Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...