Homeಮುಖಪುಟಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಈ ಹಿಂದೆಯಷ್ಟೇ ಶಾಸಕ ಬಸನಗೌಡ ಪಾಟೀಲ್‌ ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದರು.

- Advertisement -
- Advertisement -

ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಸಚಿವ ಸ್ಥಾನ ಸಿಗದೆ ಹತಾಶರಾಗಿ ಈ ರೀತಿ ಹುಚ್ಚು ಹುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ. ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಎಲ್ಲಾ ಶಾಸಕರು ಒತ್ತಾಯ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಶಾಸಕರಾದ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೇವಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಲ್ಲ. ಎಲ್ಲಾ ಸಮಾಜಕ್ಕೂ ಸೇರಿದ ಪ್ರಶ್ನಾತೀತ ನಾಯಕರಾಗಿದ್ದಾರೆ. ಆದರೆ ಕೆಲ ವೀರಶೈವ ಮುಖಂಡರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಇವರಿಗೆ ಅಧಿಕಾರ ನೀಡಿದವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್

ಮುಂದುವರೆದು ಶಾಸಕ ಬಸನಗೌಡ ಯತ್ನಾಳ್‌ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹಾಗಾಗಿ ಅವರು ಹುಚ್ಚರಂತ ಮಾತನಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಹಿಂದೆಯಷ್ಟೇ ಶಾಸಕ ಬಸನಗೌಡ ಪಾಟೀಲ್‌ರವರು ಯಡಿಯೂರಪ್ಪ ನಮ್ಮ ನಾಯಕರಲ್ಲ, ಅವರು ಮುಖ್ಯಮಂತ್ರಿ ಅಷ್ಟೇ. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಬಸನಗೌಡ ಹೇಳಿಕೆಯ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ವಿಜಯಪುರಕ್ಕೆ ತಡೆ ಹಿಡಿದಿದ್ದ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು.


ಇದನ್ನೂ ಓದಿ: ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

0
ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ 'ಆಲ್ ಐಸ್ ಆನ್ ರಫಾ' ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್...