Homeಮುಖಪುಟಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

ಸೇವೆಯನ್ನು ಸುಧಾರಿಸಲು ಬ್ಯಾಂಕ್ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತಾರಾಮನ್

- Advertisement -
- Advertisement -

ಸೇವೆಯನ್ನು ಸುಧಾರಿಸಲು ಸ್ಥಳೀಯ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದರು. 

ಎಸ್‌ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ ಕಂಪನಿಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಈ ಸಮಸ್ಯೆಯಿಂದಾಗಿ ಮಾಹಿತಿ ದಾಖಲಿಸುವ ಪ್ರಕ್ರಿಯೆಯೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ ಗ್ರಾಹಕರಿಗೆ ಸಾಲ ನೀಡಲು ನಿರಾಕರಿಸುತ್ತಿರುವ ಪ್ರಕರಣಗಳೂ ಹೆಚ್ಚಾಗುತ್ತಿವೆ’ ಎಂದು ಎಚ್ಚರಿಸಿದ್ದಾರೆ.

ಸ್ಥಳೀಯ ಭಾಷೆಗಳನ್ನು ಮಾತನಾಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹೊರಹಾಕುತ್ತಿರುವ ಆಕ್ರೋಶ ಕುರಿತು ಮಾತನಾಡಿರುವ ನಿರ್ಮಲಾ ಸೀತಾರಾಮನ್, ‘ಬ್ಯಾಂಕ್ ಸಿಬ್ಬಂದ ನೇಮಕಾತಿ ಪ್ರಕ್ರಿಯೆಯಲ್ಲೂ ಬಹಳಷ್ಟು ಬದಲಾವಣೆ ಆಗಬೇಕಿದೆ. ನೇಮಕಾತಿಯಲ್ಲಿ ಸ್ಥಳೀಯ ಭಾಷೆ ಮಾತನಾಡುವವರಿಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಮತ್ತು ಸ್ಥಳೀಯ ಭಾಷೆ ಮಾತನಾಡಲು ಹೆಚ್ಚು ಒತ್ತು ನೀಡಬೇಕು’ ಎಂದಿದ್ದಾರೆ.

‘ನೇಮಕಾತಿ ಪ್ರಕ್ರಿಯೆ ಹೇಗಿರಬೇಕೆಂದರೆ, ಯಾವುದೇ ಶಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಅಲ್ಲಿನ ಗ್ರಾಹಕರನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಭಾಷೆಯಲ್ಲಿ ಮಾತನಾಡಬೇಕು. ಮೇಲಾಧಿಕಾರಿಗಳಿಗೆ ಸ್ಥಳೀಯ ಭಾಷೆ ತಿಳಿದಿಲ್ಲವಾದರೂ, ಶಾಖೆಯ ಮಟ್ಟದ ಅಧಿಕಾರಿಗಳು ಸಂವಹನ ನಡೆಸುವಷ್ಟು ಸಾಮರ್ಥ್ಯ ಇರಬೇಕು’ ಎಂದಿದ್ದಾರೆ.

‘ಸ್ಥಳೀಯ ಭಾಷೆಯಲ್ಲಿ ಸಿಬ್ಬಂದಿಯ ದಕ್ಷತೆಯ ಆಧಾರದಲ್ಲಿ ಅವರ ಮೌಲ್ಯಮಾಪನ ಮಾಡುವುದನ್ನು ನಾನು ಬಲವಾಗಿ ಬೆಂಬಲಿಸುತ್ತೇನೆ. ಬೇರೆ ಬೇರೆ ಮಾತೃಭಾಷೆಯ ಸಿಬ್ಬಂದಿಯನ್ನು ಅನ್ಯ ಪ್ರದೇಶಗಳಿಗೆ ವರ್ಗಾವಣೆ ಮಾಡುವ ಬ್ಯಾಂಕ್‌ಗಳ ನೀತಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

‘ಸ್ಥಳೀಯ ಭಾಷೆ ಬಲ್ಲ ಸಿಬ್ಬಂದಿಯಿಂದ ಗ್ರಾಹಕರೊಂದಿಗೆ ಸಂವಹನ ಮತ್ತು ಸಂಬಂಧ ಉತ್ತಮವಾಗಿರುತ್ತದೆ. ಇದರಿಂದ ವ್ಯವಹಾರವೂ ಉತ್ತಮವಾಗಿರುತ್ತದೆ. ಬ್ಯಾಂಕುಗಳು ಹೆಚ್ಚು ಸಾಲ ನೀಡಲು ಸಾಧ್ಯವಾಗಲಿದೆ. ಆಪ್ತ ವಾತಾವರಣ ಸೃಷ್ಟಿಸಲು ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಉತ್ತಮ ಮಾರ್ಗ’ ಎಂದೂ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಎಸ್‌ಬಿಐ ಅಧ್ಯಕ್ಷ ಸಿ.ಎಸ್. ಸೆಟ್ಟಿ, ‘ತನ್ನ ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲೇ ಉತ್ತಮ ಸಂಪರ್ಕ ಹೊಂದಲು ಸೂಕ್ತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವತ್ತ ಬ್ಯಾಂಕ್‌ ಯೋಜನೆ ರೂಪಿಸಿದೆ. ಇದಕ್ಕೆ ಕೃತಕ ಬುದ್ಧಿಮತ್ತೆ (ಎಐ) ಸಾಧನ ನೆರವಾಗಬಲ್ಲದು. ಇದರಿಂದ ಭಾಷೆ ಕಲಿಕೆಗೆ ತ್ವರಿತ ಪರಿಹಾರ ಮತ್ತು ಉತ್ತಮ ಸೇತುವೆಯಾಗಿಯೂ ನೆರವಾಗಲಿದೆ’ ಎಂದಿದ್ದಾರೆ.

‘ಈ ನಿಟ್ಟಿನಲ್ಲಿ ‘ಸ್ಪಾರ್ಕ್‌’ ಎಂಬ ಕಾರ್ಯಕ್ರಮವನ್ನು ಈಗಾಗಲೇ ಆರಂಭಿಸಲಾಗಿದೆ. ಭಾಷೆ ಸಂಬಂಧಿತ ಸಮಸ್ಯೆ ಸಹಿತ ಹಲವು ಸವಾಲುಗಳಿಗೆ ಇದು ಪರಿಹಾರವಾಗಿದೆ’ ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...