Homeಕರ್ನಾಟಕರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ‘ಬಸವರಾಜ್ ಬೊಮ್ಮಾಯಿ’ ಸಾಧ್ಯತೆ!

- Advertisement -
- Advertisement -

ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೇ ಲಿಂಗಾಯತ ಶಾಸಕರನ್ನೇ ಬಿಜೆಪಿ ಆಯ್ಕೆ ಮಾಡಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪ್ರಸ್ತುತ ರಾಜ್ಯ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಮತ್ತು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರುಗಳು ಮುಂಚೂಣಿಗೆ ಬಂದಿದೆ. ಇಬ್ಬರು ಕೂಡಾ ಲಿಂಗಾಯತ ಸಮುದಾಯದ ವ್ಯಕ್ತಿಗಳಾಗಿರುವುದರಿಂದ ಎಲ್ಲರ ದೃಷ್ಟಿ ಸಂಜೆ ಏಳು ಗಂಟೆಯ ನಂತರ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಯತ್ತ ನೆಟ್ಟಿದೆ.

ಈಗಾಗಲೇ ಬಿಜೆಪಿಯ ಕೇಂದ್ರ ನಾಯಕತ್ವದ ಕಡೆಯ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಮತ್ತು ಕಿಶನ್‌ ರೆಡ್ಡಿ ಬೆಂಗಳೂರು ತಲುಪಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‌ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಇದರ ನಂತರ ಬಸವರಾಜ್ ಬೊಮ್ಮಾಯಿ ಅವರು ಕೂಡಾ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರ ವಹಿಸಿ 2 ತಿಂಗಳು ಸಂಪುಟ ರಚನೆಗೆ ಕೇಂದ್ರದವರು ಬಿಡಲಿಲ್ಲ…ಹುಚ್ಚನಂತೆ ಸುತ್ತಾಡಿದೆ: ಯಡಿಯೂರಪ್ಪ

ಮುಖ್ಯಮಂತ್ರಿ ರೇಸ್‌ನಲ್ಲಿ ಅರವಿಂದ ಬೆಲ್ಲದ್ ಅವರ ಹೆಸರು ಇದ್ದರೂ, ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಹೊಸ ಮುಖ್ಯಮಂತ್ರಿಯನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಲಿದ್ದಾರೆ ಎಂದು ಕೂಡಾ ಹೇಳಲಾಗಿದೆ.

ಲಿಂಗಾಯತ ಶಾಸಕರಲ್ಲೇ ಹೆಚ್ಚು ಪ್ರಭಾವಶಾಲಿಯಾಗಿರುವ, ಪ್ರಸ್ತುತ ಕರ್ನಾಟಕ ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಬಸವರಾಜ್ ಬೊಮ್ಮಾಯಿ ಯಾರು?

ಜನವರಿ 28, 1960 ರಂದು ಜನಿಸಿದ ಬಸವರಾಜ್ ಬೊಮ್ಮಾಯಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅವರು ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದು, ‘ಜನತಾ ಪರಿವಾರ’ ಮೂಲದವರಾಗಿದ್ದಾರೆ. ಅವರ ತಂದೆ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ಬಸವರಾಜ್ ಬೊಮ್ಮಾಯಿ 2008 ರಲ್ಲಿ ಬಿಜೆಪಿಗೆ ಸೇರಿದ್ದ ಅವರು, ಅಂದಿನಿಂದ ಪಕ್ಷದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತಲೆ ಬಂದಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಅವರು ಟಾಟಾ ಸಮೂಹದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಿಂದ ಎರಡು ಬಾರಿ ಎಂಎಲ್‌ಸಿ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನು ಬದಲಿಸುವ ಔಪಚಾರಿಕ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಜೆಪಿ ಇಂದು ಸಂಜೆ 7 ಗಂಟೆಗೆ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಪಕ್ಷದ ಕೇಂದ್ರ ನಾಯಕತ್ವವು ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ರಾಜ್ಯ ಘಟಕಕ್ಕೆ ನಿರ್ದೇಶನ ನೀಡಿದೆ.

“ಇಂದು ಸಂಜೆ 7 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಇದರ ನಂತರ ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಲ್ಲಿ ಹೊಸ ಮುಖ್ಯಮಂತ್ರಿ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಬಸವರಾಜ್ ಬೊಮ್ಮಾಯಿ ಖಾಸಗಿ ವಾಹಿನಿಯೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...