Homeಕರ್ನಾಟಕರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

- Advertisement -
- Advertisement -

ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಹಾಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ಸಂಜೆ 3:30 ಕ್ಕೆ ಪ್ರಮಾಣ ವಚನ ನಡೆಯಲಿದೆ ಎಂದು ವರದಿಯಾಗಿದೆ. ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೇ ಲಿಂಗಾಯತ ಶಾಸಕರನ್ನೇ ಬಿಜೆಪಿ ಆಯ್ಕೆ ಮಾಡಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ಈ ಹಿಂದೆಯೆ ವರದಿ ಮಾಡಿದ್ದವು.

ಮುಖ್ಯಮಂತ್ರಿ ರೇಸ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರು ಇತ್ತಾದರೂ ಕೊನೆಯ ಹಂತದಲ್ಲಿ ಬಸವರಾಜ್‌ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಸಂಜೆಯೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‌ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಿಗೆ ಬಸವರಾಜ್‌ ಬೊಮ್ಮಾಯಿ ಅವರು ಕೂಡಾ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ಭಾರಿ ಕೂತೂಹಲ ಮೂಡಿಸಿತ್ತು.

ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ನಂತರ ಬಿಎಲ್ ಸಂತೋಷ್‌, ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತಾದರೂ, ಅಂತಿಮವಾಗಿ ಬಸವರಾಜ್‌ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಬಸವರಾಜ್ ಬೊಮ್ಮಾಯಿ ಯಾರು?

ಜನವರಿ 28, 1960 ರಂದು ಜನಿಸಿದ ಬಸವರಾಜ್ ಬೊಮ್ಮಾಯಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅವರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದು, ‘ಜನತಾ ಪರಿವಾರ’ ಮೂಲದವರಾಗಿದ್ದಾರೆ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಬಸವರಾಜ್ ಬೊಮ್ಮಾಯಿ 2008 ರಲ್ಲಿ ಬಿಜೆಪಿಗೆ ಸೇರಿದ್ದ ಅವರು, ಅಂದಿನಿಂದ ಪಕ್ಷದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತಲೆ ಬಂದಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅವರು ಟಾಟಾ ಸಮೂಹದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ಬಿಜೆಪಿಯ ಈ ಹಿಂದಿನ ಆಡಳಿತದಲ್ಲಿ ಒಟ್ಟು ಐದು ವರ್ಷ ಜಲಸಂಪನ್ಮೂಲ ಸಚಿವರಾಗಿಯು ಅವರು ಸೇವೆ ಸಲ್ಲಿಸಿದ್ದರು. ಬೊಮ್ಮಾಯಿ ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಿಂದ ಎರಡು ಬಾರಿ ಎಂಎಲ್‌ಸಿ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ…ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...