Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...