Homeಮುಖಪುಟಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ ಎಂದು ಯತ್ನಾಳ್ ಹೇಳಿದ್ದರು.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದರೆ, ಸರ್ಕಾರದಲ್ಲಿ ಭ್ರಷ್ಟಾಚಾರ ಹೇಗಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದರು.

ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿಯ ಯತ್ತಪ್ಪನಹಟ್ಟಿ, ದೊಡ್ಡ ಅಗ್ರಹಾರ, ತರೂರು ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಡಿಕೆಶಿ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಜೆಪಿ ಸರಕಾರ ಸಹಕಾರ ನೀಡಲಿಲ್ಲ, ಇದು ದುಷ್ಟ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ರೈತ, ದಲಿತ, ಮಹಿಳೆಯರ ಪರವಾಗಿ ಮಾತನಾಡುವ ಶಕ್ತಿ ಇರುವುದು ಕಾಂಗ್ರೆಸ್‍ಗೆ ಮಾತ್ರ. ಕಾಂಗ್ರೆಸ್ ಎಲ್ಲ ವರ್ಗದವರ ಪರ ಮಾತನಾಡುತ್ತಿದೆ. ಅವರ ಪರ ಕೆಲಸ ಮಾಡುತ್ತದೆ. ಹಾಗಾಗಿ ಶಿರಾ ಮತದಾರರು ರಾಜ್ಯಕ್ಕೆ ಸಂದೇಶ ನೀಡಬೇಕಿದೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮತ ಚಲಾಯಿಸುವಂತೆ ಕರೆ ನೀಡಿದರು.

ರಾಜ್ಯದಲ್ಲಿ ಮುಂದೆ ಬಿಜೆಪಿ ಇರುವುದಿಲ್ಲ, ದಳದ ಬಗ್ಗೆ ಮಾತನಾಡೋಲ್ಲ, ಶಿರಾ ಉಪ ಚುನಾವಣೆಯಲ್ಲಿ ಜಯಚಂದ್ರ ಅವರ ಕೈಬಲಪಡಿಸಲು ಬಂದಿದ್ದೇವೆ, ಒಗ್ಗಟ್ಟಿನಿಂದ ಹೋರಾಡುವ ಮೂಲಕ ಜಯಚಂದ್ರ ಅವರನ್ನು ಗೆಲ್ಲಿಸಲು ಎಲ್ಲ ಮುಖಂಡರು ಶ್ರಮಿಸಬೇಕೆಂದು ಮನವಿ ಮಾಡಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಎಂಥ ಆಡಳಿತ ನೀಡುತ್ತಿದೆ ಎಂಬುದನ್ನು ಜನರು ಅನುಭವಿಸಿದ್ದಾರೆ. ಕೊರೋನಾದಿಂದ ಜನರು ಸಂಕಷ್ಟದಲ್ಲಿದ್ದರೂ ಬಿಜೆಪಿ ಬಂಡವಾಳಶಾಹಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಮಾತನಾಡಿ ಸುಳ್ಳು ಹೇಳುವ ಜಾಯಮಾನ ನಮ್ಮದಲ್ಲ, ಕೋವಿಡ್ ವೇಳೆ ಅನ್ನಭಾಗ್ಯದಿಂದ ಅನುಕೂಲ ಆಗಿದೆ, ಅಂತಹ ಬದ್ಧತೆ ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಎಂದರು.

ಜಯಚಂದ್ರ ಪಶು ಸಚಿವರಾಗಿದ್ದಾಗ, ಆಕಸ್ಮಿಕವಾಗಿ ಕುರಿ, ಮೇಕ ಸಾವನ್ನಪ್ಪಿದ್ದರೆ ಪರಿಹಾರ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದರು. ಬಿಜೆಪಿ ಸರ್ಕಾರ ಈ ಪರಿಹಾರ ಹಿಂಪಡೆದಿದ್ದಾರೆ. ಅವರಿಗೆ ಮತ ಕೇಳುವ ಅರ್ಹತೆ ಇದೆಯೇ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಕಲ್ಕೆರೆ ರವಿಕುಮಾರ್, ಮಾಜಿ ಸಂಸದ ಚಂದ್ರಪ್ಪ, ಎಂಎಲ್‍ಸಿ ವೇಣುಗೋಪಾಲ್, ಹೊನ್ನಗಿರಿಗೌಡ, ಸಾಸಲು ಸತೀಶ್, ಎಂ.ಡಿ.ಲಕ್ಷ್ಮೀನಾರಾಯಣ್ , ಗೀತಾರಾಜಣ್ಣ ಇತರರು ಇದ್ದರು.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...