Homeಮುಖಪುಟಶ್ವೇತಭವನದಲ್ಲಿ ಔತಣಕೂಟ: ಪ್ರಧಾನಿ ಮೋದಿ ಜೊತೆ ಅಂಬಾನಿ ದಂಪತಿ, ಪ್ರಮುಖ ಉದ್ಯಮಿಗಳು ಭಾಗಿ

ಶ್ವೇತಭವನದಲ್ಲಿ ಔತಣಕೂಟ: ಪ್ರಧಾನಿ ಮೋದಿ ಜೊತೆ ಅಂಬಾನಿ ದಂಪತಿ, ಪ್ರಮುಖ ಉದ್ಯಮಿಗಳು ಭಾಗಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಜೋ ಬೈಡನ್ ದಂಪತಿ ಶ್ವೇತಭವನದ ದಕ್ಷಿಣ ಭಾಗದಲ್ಲಿರುವ ಉದ್ಯಾನದಲ್ಲಿ ಮೋದಿ ಅವರಿಗಾಗಿ ಏರ್ಪಡಿಸಿದ್ದ ಔತಣಕೂಟದಲ್ಲಿ ರಿಲಯನ್ಸ್ ಗ್ರೂಪ್‌ನ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸೇರಿದಂತೆ ಪ್ರಮುಖ ಉದ್ಯಮಿಗಳು ಮತ್ತು ರಾಜಕಾರಣಿಗಳು ಸಹ ಸೇರಿ 400 ಜನ ಗಣ್ಯ ಅತಿಥಿಗಳು ಪಾಲ್ಗೊಂಡಿದ್ದಾರೆ.

ಅಧ್ಯಕ್ಷ ಜೋ ಬೈಡನ್ ದಂಪತಿ ಅಮಿರಿಕ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ರಾಜ್ಯ ಭೋಜನಕ್ಕೆ ಶ್ವೇತಭವನದಲ್ಲಿ ಪ್ರಧಾನಿ ಮೋದಿಯವರಿಗೆ ಆತಿಥ್ಯ ನೀಡಿದರು.

ಅಮೆರಿಕ ರಾಜಧಾನಿಯಲ್ಲಿ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ಕೆವಿನ್ ಮೆಕಾರ್ಥಿ ಅವರನ್ನು ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಕಾಂಗ್ರೆಸ್ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು.

ಔತಣಕೂಟದಲ್ಲಿ ರಿಲಯನ್ಸ್ ಗ್ರೂಪ್‌ನ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಸೇರಿದಂತೆ ಪ್ರಮುಖ ವ್ಯಾಪಾರ ನಾಯಕರು ಮತ್ತು ರಾಜಕಾರಣಿಗಳು ಸಹ ರಾಜ್ಯ ಔತಣಕೂಟದಲ್ಲಿ ಭಾಗವಹಿಸಿದ್ದರು. ಇಂದ್ರಾ ನೂಯಿ, ಪೆಪ್ಸಿಕೋದ ಮಾಜಿ ಅಧ್ಯಕ್ಷೆ ಮತ್ತು CEO ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರ, ಭಾರತೀಯ-ಅಮೆರಿಕನ್ ಚಲನಚಿತ್ರ ನಿರ್ಮಾಪಕ ಎಂ. ನೈಟ್ ಶ್ಯಾಮಲನ್, Zerodha ಸಹ-ಸಂಸ್ಥಾಪಕ ನಿಖಿಲ್ ಕಾಮತ್, US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಮತ್ತು ಅಡೋಬ್‌ನ CEO ಶಾಂತನು ನಾರಾಯಣ್ ಭಾಗಿಯಾದರು.

ಇದನ್ನೂ ಓದಿ: ಭಾರತ ಸರ್ಕಾರ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ದೇಶ ವಿಭಜನೆಯಾಗಬಹುದು: ಬರಾಕ್ ಒಬಾಮಾ ಎಚ್ಚರಿಕೆ

ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲ, ಪೆಪ್ಪಿಕೊ ಕಂಪನಿಯ ಮಾಜಿ ಸಿಇಒ ಇಂದ್ರಾ ನೂಯಿ, ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಬಾಲ್‌, ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಭಾರತ ಸರ್ಕಾರದ ಪ್ರತಿನಿಧಿಗಳು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್, ಯುಎಸ್‌ ಸ್ಪೀಕರ್ ನ್ಯಾನ್ಸಿ ಪೆಲೋಸಿ ಮತ್ತು ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಸೇರಿದಂತೆ ಭಾರತೀಯ ಮೂಲದ ಯುಎಸ್‌ ಪ್ರತಿನಿಧಿಗಳಾದ ರೋ ಖನ್ನಾ ಮತ್ತು ರಾಜಾ ಕೃಷ್ಣಮೂರ್ತಿ, ಜೆರೋಧಾ ಸಹ- ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಪ್ರಸಿದ್ಧ ಫ್ಯಾಷನ್ ಡಿಸೈನರ್‌ ರಾಲ್ಡ್ ಲಾರೆನ್ ಇದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...