Homeಮುಖಪುಟಮುರುಘಾ ಮಠ: ಹಾಲಿ ಸಿಎಂಗೆ ‘ಬಸವಭೂಷಣ’, ಮಾಜಿ ಸಿಎಂಗೆ ‘ಶರಣಶ್ರೀ' ಪ್ರಶಸ್ತಿ

ಮುರುಘಾ ಮಠ: ಹಾಲಿ ಸಿಎಂಗೆ ‘ಬಸವಭೂಷಣ’, ಮಾಜಿ ಸಿಎಂಗೆ ‘ಶರಣಶ್ರೀ’ ಪ್ರಶಸ್ತಿ

‘ಬಸವಶ್ರೀ’ ಪ್ರಶಸ್ತಿಗೆ ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠ ಹಮ್ಮಿಕೊಳ್ಳುವ ಶರಣ ಸಂಸ್ಕೃತಿ ಉತ್ಸವದಲ್ಲಿ ನೀಡುವ ‘ಬಸವಭೂಷಣ’ ಹಾಗೂ ‘ಶರಣಶ್ರೀ’ ಪ್ರಶಸ್ತಿಗಳಿಗೆ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ.

‘ಬಸವಭೂಷಣ’ ಪ್ರಶಸ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ ‘ಶರಣಶ್ರೀ’ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಅ.18ರಂದು ಮುರುಘಾಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಿವಮೂರ್ತಿ ಮುರುಘಾ ಶರಣರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

‘ಬಸವಶ್ರೀ’ ಪ್ರಶಸ್ತಿಗೆ ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್‌ ಅವರನ್ನು ಆಯ್ಕೆ ಮಾಡಲಾಗಿದೆ. 2019ನೇ ಸಾಲಿನ ಪ್ರಶಸ್ತಿಗೆ ರಾಜೀವ್‌ ತಾರಾನಾಥ್‌ ಹಾಗೂ 2020ನೇ ಸಾಲಿಗೆ ಕಸ್ತೂರಿ ರಂಗನ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ. ಅ. 17ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುರುಘಾ ಶರಣರು ತಿಳಿಸಿದ್ದಾರೆ.

‘ಮುರುಘಾಶ್ರೀ’ ಪ್ರಶಸ್ತಿ: ‘ಪ್ರಜಾವಾಣಿ’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್‌, ಹೆಬ್ಬಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಶಿಕಾರಿಪುರ ಜುಬೇದ ವಿದ್ಯಾಸಂಸ್ಥೆಯ ಡಾ.ಅಮ್ಜದ್‌ ಹುಸೇನ್, ದೇಸಿ ಪದಶಕ್ತಿಯ ಶಬ್ದಗಾರುಡಿಗ ಯುಗಧರ್ಮ ರಾಮಣ್ಣ, ಅಖಿಲ ಭಾರತ ವೀರಶೈವ ಮಹಾಸಭಾದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಎಸ್. ನಾಗರತಿನಂ ಅವರನ್ನು ಮುರುಘಾಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ನಲ್ಲಿ 7 ವಿಶ್ವದಾಖಲೆ ಮುಡಿಗೇರಿಸಿಕೊಂಡಿರುವ ಬಾಲ ಪ್ರತಿಭೆ ಉಡುಪಿಯ ತನುಶ್ರೀ ಅವರನ್ನು ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುರುಘಾಶ್ರೀ ಮತ್ತು ಶೌರ್ಯ ಪ್ರಶಸ್ತಿಯು 25 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅ.13ರಂದು ಮುರುಘಾಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನ

0
ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ. 81 ವರ್ಷ ಪ್ರಾಯದ ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಇಂದು ನಿಧರಾಗಿದ್ದಾರೆ. ಹುಣಸೂರಿನಲ್ಲಿ ಆಗಸ್ಟ್ 19,1942ರಂದು ದ್ವಾರಕೀಶ್ ಜನಿಸಿದ್ದಾರೆ....