭಾರತ ಹಳೆಯ ದಾಖಲೆಗಳೆನ್ನವನ್ನು ಮುರಿದು ಎತ್ತರಕ್ಕೇರಿದೆ. ಎಷ್ಟರ ಮಟ್ಟಿಗೆ ಎಂದರೆ ಒಂದೇ ವರ್ಷದಲ್ಲಿ 6800 ಪ್ರಕರಣಗಳು ಮತ್ತು 71ಸಾವಿರ ಕೋಟಿ ಹಣ. ಕಳೆದ ವರ್ಷಕ್ಕೆ ಹೋಲಿಸಿದರೆ 73% ಹೆಚ್ಚು” ಎಂದು ವ್ಯಂಗ್ಯವಾಡಿದ್ದಾರೆ.

ಒಂದು ಕಡೆ ಭಾರತದ ಆರ್ಥಿಕತೆ ಕುಸಿಯುತ್ತಿದೆ. ನಿರುದ್ಯೋಗ ಹೆಚ್ಚುತ್ತಿದೆ. ರೈತರು ಸಾಲಮನ್ನಾಕ್ಕಾಗಿ ಅಂಗಲಾಚುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಸಾರ್ವಜನಿಕರಿಗೆ/ಸರ್ಕಾರಕ್ಕೆ ಸೇರಿದ ಲಕ್ಷಾಂತರ ಕೋಟಿ ರೂಗಳನ್ನು ದೊಡ್ಡ ಬಂಡವಾಳಶಾಹಿಗಳು ಸಾಲವಾಗಿ ಪಡೆದು ವಾಪಸ್ ಕಟ್ಟದೆ ವಂಚಿಸುತ್ತಿದ್ದಾರೆ, ಅವರಿಗೆ ಮೋದಿ ಅಭಯ ಹಸ್ತ ನೀಡುತ್ತಿದ್ದಾರೆ ಎಂದು ಧೃವ್ ರಾಠೀ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...