Homeಕರ್ನಾಟಕನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

- Advertisement -
- Advertisement -

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿದ್ದಾರೆ.

ಬಿಜೆಪಿಯ ಸಂಸದರು ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ನೋಟಿಸ್ ನೀಡಿದ್ದು ಹತ್ತು ದಿನದಲ್ಲಿ ಉತ್ತರಿಸಬೇಕು ಇಲ್ಲದಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂತರೀಕ ಪ್ರಜಾಪ್ರಭುತ್ವ ಇರುವ ಪಕ್ಷ.. ಹೈಕಮಾಂಡ್ ಸಂಸ್ಕೃತಿ ಅಲ್ಲ ಅನ್ನವು ಮಾಡಿರುವ ಘನಂದಾರಿ ಕೆಲಸ ಇದಾಗಿದೆ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿದೆ.

ನಾನು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ವಜ್ಜೆಯಾಗಿದ್ದೀನಿ ಅನ್ನಿಸುತ್ತದೆ. ಪ್ರಧಾನಮಂತ್ರಿಗಳ ಹಿಟ್‌ ಲಿಸ್ಟ್‌ ನಲ್ಲಿ ನಾನಿದ್ದಿನಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಅಂದು ಇಂದು ನಿಜವಾಗಿದ್ದು ಬಿಜೆಪಿಯ ಹಿರಿಯರ ಅದರಲ್ಲಿಯೂ ಮೋದಿ ಮತ್ತು ಅಮಿತ್‌ ಷಾ ವಿರುದ್ಧ ಮಾತಾಡಿದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂಬುದುನ್ನು ಬಿಜೆಪಿ ಇಲ್ಲಿ ಮತ್ತೊಮ್ಮೆ ತೋರಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. No dissent allowed from within and no dissent to be tolerated from without seems to be the policy of the powers that are ruling us. Indeed no dissent can come from any part of the world because we as Indian citizens cannot criticize because of the antinational tag and no foreigners cannot criticize this blessed country precisely because they are foreigners and it would be an act of interference on their part. What a fantastic way of protecting our dear motherland – – truly Mera Bharat Mahan.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...