Homeಮುಖಪುಟಬರೇಲಿ 'ಐ ಲವ್ ಮುಹಮ್ಮದ್' ಪ್ರತಿಭಟನೆ ಪ್ರಕರಣ: 50 ಜನರ ಬಂಧನ

ಬರೇಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನೆ ಪ್ರಕರಣ: 50 ಜನರ ಬಂಧನ

- Advertisement -
- Advertisement -

‘ಐ ಲವ್ ಮುಹಮ್ಮದ್’ ಪೋಸ್ಟರ್‌ಗಳ ಮೇಲಿನ ‘ಆಡಳಿತಾತ್ಮಕ ಕ್ರಮ’ವನ್ನು ವಿರೋಧಿಸಿ ಶುಕ್ರವಾರದ (ಸೆ.26) ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿತ್ತು.

ಇಸ್ಲಾಮಿಯಾ ಮೈದಾನದ ಬಳಿ ಧಾರ್ಮಿಕ ಘೋಷಣೆಗಳನ್ನು ಒಳಗೊಂಡ ಬ್ಯಾನರ್‌ಗಳು ಮತ್ತು ಫಲಕಗಳನ್ನು ಹಿಡಿದ 1,000ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು. ಅವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದರು. ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿತ್ತು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಪ್ರತಿಭಟನಾಕಾರರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಮತ್ತು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕನಿಷ್ಠ 10 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ಆರೋಪಿಸಿದೆ.

ಘಟನೆ ಸಂಬಂಧ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ ಸೇರಿದಂತೆ ಐವತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಮತ್ತು ನಗರದ ಮೂರರಿಂದ ನಾಲ್ಕು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

ಘಟನೆಯ ಬಳಿಕ ಬರೇಲಿಯಲ್ಲಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ವದಂತಿಗಳನ್ನು ನಂಬಬೇಡಿ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 4ರಂದು ಆಯೋಜಿಸಲಾಗಿದ್ದ ವಾರ್ಷಿಕ ಬರಾವಾಫತ್ ಮೆರವಣಿಗೆ ವೇಳೆ ‘ಐ ಲವ್ ಮುಹಮ್ಮದ್’ ಎಂಬ ಫಲಕವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಕಾನ್ಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಇದರ ವಿರುದ್ದ ಪ್ರತಿಭಟಿಸಿ ಪ್ರಧಾನಿಗೆ ಮನವಿ ಪತ್ರ ನೀಡಲು ಶುಕ್ರವಾರ ಬರೇಲಿ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸುವಂತೆ ತೌಕೀರ್ ರಝಾ ಖಾನ್ ಕರೆ ನೀಡಿದ್ದರು. ಅದರಂತೆ, ಶುಕ್ರವಾರದ ಜುಮಾ ಪ್ರಾರ್ಥನೆ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬರೇಲಿ ಎಸ್‌ಎಸ್‌ಪಿ ಅನುರಾಗ್ ಆರ್ಯ ಹೇಳಿದ್ದಾರೆ.

ಬರೇಲಿ ವಲಯದ ಡಿಐಜಿ ಅಜಯ್ ಕುಮಾರ್ ಸಹಾನಿ ಮಾತನಾಡಿ, ಪೊಲೀಸರ ಮೇಲೆ ದಾಳಿಗೆ ಪ್ರಚೋದನೆ ನೀಡಿದವರ ವಿಡಿಯೋಗಳು ಮತ್ತು ಕರೆ ದಾಖಲೆಗಳು ಲಭ್ಯವಾಗಿದೆ. ತಪ್ಪಿತಸ್ಥರನ್ನು ಗುರುತಿಸಿ ಬಂಧಿಸಲು ನಮ್ಮ ತಂಡಗಳು ಕಾರ್ಯ ಪ್ರವೃತ್ತವಾಗಿವೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲೂ, ‘ಐ ಲವ್ ಮುಹಮ್ಮದ್’ ಬ್ಯಾನರ್ ಅಡಿಯಲ್ಲಿ ಅನಧಿಕೃತ ಧಾರ್ಮಿಕ ಮೆರವಣಿಗೆಯನ್ನು ಹಮ್ಮಿಕೊಂಡ ಆರೋಪ ಕೇಳಿ ಬಂದಿದೆ. ಮೊಹಮ್ಮದಾಬಾದ್ ಪಟ್ಟಣದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಹೆಚ್ಚಾಗಿ ಮಕ್ಕಳು ಪಾಲ್ಗೊಂಡಿದ್ದರು. ಪೊಲೀಸರು ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಅವರು ಚದುರಿಹೋದರು. ಆದರೂ, ನಾಲ್ಕರಿಂದ ಐದು ಜನರನ್ನು ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಕಾನ್ಪುರದಲ್ಲಿ ಎಫ್‌ಐಆರ್ ದಾಖಲಾದ ನಂತರ ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ಸೆಪ್ಟೆಂಬರ್ 23 ರಂದು ಕಾನ್ಪುರ ಬ್ಯಾನರ್ ವಿವಾದವನ್ನು ವಿರೋಧಿಸಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಬೀಡ್‌ನಲ್ಲಿ ಪೊಲೀಸರು 35 ವರ್ಷದ ಧರ್ಮಗುರುವಿನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗುಜರಾತ್ ಮತ್ತು ಬಿಹಾರದಲ್ಲೂ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿವೆ.

ತಮಿಳುನಾಡು| ದಲಿತ ವಿದ್ಯಾರ್ಥಿಗಳಿಗೆ ಜಾತಿ ನಿಂದನೆ; ರಸ್ತೆ ಪ್ರವೇಶಿಸದಂತೆ ತಡೆದ ಪ್ರಬಲಜಾತಿ ವೃದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...