Homeಮುಖಪುಟಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

- Advertisement -
- Advertisement -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿಗಳು ವಕೀಲರಾಗಿ ನೋಂದಾಯಿಸಿಕೊಂಡ ನಂತರವಷ್ಟೇ ಬಾರ್ ಕೌನ್ಸಿಲ್‌ಗಳು ಅವರ ಮೇಲೆ ಶಿಸ್ತಿನ ನಿಯಂತ್ರಣವನ್ನು ಹೊಂದುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವು ಕೇವಲ ಅವರು ಓದುತ್ತಿರುವ ಮಾತೃ ಸಂಸ್ಥೆಗೆ (parent institution) ಅಥವಾ ಆ ಸಂಸ್ಥೆಯನ್ನು ನಿಯಂತ್ರಿಸುವ ನಿಯಮಗಳು ಮತ್ತು ಬೈಲಾಗಳ (byelaws) ಅಡಿಯಲ್ಲಿ ಸೂಚಿಸಲಾದ ಅಧಿಕಾರಿಗೆ ಮಾತ್ರ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಈ ಕಾನೂನು ನಿಲುವನ್ನು ಅನ್ವಯಿಸಿದ ಸುಪ್ರೀಂ ಕೋರ್ಟ್, ಹೈದರಾಬಾದ್‌ನ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ 2026ರ ಪದವಿ ಬ್ಯಾಚ್‌ನ ವಿದ್ಯಾರ್ಥಿಗಳ ನೋಂದಣಿಯನ್ನು ತಡೆಯಲು ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ (ಸಿಜೆಐ) ವಿರುದ್ಧ ಪ್ರತಿಭಟನೆ ನಡೆಸಿದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ವಿರುದ್ಧ ತನಿಖೆ ನಡೆಸಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ನೀಡಿದ್ದ ನಿರ್ದೇಶನಗಳು [ಇದನ್ನು ನಂತರ ಬಿಸಿಐ ಸ್ವತಃ ಹಿಂತೆಗೆದುಕೊಂಡಿತ್ತು] ಕಾನೂನುಬಾಹಿರ ಎಂದು ಘೋಷಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಆಗಸ್ಟ್ 13ರಂದು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ನೀಡಿದ್ದ ನಿರ್ದೇಶನಗಳನ್ನು ಪ್ರಶ್ನಿಸಿ ನಲ್ಸಾರ್‌ನ ಇಬ್ಬರು ಹಳೆಯ ವಿದ್ಯಾರ್ಥಿಗಳಾದ ಮಿಹಿರ ಸೂದ್ ಮತ್ತು ಅಭಿಷೇಕ್ ತಿವಾರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದೆ. ಸಾರ್ವಜನಿಕ ಆಕ್ರೋಶದ ನಂತರ, ಬಿಸಿಐ ಅಧ್ಯಕ್ಷರು ಈ ನಿರ್ದೇಶನಗಳನ್ನು ತಕ್ಷಣವೇ ಹಿಂತೆಗೆದುಕೊಂಡಿದ್ದರು.

ಆಗಸ್ಟ್ 14ರಂದು ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಬಿಸಿಐ ಅಧ್ಯಕ್ಷರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೆ, ಬಿಸಿಐ ಅಥವಾ ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ಗಳ ಒತ್ತಾಯದ ಮೇರೆಗೆ ನಲ್ಸಾರ್ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ಯಾವುದೇ ದಂಡನಾತ್ಮಕ ಅಥವಾ ಶಿಸ್ತು ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನೂ ನ್ಯಾಯಾಲಯ ಹೊರಡಿಸಿತ್ತು.

ಇಂದು (ಗುರುವಾರ, ಸೆ.3) ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಖಾಯಂಗೊಳಿಸುವ ಮೂಲಕ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್ ಅವರು, ಬಿಸಿಐ ಅಧ್ಯಕ್ಷರ ನಿರ್ದೇಶನಗಳನ್ನು ಹಿಂತೆಗೆದುಕೊಳ್ಳಲಾಗಿದ್ದರೂ, ಅವುಗಳನ್ನು ಹೊರಡಿಸಿದ ವಿಧಾನದ ಬಗ್ಗೆ ತನಿಖೆಯಾಗಬೇಕಿದೆ ಎಂದು ಆಗ್ರಹಿಸಿದ್ದಾರೆ. ಈ ಕಾರಣಕ್ಕಾಗಿ ಅರ್ಜಿ ಇನ್ನೂ ವಿಚಾರಣೆಯಲ್ಲಿದೆ ಎಂದು ತಿಳಿಸಿದ್ದಾರೆ.

“ಇದು ವಿಶ್ವವಿದ್ಯಾಲಯದಲ್ಲಿನ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ. ಇದು ಕೇವಲ ಒಬ್ಬ ವಿದ್ಯಾರ್ಥಿಗೆ ಸಂಬಂಧಿಸಿದ್ದಲ್ಲ. ಇಡೀ ವಿಶ್ವವಿದ್ಯಾಲಯದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಷೇಧಿಸುವ ವಿಷಯವಾಗಿದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಸಿಐ ಅಧ್ಯಕ್ಷ ಹಾಗೂ ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಅವರು, ಆಕ್ಷೇಪಾರ್ಹ ನಿರ್ದೇಶನಗಳನ್ನು ಹೊರಡಿಸಿದ ಒಂದು ಗಂಟೆಯೊಳಗೇ ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಈ ವೇಳೆ ವಕೀಲ ಕೆ. ಪರಮೇಶ್ವರ್ ಅವರು ಬಿಸಿಐ ಮೇಲಿನ ಹೊಣೆಗಾರಿಕೆಯನ್ನು ನಿಗದಿಪಡಿಸುವ ಅಗತ್ಯವನ್ನು ಒತ್ತಿಹೇಳಿದ್ದು, “ಈ ಆದೇಶಗಳನ್ನು ಯಾವ ಸಂದರ್ಭಗಳಲ್ಲಿ ಹೊರಡಿಸಲಾಯಿತು ಮತ್ತು ಈ ಬಗ್ಗೆ ಸಭೆಗಳನ್ನು ನಡೆಸಲಾಗಿದೆಯೇ ಎಂಬುದನ್ನು ನಾವು ತಿಳಿಯಲು ಬಯಸುತ್ತೇವೆ. ಏಕೆಂದರೆ, ಇದು ಕಾನೂನು ಶಿಕ್ಷಣ ಮತ್ತು ಕಾನೂನು ವೃತ್ತಿಯನ್ನು ನಿಯಂತ್ರಿಸುವ ಜವಾಬ್ದಾರಿಯುತ ಶಾಸನಬದ್ಧ ಪ್ರಾಧಿಕಾರವಾಗಿದೆ… ಅವರು ಈಗ ಪತ್ರಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ವಿಷಯ ಅದಲ್ಲ, ಇಡೀ ಬ್ಯಾಚ್‌ನ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಆರಂಭದಲ್ಲಿ ಹೇಳಿದ್ದರು… ಈ ಸಭೆಗಳು ಹೇಗೆ ನಡೆದವು, ಯಾರು ಈ ನಿರ್ಧಾರವನ್ನು ತೆಗೆದುಕೊಂಡರು ಮತ್ತು ಕಾನೂನಿನ ಯಾವ ನಿಬಂಧನೆಯ ಅಡಿಯಲ್ಲಿ ಇದನ್ನು ಮಾಡಲಾಯಿತು ಎಂಬುದನ್ನು ನಾವು ಬಾರ್ ಕೌನ್ಸಿಲ್‌ನಿಂದ ತಿಳಿಯಲು ಬಯಸುತ್ತೇವೆ. ಅವರ ಮೇಲೆ ಯಾವುದಾದರೊಂದು ರೀತಿಯಲ್ಲಿ ಹೊಣೆಗಾರಿಕೆಯನ್ನು ನಿಗದಿಪಡಿಸಲೇಬೇಕು…. ಇಂತಹ ಅನಿಯಂತ್ರಿತ ಮತ್ತು ಹಠಾತ್ ಧೋರಣೆಯ ಕ್ರಮಕ್ಕೆ ಉತ್ತರಿಸಲು ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ವಾದಿಸಿದ್ದಾರೆ. ಮುಂದುವರಿದು, ಕಾನೂನು ವಿದ್ಯಾರ್ಥಿಗಳ ಮೇಲೆ ಬಿಸಿಐಗೆ ಯಾವುದೇ ವ್ಯಾಪ್ತಿ ಅಥವಾ ಅಧಿಕಾರವಿಲ್ಲ ಮತ್ತು ವಿದ್ಯಾರ್ಥಿಗಳು ವಕೀಲರಾಗಿ ನೋಂದಾಯಿಸಿಕೊಂಡ ನಂತರವಷ್ಟೇ ಅವರ ನಡವಳಿಕೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ನಿರ್ದೇಶನಗಳನ್ನು ಈಗಾಗಲೇ ಹಿಂತೆಗೆದುಕೊಳ್ಳಲಾಗಿದೆ ಎಂಬುದನ್ನು ಪುನರುಚ್ಚರಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು, ಈ ವಿಷಯಕ್ಕೆ ಇಲ್ಲಿಗೇ “ಮಂಗಳ ಹಾಡಬೇಕು” ಎಂದು ವಿನಂತಿಸಿದ್ದಾರೆ. “ಎಲ್ಲವನ್ನೂ ಈಗಾಗಲೇ ಪರಿಹರಿಸಲಾಗಿದೆ. ಕೌನ್ಸಿಲ್ ತನ್ನ ಸಭೆಯಲ್ಲಿ, ಇನ್ನು ಮುಂದೆ ಏನೂ ಬಾಕಿ ಉಳಿದಿಲ್ಲ ಮತ್ತು ಎಲ್ಲವನ್ನೂ ಬಗೆಹರಿಸಲಾಗಿದೆ ಎಂದು ಹೇಳಿದೆ. ಆ ಪತ್ರವನ್ನು ತಕ್ಷಣವೇ ಹಿಂತೆಗೆದುಕೊಳ್ಳಲಾಗಿತ್ತು” ಎಂದು ಮಿಶ್ರಾ ಹೇಳಿದ್ದಾರೆ.

ವಕೀಲ ಕೆ. ಪರಮೇಶ್ವರ್ ಅವರ ವಾದವನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿಗಳು, “ಮಿಸ್ಟರ್ ಪರಮೇಶ್ವರ್ ಅವರ ವಾದ ಸರಿಯಾಗಿದೆ ಎಂದೇ ತೋರುತ್ತದೆ. ಕಾನೂನು ವಿದ್ಯಾರ್ಥಿಗಳ ಮೇಲೆ ಬಿಸಿಐಗೆ ಯಾವುದೇ ಅಧಿಕಾರ ವ್ಯಾಪ್ತಿ ಇಲ್ಲ. ಯಾರಾದರೂ ಕಾನೂನು ಶಿಕ್ಷಣ ಮುಗಿಸಿ ಹೊರಬಂದ ನಂತರ, ಅಂದರೆ ಒಬ್ಬ ಕಾನೂನು ಪದವೀಧರ ವಕೀಲರಾಗಿ ನೋಂದಾಯಿಸಿಕೊಂಡ ನಂತರವಷ್ಟೇ ಅವರ ನಡವಳಿಕೆಯನ್ನು ನಿಯಂತ್ರಿಸಲು ಬಿಸಿಐ ಶಾಸನಬದ್ಧ ಪ್ರಾಧಿಕಾರವಾಗುತ್ತದೆ. ಆದರೆ ವಿದ್ಯಾರ್ಥಿಗಳ ಮೇಲಲ್ಲ” ಎಂದು ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ.

Courtesy : livelaw.in




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...