Homeಮುಖಪುಟಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್‌ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ

- Advertisement -
- Advertisement -

ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್‌ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ.

2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು, 2,36,265 ಕೋಟಿ ರೂಪಾಯಿ ಸಾಲ ರೈಟ್ ಆಫ್ ಮಾಡಲಾಗಿದೆ. 2014-15ರ ಹಣಕಾಸು ವರ್ಷದಲ್ಲಿ ಅತಿ ಕಡಿಮೆ, 58,786 ಕೋಟಿ ರೂ. ರೈಟ್ ಆಫ್ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2023-24ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 1,70,270 ಕೋಟಿ ರೂ. ವಸೂಲಾಗದ ಸಾಲ ರೈಟ್ ಆಫ್ ಮಾಡಿವೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ರೈಟ್ ಆಫ್ ಮಾಡಿದ 2,16,324 ಕೋಟಿ ರೂ.ಗೆ ಹೋಲಿಸಿದರೆ ಕಡಿಮೆಯಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಮಾರ್ಗಸೂಚಿ ಹಾಗೂ ಆಡಳಿತ ಮಂಡಳಿ ಒಪ್ಪಿದ ನೀತಿಗೆ ಅನುಗುಣವಾಗಿ ಬ್ಯಾಂಕ್‌ಗಳು ತಾವು ನೀಡಿದ ಸಾಲವು ವಸೂಲಾಗದ ಸಾಲ ಎಂದು ವರ್ಗೀಕರಣ ಆದ ನಾಲ್ಕು ವರ್ಷಗಳ ನಂತರ, ಆ ಸಾಲವನ್ನು ರೈಟ್‌ ಆಫ್ ಮಾಡುತ್ತವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

ರೈಟ್‌ ಆಫ್‌ ಅಂದರೆ ಸಾಲ ಪಡೆದವನ ಹೊಣೆಗಾರಿಕೇಯೇನೂ ಕಡಿಮೆಯಾಗುವುದಿಲ್ಲ. ಆತನಿಗೆ ಇದರಿಂದ ಲಾಭವೇನೂ ಆಗುವುದಿಲ್ಲ. ಬ್ಯಾಂಕ್‌ಗಳು ಸಾಲ ವಸೂಲಾತಿ ಪ್ರಕ್ರಿಯೆಯನ್ನು ವಿವಿಧ ಮಾರ್ಗಗಳ ಮೂಲಕ ಮುಂದುವರಿಸುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್‌ಗಳು ಸಿವಿಲ್ ನ್ಯಾಯಾಲಯಗಳು ಅಥವಾ ಸಾಲ ವಸೂಲಾತಿ ನ್ಯಾಯಮಂಡಳಿಗಳಲ್ಲಿ ಮೊಕದ್ದಮೆ ಹೂಡುವುದು, ಹಣಕಾಸು ಆಸ್ತಿಗಳ ಭದ್ರತೆ, ಪುನರ್ನಿರ್ಮಾಣ ಮತ್ತು ಭದ್ರತಾ ಬಡ್ಡಿ ಕಾಯ್ದೆಯನ್ನು ಜಾರಿಗೊಳಿಸುವುದು, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಅಡಿಯಲ್ಲಿ ಕ್ರಮ ಕೈಗೊಳ್ಳುವಂತಹ ವಿವಿಧ ಕಾರ್ಯವಿಧಾನಗಳ ಮೂಲಕ ವಸೂಲಾತಿ ಪ್ರಯತ್ನಗಳನ್ನು ಮುಂದುವರಿಯಲಿವೆ ಎಂದಿದ್ದಾರೆ.

ಡಿಸೆಂಬರ್ 31, 2024 ರ ಹೊತ್ತಿಗೆ ನಿಗದಿತ ವಾಣಿಜ್ಯ ಬ್ಯಾಂಕ್‌ಗಳು 29 ವಿಶಿಷ್ಟ ಸಾಲಗಾರ ಕಂಪನಿಗಳನ್ನು ಎನ್‌ಪಿಎಗಳಾಗಿ ವರ್ಗೀಕರಿಸಿದ್ದು, ಪ್ರತಿಯೊಂದೂ ರೂ. 1,000 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಬಾಕಿ ಸಾಲಗಳನ್ನು ಹೊಂದಿದ್ದು, ಒಟ್ಟಾರೆಯಾಗಿ ರೂ. 61,027 ಕೋಟಿಗಳಷ್ಟಿದೆ ಎಂದು ತಿಳಿಸಿದ್ದಾರೆ.

ಬಾಕಿ ವಸೂಲಾತಿಗಾಗಿ ಬ್ಯಾಂಕ್‌ಗಳು ಸಾಲಗಾರರಿಗೆ ಕರೆ ಮಾಡುವುದು, ಇಮೇಲ್ ಮಾಡುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ಡೀಫಾಲ್ಟ್ ಮೊತ್ತವನ್ನು ಅವಲಂಬಿಸಿ ಬ್ಯಾಂಕ್‌ಗಳು ಕಾರ್ಪೊರೇಟ್ ಸಾಲಗಾರರಿಗಾಗಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ ಮೂಲಕ ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು ಎಂದು ಹೇಳಿದ್ದಾರೆ.

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...