Homeಕರ್ನಾಟಕಮುರುಘಾ ಶರಣರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದಲ್ಲಿ ಬಂಧನದಲ್ಲಿದ್ದ ಬಸವರಾಜನ್‌ಗೆ ಜಾಮೀನು

ಮುರುಘಾ ಶರಣರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದಲ್ಲಿ ಬಂಧನದಲ್ಲಿದ್ದ ಬಸವರಾಜನ್‌ಗೆ ಜಾಮೀನು

- Advertisement -
- Advertisement -

ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕ್ರಿಮಿನಲ್ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಶಾಸಕ ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್‌.ಕೆ.ಬಸವರಾಜನ್‌ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಸ್ವಾಮೀಜಿಯನ್ನು ಸೆಪ್ಟೆಂಬರ್ 1ರಿಂದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಬಸವರಾಜನ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ರಜಾಕಾಲದ ಪೀಠ ಗುರುವಾರ ವಿಚಾರಣೆ ನಡೆಸಿತು. ಬಸವರಾಜನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಹಸ್ಮತ್ ಪಾಷಾ, “ಬಸವರಾಜನ್‌ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ” ಎಂದು ತಿಳಿಸಿದರು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಶಿವಮೂರ್ತಿ ಅವರನ್ನು ಬಂಧಿಸಿದ ನಂತರ ಬಸವರಾಜನ್ ವಿರುದ್ಧ ಆರೋಪಗಳನ್ನು ಹೊರಿಸಿ ಪ್ರತಿದೂರು ದಾಖಲಿಸಲಾಗಿದೆ ಎಂದು ವಾದಿಸಿದರು.

“ಬಸವರಾಜನ್ ಅವರ ವಿರುದ್ಧದ ಆರೋಪಗಳು ಸುಳ್ಳಿನಿಂದ ಕೂಡಿದ್ದು, ಅವರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ” ಎಂದು ವಕೀಲರು ತಿಳಿಸಿದ್ದಾರೆ.

ಕ್ರಿಮಿನಲ್ ಸಂಚು, ಸುಲಿಗೆ, ವಂಚನೆ ಮತ್ತು ಅಪ್ರಾಪ್ತ ಬಾಲಕಿಯರಿಗೆ ಕುಮ್ಮಕ್ಕು ನೀಡಿದ ಆರೋಪವನ್ನು ಬಸವರಾಜನ್ ಅವರ ಮೇಲೆ ಹೊರಿಸಲಾಗಿದೆ. ಶಿವಮೂರ್ತಿ ಬಂಧನದ ನಂತರ ಮಠದ ಉಸ್ತುವಾರಿಯಾಗಿರುವ ಬಸವಪ್ರಭು ಅವರು ಬಸವರಾಜನ್ ವಿರುದ್ಧ ದೂರು ದಾಖಲಿಸಿದ್ದಾರೆ.

ಇಬ್ಬರು ಬಾಲಕಿಯರು ತಮ್ಮ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಮುರುಘಾ ಮಠಾಧೀಶರ ಮೇಲೆ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ಅವರಲ್ಲಿ ಒಬ್ಬ ಬಾಲಕಿ ಒಂದೂವರೆ ವರ್ಷ ಮತ್ತು ಇನ್ನೊಬ್ಬ ಬಾಲಕಿ ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. 11 ಮಂದಿಯ ಮೇಲೆ ಶಿವಮೂರ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯರು ಆರೋಪಿಸಿದ್ದರು.

ಎಫ್‌ಐಆರ್ ದಾಖಲಾದ ಆರು ದಿನಗಳ ನಂತರ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದರು. ಈಗ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ಐದು ಬಾರಿ ಜಾಮೀನು ನಿರಾಕರಿಸಲಾಗಿದೆ. ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಪೋಕ್ಸೋ ಕಾಯ್ದೆ ಸೇರಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಮುರುಘಾ ಮಠಾಧೀಶರ ವಿರುದ್ಧ ಪ್ರಕರಣ ದಾಖಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

0
'ನಮ್ಮ ಸಂವಿಧಾನವೇ ನಮಗೆ ಅಂತಿಮ; ಈಗ ಅವರು ಅದನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಮಾನವತಾವಾದಿ ಸಂವಿಧಾನವನ್ನು ಈಗ ಮನುವಾದಿ ಸಂವಿಧಾನ ಮಾಡಲು ಹೊರಟಿದ್ದಾರೆ' ಎಂದು ಭಾರತೀಯ ವಿಚಾರವಾದಿಗಳ ಸಂಘಗಳ ಒಕ್ಕೂಟದ ಪ್ರೊಫೆಸರ್ ನರೇಂದ್ರ ನಾಯಕ್...