Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...