Homeಮುಖಪುಟಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ.

- Advertisement -
- Advertisement -

ನಕಲಿ ಕನ್ನಡಪರ ಹೋರಾಟಗಾರರು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ. ಸದಾ ಸವಾಲು ಹಾಕುವ ಅವರು ನಾವು ಹಾಕುವ ಸವಾಲು ಸ್ವೀಕರಿಸದಿದ್ದರೆ ‘ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?’ ಎಂದು ಕರವೇ ಪ್ರಶ್ನಿಸಿದೆ.

ಮರಾಠ ಪ್ರಾಧಿಕಾರಿ ರಚಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪನವರ ನಡೆ ವಿರುದ್ಧ ಡಿಸೆಂಬರ್ 05 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಇದನ್ನು ವಿರೋಧಿಸಿದ್ದ ಯತ್ನಾಳ್, “ಕನ್ನಡಪರ ನಕಲಿ ಹೋರಾಟಗಾರರು ಮತ್ತು ರೋಲ್‌ಕಾಲ್‌ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಹೆದರಬಾರದು. ಡಿಸೆಂಬರ್ 05 ರಂದು ಅವರು ಹೇಗೆ ಬಂದ್ ಮಾಡುತ್ತಾರೆ ನೋಡುತ್ತೇನೆ’ ಎಂದು ಸವಾಲು ಹಾಕಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ “ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನು ಆಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ. ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡುಬಂದವರು ಯತ್ನಾಳ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ. ಇಲ್ಲವಾದಲ್ಲಿ ಬೂಟಾಟಿಕೆಯ ರಾಜಕೀಯ ಮಾಡುವುದನ್ನು ಬಿಟ್ಟುಬಿಡಲಿ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಯತ್ನಾಳ್ ಶಾಸಕರಾಗಿರುವ ಜಿಲ್ಲೆ ಬಿಜಾಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಪ್ರಶ್ನಿಸಲಿ ಎಂದು ಮೊದಲ ಸವಾಲು ಹಾಕಿದ್ದಾರೆ.

ತಮ್ಮ ಎರಡನೇ ಸವಾಲಿನಲ್ಲಿ “ಜಿಎಸ್‌ಟಿ ವ್ಯವಸ್ಥೆ ಜಾರಿಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ. ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ” ಎಂದಿದ್ದಾರೆ.

ಇದೆರಡು ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ? ಎಂದು ಕರವೇ ಪ್ರಶ್ನಿಸಿದೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮೊತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿ.ಜೆ.ಪಿ.ಶಾಸಕ ಬಸವನಗೌಡ ಯತ್ನಾಳ್ ಕನ್ನಡದ ಜಲ ನೆಲದ ಬಗ್ಗೆ ತನಗೆ ಮಾತಾಡುವ ಹಕ್ಕಿಲ್ಲಂದಾದಲ್ಲಿ
    ಕನಾ೯ಟಕ ಬಿಟ್ಟು ಮಹರಾಷ್ಟ್ರದಲ್ಲಿ ನೆಲೆ ಹೂರಿ ಮರಾಠಿಯರ ಪರವಾಗಿ ಹೋರಾಟ ಮಾಡಲಿ.

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...