Homeಕರ್ನಾಟಕಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ವಿಜಯಪುರಕ್ಕೆ ಬಿಡುಗಡೆಯಾಗಿದ್ದ ಅನುದಾನ ಹಿಂಪಡೆದಿದ್ದಕ್ಕೆ 'ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದರು.

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ತಿಂಗಳು ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಹಿಂಪಡೆದುಕೊಂಡಿದ್ದಕ್ಕೆ ಗರಂ ಆಗಿ ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ವಿಜಯಪುರ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯ ಬಗ್ಗೆ ಭವಿಷ್ಯ ನುಡಿದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಹಾಗಾಗಿ ರಾಜ್ಯ ಸರ್ಕಾರ ಯತ್ನಾಳ್ ಅವರನ್ನು ತಣ್ಣಗಾಗಿಸಲು ಸುಮಾರು 50 ಕೊಟಿ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ

ಮುನಿಸಿಕೊಂಡಿದ್ದ ಯತ್ನಾಳ್ ಅವರನ್ನು ಒಲಿಸಿಕೊಳ್ಳಲು ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹಲವರು ಹೇಳಿದ್ದಾರೆ. ಇನ್ನುಮುಂದೆ ತಮ್ಮ ಕ್ಷೇತ್ರಕ್ಕೆ ಅನುದಾನ ಬರಬೇಕು ಎಂದರೆ ಮುಖ್ಯಮಂತ್ರಿ ವಿರುದ್ಧ ಮಾತನಾಡ ಬೇಕು ಎಂದು ಕೆಲವರು ವ್ಯಂಗ್ಯವಾಡಿದ್ದಾರೆ.

ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಉಮೇಶ್ ಕತ್ತಿ ಮೊನ್ನೆ ಮಾತನಾಡುತ್ತಾ, ಯಡಿಯೂರಪ್ಪ ಏನ್ ಶಿವಮೊಗ್ಗದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ್ದರು. ವಿಜಯಪುರಕ್ಕೆ ಬಿಡುಗಡೆಯಾಗಿದ್ದ 125 ಕೋಟಿ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಎಲ್ಲಾ ಅನುದಾನವನ್ನೂ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಬಹಳ ದಿನ ಯಡಿಯೂರಪ್ಪ ಅಧಿಕಾರದಲ್ಲಿ ಉಳಿಯುವುದಿಲ್ಲ. ಅವರದೂ ಬಂದೈತೆ. ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...