Homeಕರ್ನಾಟಕಬಂಟ್ವಾಳ: ಸೇತುವೆಯಿಂದ ನದಿಗೆ ಹಾರಿ ಕಲ್ಲಡ್ಕದ ಯುವಕ ಆತ್ಮಹತ್ಯೆ; ಕೊರೊನಾ ಭಯವನ್ನು ಮೀರಿ ಉಸಿರುಕೊಡಲು ಪ್ರಯತ್ನಿಸಿದ...

ಬಂಟ್ವಾಳ: ಸೇತುವೆಯಿಂದ ನದಿಗೆ ಹಾರಿ ಕಲ್ಲಡ್ಕದ ಯುವಕ ಆತ್ಮಹತ್ಯೆ; ಕೊರೊನಾ ಭಯವನ್ನು ಮೀರಿ ಉಸಿರುಕೊಡಲು ಪ್ರಯತ್ನಿಸಿದ ಯುವಕ!

- Advertisement -
- Advertisement -

ಬಂಟ್ವಾಳದ ಪಾಣೆಮಂಗಳೂರು ಬಳಿಯ ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ನದಿಗೆ ಹಾರಿದ ಯುವಕನನ್ನು ಮೇಲಕ್ಕೆತ್ತಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಲಡ್ಕ ಬಳಿಯ ಕೊಳಕೀರು ನಿವಾಸಿ ಚಂದ್ರಹಾಸ ಮೂಲ್ಯ ಇವರ ಮಗನಾದ ನಿಶಾಂತ್ (28) ಎಂದು ಗುರುತಿಸಲಾಗಿದೆ. ಯುವಕ ದ್ವಿಚಕ್ರ ವಾಹನದಲ್ಲಿ ಬಂದು ಸೇತುವೆಯಿಂದ ಹಾರಿದ್ದಾರೆ ಎನ್ನಲಾಗಿದೆ.

ನಿಶಾಂತ್ ಹಾರಿದ್ದನ್ನು ಗಮನಿಸಿದ ಗೂಡಿನಬಳಿಯ ಯುವಕರಾದ ಝಿಯಾದ್ ಗೂಡಿನಬಳಿ, ಮಹೊಮ್ಮದ್ ಗೂಡಿನಬಳಿ, ಶಮೀರ್ ಗೂಡಿನಬಳಿ, ಮುಖ್ತಾರ್ ಅಕ್ಕರಂಗಡಿ, ತೌಸೀಫ್ ಗೂಡಿನಬಳಿ ಮುಂತಾದವರು ತಕ್ಷಣ ನದಿಗೆ ಧುಮುಕಿ ನದಿಯಿಂದ ಅವರನ್ನು ಮೇಲಕ್ಕೆತ್ತಿ ವಾಹನದಲ್ಲಿ ಹಾಕಿಕೊಂಡು ಬಂಟ್ವಾಳದ ಆಸ್ಪತ್ರೆಗೆ ದಾಖಲಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ.

Posted by Naanu Gauri on Sunday, May 24, 2020

ಈ ಬಗ್ಗೆ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿದ ಝಿಯಾದ್ ಗೂಡಿನಬಳಿ, “ಯುವಕನೊಬ್ಬ ಸೇತುವೆಯಿಂದ ಹಾರಿದ ಎಂದು ತಿಳಿದೊಡನೆ ನಾವು ಐದು ಮಂದಿ ನದಿಗೆ ಧುಮುಕಿ ಅವರನ್ನು ದಡಕ್ಕೆ ತಂದು, ಬಾಯಿಯ ಮೂಲಕ ಕೃತಕ ಉಸಿರಾಟ ಕೊಟ್ಟು ಹಾಗೂ ಇತರ ಪ್ರಥಮ ಚಿಕಿತ್ಸೆ ಕೊಟ್ಟು ಅಲ್ಲಿಂದ ಆಸ್ಪತ್ರೆಗೆ ದಾಖಲಿಸಿದ್ದೇವೆ”

ನದಿಗೆ ಧುಮುಕಿ ಯುವಕನನ್ನು ಉಳಿಸಲು ಪ್ರಯತ್ನಿಸಿದ ತಂಡದಲ್ಲಿದ್ದ ಝಿಯಾದ್ ಗೂಡಿನಬಳಿ

“ಕೆಲವರು ಕೊರೊನಾ ಸಮಯದಲ್ಲಿ ಬಾಯಿಯ ಮೂಲಕ ಉಸಿರಾಟ ಕೊಡಬೇಡಿ ಎಂದರೂ, ಜೀವವೊಂದನ್ನು ಉಳಿಸುವ ಭರದಲ್ಲಿ ಅದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಪ್ರಥಮ ಚಿಕಿತ್ಸೆ ಕೊಟ್ಟು ಆಸ್ಪತ್ರೆಗೆ ದಾಖಲಿಸಿದರೂ ನಮ್ಮ ಕೈಯಲ್ಲಿ ಜೀವವೊಂದನ್ನು ಉಳಿಸಲು ಆಗಲಿಲ್ಲ ಎನ್ನುವುದೇ ಅತ್ಯಂತ ದುಃಖದ ವಿಷಯ” ಎಂದು ಝಿಯಾದ್ ಬೇಸರಪಟ್ಟರು.

ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬಂಟ್ವಾಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಸುರೇಶ್ ತಿಳಿಸಿದ್ದಾರೆ.


ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...