Homeಕರ್ನಾಟಕಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

- Advertisement -
- Advertisement -

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರವನ್ನು ಬರೆದಿದ್ದು, ಗುರು ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು. ಬಸವಣ್ಣನವರು ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರಾಗಿದ್ದಾರೆ. ಕಲ್ಯಾಣದ ಅನುಭವ ಮಂಟಪದ 770 ಶರಣ-ಶರಣೇಯರನ್ನು ಹಾಗೂ ಸಾವಿರಾರು ಜಂಗಮರನ್ನು ಒಗ್ಗೂಡಿಸಿ ಕನ್ನಡದಲ್ಲಿ ವಚನ ಸಂಸ್ಕೃತಿಯನ್ನು ಪಸರಿಸಿ, ಸಮಾನತೆಯ ಸಂದೇಶ ಸಾರಿದ್ದಾರೆ. 12ನೇ ಶತಮಾನದಲ್ಲಿಯೇ ಗುರು ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಜನರಿಗೂ ಅವಕಾಶ ಕಲ್ಪಿಸಿ ಸಮಾನತೆಯನ್ನು ಪ್ರತಿಪಾದಿಸಿದ್ದರು. ಮುಂದೆ ಸ್ವಾತಂತ್ರದ ನಂತರ ಬಾಬಾ ಸಾಹೇಬ್‌ ಡಾ. ಬಿ.ಆರ್. ಅಂಬೇಡ್ಕರ್‌ರವರು ಭಾರತ ಸಂವಿಧಾನವನ್ನು ರಚಿಸಿ ದೇಶದಲ್ಲಿ ಸರ್ವರಿಗೂ ಸಮಾನತೆಯನ್ನು ಕಲ್ಪಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೆ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ “ಸಾಂಸ್ಕೃತಿಕ ನಾಯಕ “ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇದೆ. ಆದ್ದರಿಂದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ.

ಇದನ್ನು ಓದಿ: ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...