Homeಕರ್ನಾಟಕಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

- Advertisement -
- Advertisement -

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ.

ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ನಡುವೆ ಸುಹಾಸ್ ಶೆಟ್ಟಿಯವರ ಮೃತದೇಹದ ಅಂತಿಮ ದರ್ಶನಕ್ಕೆಂದು ಬಿ.ಸಿ.ರೋಡಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ನಡುವೆ ಬೀಡಿಯ ಕಟ್ಟನ್ನು ತುಂಬಿಕೊಂಡು ಮೂರು ಮಂದಿ ಮುಸ್ಲಿಂ ಬೀಡಿ ವ್ಯಾಪಾರಸ್ಥರು ತುಂಬೆಯಿಂದ ಪಾಣೆಮಂಗಳೂರು ಕಡೆಗೆ ರಸ್ತೆ ಬದಿ ನಿಂತಿದ್ದ ಸಂಘಪರಿವಾರದ ಕಾರ್ಯಕರ್ತರ ನಡುವೆಯೇ ಸಾಗುತ್ತಿದ್ದರು.

ಮುಸ್ಲಿಂ ವ್ಯಾಪಾರಸ್ಥರು ಶುಕ್ರವಾರವಾದ್ದರಿಂದ ಬಿಳಿ ಅಂಗಿ, ಪಂಚೆ ಧರಿಸಿದ್ದನ್ನು ಗಮನಿಸಿದ ಕೆಲವು ಕಿಡಿಗೇಡಿಗಳು, ಆಟೋ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ಒಬ್ಬಾತ ಎದುರಿನಿಂದ ತನ್ನ ಕೈ ಪ್ರಯೋಗಿಸಿ ರಿಕ್ಷಾದ ಮುಂದಿನ ಗಾಜನ್ನು ಒಡೆದು ಹಾಕಿದ್ದಾನೆ. ಇನ್ನು ಕೆಲವರು ಹಿಂಬದಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ಕೂಡಲೇ ಗಮನಿಸಿದ ಘಟನಾ ಸ್ಥಳದಲ್ಲಿ ಬಂದೋಬಸ್ತಿನಲ್ಲಿದ್ದ ಕೆಲವು ಪೊಲೀಸ್ ಅಧಿಕಾರಿಗಳು, ರಿಕ್ಷಾದಲ್ಲಿದ್ದವರಿಗೆ ಹಲ್ಲೆ ನಡೆಸುವುದನ್ನು ತಪ್ಪಿಸಿದ್ದಾರೆ.

ಸಂಘಪರಿವಾರದ ಕಿಡಿಗೇಡಿಗಳ ದಾಂಧಲೆಯಿಂದ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ. ಅಲ್ಲದೇ, ಮೂವರು ವ್ಯಾಪಾರಿಗಳ ಪೈಕಿ ಓರ್ವ ವೃದ್ಧ ವ್ಯಾಪಾರಸ್ಥರಿಗೆ ಕಾಲಿನಿಂದ ಒದ್ದಿರುವುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಈದಿನ ಡಾಟ್ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ರಿಕ್ಷಾ ಚಾಲಕರು, “ನಾವು ನಮ್ಮಷ್ಟಕ್ಕೆ ತುಂಬೆಯಿಂದ ಪಾಣೆಮಂಗಳೂರು ಕಡೆಗೆ ಬೀಡಿಯ ಕಟ್ಟನ್ನು ತುಂಬಿಕೊಂಡು ಬರುತ್ತಿದ್ದೆವು. ರಸ್ತೆ ಬದಿಯಲ್ಲಿ ನಿಂತಿದ್ದವರು ಒಮ್ಮೆಲೆ ರಿಕ್ಷಾದ ಮೇಲೆ ಮುಗಿಬಿದ್ದಿದ್ದಾರೆ. ರಿಕ್ಷಾದಲ್ಲಿದ್ದ ವೃದ್ಧ ವ್ಯಾಪಾರಿಗೆ ಕಾಲಿನಲ್ಲಿ ತುಳಿದಿದ್ದಾರೆ. ನನ್ನ ರಿಕ್ಷಾದ ಮುಂಭಾಗದ ಗಾಜು ಹಾಗೂ ಹಿಂಬದಿಯ ಟಾಪ್ ಕವರನ್ನು ಹರಿದು ಹಾಕಿದ್ದಾರೆ” ಎಂದು ತಿಳಿಸಿದರು.

ರಿಕ್ಷಾದಲ್ಲಿ ಮುಸ್ಲಿಂ ಮಹಿಳೆಯರು ಇದ್ದರು ಎಂಬ ಮಾಹಿತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ “ಇಲ್ಲ. ನಮ್ಮ ರಿಕ್ಷಾದಲ್ಲಿ ಮಹಿಳೆಯರು ಇರಲಿಲ್ಲ. ಮೂವರು ಬೀಡಿ ವ್ಯಾಪಾರಸ್ಥರು ಹಾಗೂ ನಾನು ಸೇರಿ 4 ಮಂದಿ ಇದ್ದೇವಷ್ಟೇ” ಎಂದು ರಿಕ್ಷಾ ಚಾಲಕ ಈದಿನ ಡಾಟ್ಕಾಮ್ಗೆ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...