Homeಕರ್ನಾಟಕಬಸವಕಲ್ಯಾಣ: ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ

ಬಸವಕಲ್ಯಾಣ: ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ

- Advertisement -
- Advertisement -

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರು ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.

ರಾತ್ರಿ ಸಮಯದಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದನು. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ ಗಲಾಟೆ ಮಾಡುತ್ತಿದ್ದನಂತೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಆಪ್ತ ಸಮಾಲೋಚನೆಯಲ್ಲಿ ಬಾಲಕಿ ಸಂಗತಿಯನ್ನು ತೆರೆದಿಟ್ಟಿದ್ದಾಳೆ. ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಭೋಪಾಲ್: ದೇವಾಲಯದ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು , ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಭಿಕ್ಷೆ ಬೇಡುತ್ತಿದ್ದ ಬಾಲಕಿ ಮೇಲೆ ದೇವಾಲಯದ ಆಡಳಿತ ಸಿಬ್ಬಂದಿಯೇ ದೇವಾಲಯದ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿತ್ತು.

ಮೈಹಾರ್​ ದೇವಾಲಯದ ಆಡಳಿತ ಸಮಿತಿಯ ಇಬ್ಬರು ನೌಕರರು ಬಾಲಕಿಗೆ ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಅತ್ಯಾಚಾರ ನಡೆಸಿದ್ದರು. ಗುರುವಾರ ಅತ್ಯಾಚಾರ ನಡೆದಿದ್ದು, ಮರುದಿನ ಬೆಳಕಿಗೆ ಬಂದಿದೆ. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ರೇವಾದಲ್ಲಿರುವ ಸಂಜಯ್​ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಪಿಗಳನ್ನು ರವಿ ಚೌಧರಿ ಹಾಗೂ ಅತುಲ್​ ಬಧೋಲಿಯಾ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರದ ಬೆಳವಣಿಗೆಯಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್​ ಇಲಾಖೆ ಸಿಬ್ಬಂದಿ ಸೇರಿ ಅತ್ಯಾಚಾರ ಆರೋಪಿಗಳಿಬ್ಬರ ಮನೆಗಳನ್ನು ಬುಲ್ಡೋಜರ್​ನಿಂದ ಕೆಡವಿದ್ದರು.

ಮಂಗಳೂರು: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು, ಬಾಲಕಿ ಗರ್ಭಿಣಿಯಾಗಿರುವ ಘಟನೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿತ್ತು.

ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಸಿಕ್ಕಿ ಮಾತನಾಡುತ್ತಿದ್ದಾತ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಬಂದು, ಬಾಲಕಿಯ ಬಾಯಿಗೆ ಕೈ ಹಿಡಿದು, ಪಕ್ಕದ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದನು. ಅದಷ್ಟೇ ಅಲ್ಲದೆ ಬೇರೆ ಸಮಯದಲ್ಲೂ ಬಾಲಕಿ ಒಬ್ಬಳೇ ಇದ್ದಾಗ ಬಂದು ಅತ್ಯಾಚಾರ ನಡೆಸಿದ್ದನು. ಇದರಿಂದ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತನ್ನ ತಾಯಿ ಜೊತೆ ಬಂದು ಮಂಗಳೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸಂತ್ರಸ್ತರಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ; ಇಂದು ವಿಚಾರಣೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...