Homeಮುಖಪುಟಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲಾಡಳಿತವು ಇತ್ತೀಚೆಗೆ ಅಕ್ರಮ ಕಟ್ಟಡ ಎಂದು ಮಸೀದಿಯೊಂದನ್ನು ಧ್ವಂಸಗೊಳಿಸಿತ್ತು. ಈ ಕುರಿತು ‘ದಿ ವೈರ್‌’ ಆನ್‌ಲೈನ್‌ ಸುದ್ದಿ ಸಂಸ್ಥೆಯು ಸಾಕ್ಷ್ಯಚಿತ್ರವೊಂದನ್ನು ತಯಾರಿಸಿತ್ತು. ಈ ಸಾಕ್ಷ್ಯಚಿತ್ರವು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದೆ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ ಎಂದು ಆರೋಪಿಸಿ ‘ದಿ ವೈರ್‌’ ವಿರುದ್ಧ ಬಾರಾಬಂಕಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಿ ವೈರ್‌ನ ಇಬ್ಬರು ಪತ್ರಕರ್ತರಾದ ಸಿರಾಜ್ ಅಲಿ, ಮುಕುಲ್ ಎಸ್ ಚೌಹಾಣ್‌‌ ಮತ್ತು ಮೊಹಮ್ಮದ್ ನಯೀಮ್, ಮೊಹಮ್ಮದ್ ಅನೀಸ್ ಎಂದು ಗುರುತಿಸಲ್ಪಟ್ಟ ಇತರ ಇಬ್ಬರ ಹೆಸರನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.

ಆದರೆ, ಈ ಆರೋಪಗಳನ್ನು ಆಧಾರರಹಿತ ಎಂದು ‘ದಿ ವೈರ್‌’ ಹೇಳಿದೆ. “ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

ಕಳೆದ ತಿಂಗಳು, ಬಾರಾಬಂಕಿ ಜಿಲ್ಲಾಡಳಿತವು ರಾಮ್‌ಸ್ನೇಹಿ ಘಾಟ್ ತಹಸಿಲ್ ಆವರಣದೊಳಗಿದ್ದ ಮಸೀದಿಯನ್ನು ನೆಲಸಮ ಮಾಡಿತ್ತು. ಜಿಲ್ಲಾಡಳಿತ ಇದನ್ನು “ಅಕ್ರಮ ಕಟ್ಟಡ” ಎಂದು ಕರೆದಿದೆ. ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಜಿಲ್ಲಾಡಳಿತದ ಕ್ರಮವನ್ನು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಡಳಿತದ ಕ್ರಮದ ವಿರುದ್ಧ ವಕ್ಫ್‌ ಮಂಡಳಿಯು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಪ್ರಕರಣವು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ.

“ಜೂನ್ 23 ರಂದು, ಆನ್‌ಲೈನ್ ನ್ಯೂಸ್ ಪೋರ್ಟಲ್ ದಿ ವೈರ್‌, ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ರಾಮ್‌ಸ್ನೆಹಿ ಘಾಟ್ ತಹಸಿಲ್ ಬಗ್ಗೆಗಿನ ವೀಡಿಯೊ ಸಾಕ್ಷ್ಯಚಿತ್ರವನ್ನು ಹಂಚಿಕೊಂಡಿದೆ. ಸಾಕ್ಷ್ಯಚಿತ್ರದಲ್ಲಿ, ಅವರು ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ನೀಡಿದ್ದಾರೆ”ಎಂದು ಬರಾಬಂಕಿ ಜಿಲ್ಲಾಧಿಕಾರಿ ಆದರ್ಶ್ ಸಿಂಗ್ ಗುರುವಾರ ರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ದಿ ವೈರ್‌ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ, ‘ಜಿಲ್ಲಾಡಳಿತವು ಧಾರ್ಮಿಕ ಗ್ರಂಥಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆದಿದೆ’ ಎಂದು ಹೇಳುವಂತಹ ಹಲವಾರು ತಪ್ಪು ಮತ್ತು ಆಧಾರರಹಿತ ಹೇಳಿಕೆಗಳು ಒಳಗೊಂಡಿದೆ. ಇದು ಸುಳ್ಳಾಗಿದ್ದು, ಈ ರೀತಿಯ ಏನೂ ಸಂಭವಿಸಿಲ್ಲ. ಈ ರೀತಿಯ ತಪ್ಪು ಮಾಹಿತಿಯೊಂದಿಗೆ, ದಿ ವೈರ್‌ ಸಮಾಜದಲ್ಲಿ ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಹಾಗೂ ಕೋಮು ಸೌಹಾರ್ದತೆಗೆ ಭಂಗ ತರುತ್ತಿದೆ” ಎಂದು ಆದರ್ಶ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೊಹಮ್ಮದ್ ನಯೀಮ್ ಸಾಕ್ಷ್ಯಚಿತ್ರದಲ್ಲಿ, ‘ಧಾರ್ಮಿಕ ಪುಸ್ತಕಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆಯಲಾಗುತ್ತಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಅವರು ಹೇಳಿದ್ದಾರೆ.

ಬರಾಬಂಕಿಯ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥಿಸುತ್ತಿರುವ ಚಿತ್ರ (PC: Syed Farooq Ahmad)

“ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮುಂದಿನ ಕ್ರಮಗಳು ನಡೆಯುತ್ತಿವೆ ”ಎಂದು ಯಮುನಾ ಪ್ರಸಾದ್ ತಿಳಿಸಿದ್ದಾರೆ.

ದಿ ವೈರ್‌ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಪ್ರತಿಕ್ರಿಯಿಸಿ, “ಇದು ಕಳೆದ 14 ತಿಂಗಳುಗಳಲ್ಲಿ ದಿ ವೈರ್ ಅಥವಾ ಅದರ ಪತ್ರಕರ್ತರ ವಿರುದ್ಧ ಯುಪಿ ಪೊಲೀಸರು ಸಲ್ಲಿಸಿದ ನಾಲ್ಕನೇ ಎಫ್‌ಐಆರ್. ಈ ಪ್ರತಿಯೊಂದು ಪ್ರಕರಣಗಳು ಆಧಾರರಹಿತವಾಗಿವೆ. ಆದಿತ್ಯನಾಥ್ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ನಂಬುವುದಿಲ್ಲ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಹೇಳಿದ್ದಾರೆ.

“ಉತ್ತರಪ್ರದೇಶದಲ್ಲಿ ರಾಜಕಾರಣಿಗಳು ಮತ್ತು ಸಾಮಾಜ ವಿರೋಧಿಗಳು ಬಹಿರಂಗವಾಗಿ ಕೋಮು ದ್ವೇಷವನ್ನು ಹುಟ್ಟುಹಾಕಬಹುದು ಮತ್ತು ಹಿಂಸಾಚಾರವನ್ನು ಸಮರ್ಥಿಸಬಹುದಾಗಿದೆ. ಆದರೆ ಪೊಲೀಸರು ಇವುಗಳನ್ನು ಕೋಮು ಸಾಮರಸ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಬೆದರಿಕೆಯಾಗಿ ನೋಡುವುದಿಲ್ಲ. ಆದರೆ ಆಡಳಿತದ ಕಡೆಯಿಂದ ತಪ್ಪು ಎಂದು ಆರೋಪಿಸುವ ಜನರ ಹೇಳಿಕೆಗಳನ್ನು ಪತ್ರಕರ್ತರು ವರದಿ ಮಾಡಿದಾಗ ತಕ್ಷಣವೆ ಎಫ್‌ಐಆರ್‌ಗಳನ್ನು ತಕ್ಷಣ ದಾಖಲಿಸಲಾಗುತ್ತದೆ. ಈ ತಂತ್ರಗಳಿಗೆ ವೈರ್‌ ಬೆದರುವುದಿಲ್ಲ” ಎಂದು ಸಿದ್ದಾರ್ಥ್‌ ವರದರಾಜನ್‌ ಹೇಳಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತದಲ್ಲಿ ನಿಜ ಹೇಳುವುದೇ ಅಪರಾಧವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...