ಕೇವಲ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದರೆ ಸಾಕಾಗುವುದಿಲ್ಲ, ಚೀನಾಕ್ಕೆ ತಕ್ಕ ಉತ್ತರವನ್ನು ನೀಡಬೇಕಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ 59 ಆಪ್‌ಗಳ ನಿಷೇಧದ ಕುರಿತು ಮಾತನಾಡಿ, ಈ ವಿಷಯವನ್ನು ನಿರ್ಧಾರ ತೆಗೆದುಕೊಳ್ಳಲು ಕೇಂದ್ರಕ್ಕೆ ಬಿಡುವುದಾಗಿ ಹೇಳಿದ್ದಾರೆ.
“ಇದು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಿಷಯವಾಗಿದೆ, ನಾವು ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ. ಆದರೆ, ನಾವು ಒಂದು ಕಡೆ ಬಹಳ ಆಕ್ರಮಣಕಾರಿಯಾಗಿರಬೇಕು ಮತ್ತು ಇನ್ನೊಂದೆಡೆ ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಅವರು ಹೇಳಿದ್ದಾರೆ.
“ಕೆಲವು ಅಪ್ಲಿಕೇಶನ್‌ಗಳನ್ನು ಮಾತ್ರ ನಿಷೇಧಿಸುವುದರಿಂದ ಸರಿಯಾದ ಉತ್ತರವಾಗುವುದಿಲ್ಲ, ನಾವು ಚೀನಾಕ್ಕೆ ಸೂಕ್ತವಾದ ಉತ್ತರವನ್ನು ನೀಡಬೇಕಾಗಿದೆ” ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.
ಭಾರತದಲ್ಲಿ ಜನಪ್ರಿಯತೆ ಹೊಂದಿರುವ ಟಿಕ್‌ಟಾಕ್ ಮತ್ತು ಯುಸಿ ಬ್ರೌಸರ್ ಸೇರಿದಂತೆ ಚೀನಾದ 59 ಆ್ಯಪ್‌ಗಳನ್ನು ಭಾರತ ಸೋಮವಾರ ನಿಷೇಧಿಸಿದೆ, ಇದು ದೇಶದ ಸಾರ್ವಭೌಮತ್ವ, ಸಮಗ್ರತೆ ಮತ್ತು ಸುರಕ್ಷತೆಗೆ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಹೇಳಿದೆ.
ಓದಿ: ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ನೀಡಿ: ಮಮತಾ ಬ್ಯಾನರ್ಜಿ ಮನವಿ


