Homeಕರ್ನಾಟಕಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ...

ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

- Advertisement -
- Advertisement -

ಬಸವಕಲ್ಯಾಣ ಉಪಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬಿಸಿ ಬಿಸಿ ಚರ್ಚೆಗಳು ತಾರಕಕ್ಕೇರಿವೆ. ಅಲ್ಲಿ ಜೆಡಿಎಸ್ ವತಿಯಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಕ್ಕೆ ಸಿಡಿಮಿಡಿಗೊಂಡಿರುವ ಕುಮಾರಸ್ವಾಮಿಯವರು ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಟಾಂಗ್ ನೀಡಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಮತ್ತೊಂದು ಪ್ರಶ್ನೆ ಎಸೆದಿದ್ದಾರೆ.

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ತಿಳಿಸಿದ್ದಾರೆ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ವ್ಯಂಗ್ಯವಾಡಿದ್ದಾರೆ.

ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್ ಮತ್ತು ಜೆಡಿಎಸ್‌ನಿಂದ ಸೈಯದ್ ಅಶ್ರಬ್ ಅಲಿಖಾನ್ ಸ್ಪರ್ಧಿಸಲಿದ್ದಾರೆ. ಏಪ್ರಿಲ್‌ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತ ಏಣಿಕೆ ನಡೆಯಲಿದೆ.


ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...