Homeಮುಖಪುಟಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

ಬಸ್ತಾರ್‌‌: ತಮ್ಮ ಕುಟುಂಬದವರ ಮೇಲಾದ ಪೊಲೀಸ್‌ ದೌರ್ಜನ್ಯ ಖಂಡಿಸಿ ಸಹಾಯಕ ಕಾನ್‌ಸ್ಟೇಬಲ್‌ಗಳ ಪ್ರತಿಭಟನೆ

- Advertisement -
- Advertisement -

ಛತ್ತೀಸ್‌ಘಡ ರಾಜ್ಯದ ಬಸ್ತಾರ್ ಜಿಲ್ಲೆಯ ಬಿಜಾಪುರದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನೂರಾರು ಸಹಾಯಕ ಕಾನ್‌ಸ್ಟೆಬಲ್‌ಗಳು ಡಿಸೆಂಬರ್ 8ರಂದು ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ರಾಜ್ಯ ಸರ್ಕಾರದ ವಿರುದ್ಧ‍ ಪ್ರತಿಭಟನೆ ನಡೆಸಿದ್ದಾರೆ.

ದೀರ್ಘಕಾಲದ ಬೇಡಿಕೆಗಳಾದ ಪೊಲೀಸ್ ಪಡೆಗಳಲ್ಲಿ ಖಾಯಂಗೊಳಿಸುವಿಕೆ, ಸಂಬಳ ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕಾಗಿ ಒತ್ತಾಯಿಸಿ ಪೊಲೀಸ್ ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ.

ಸಹಾಯಕ ಕಾನ್‌ಸ್ಟೇಬಲ್‌ಗಳ ಕುಟುಂಬ ಸದಸ್ಯರು ಪೊಲೀಸ್ ಪ್ರಧಾನ ಕಚೇರಿಗೆ ಘೇರಾವ್ ಹಾಕಲು (ಮುತ್ತಿಗೆ ಹಾಕಲು) ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ತಡೆದಿದ್ದಾರೆ. ಹೋರಾಟದ ಭಾಗವಾಗಿದ್ದ ಕೆಲವು ಮಹಿಳೆಯರು, “ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ, ಪೊಲೀಸರು ಥಳಿಸಿದ್ದಾರೆ. ನಮ್ಮ ಬಟ್ಟೆಗಳನ್ನು ಹರಿದಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಸಿದ ಮಹಿಳೆಯರು, ಮಕ್ಕಳು ಮತ್ತು ಗಂಡಸರನ್ನು ರಾಯ್‌ಪುರದ ಸಪ್ರೆ ಶಾಲೆಯಲ್ಲಿರುವ ತಾತ್ಕಾಲಿಕ ಜೈಲಿನಲ್ಲಿ ಇರಿಸಲಾಗಿತ್ತು.

ತಮ್ಮ ಕುಟುಂಬದವರ ಮೇಲಾದ ಈ ದೌರ್ಜನ್ಯದಿಂದ ಕುಪಿತರಾದ ಬಿಜಾಪುರದ ಕುಟ್ರು, ಪೊಲೀಸ್ ಲೈನ್, ಮಿರ್ತೂರು, ಗಂಗಾಳೂರು ಮತ್ತು ಇತರ ಪ್ರದೇಶಗಳಲ್ಲಿ ನಿಯೋಜಿಸಲಾದ ಸಹಾಯಕ ಕಾನ್‌ಸ್ಟೇಬಲ್‌ಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಸಹಾಯಕ ಕಾನ್‌ಸ್ಟೇಬಲ್‌ಗಳು ಶಸ್ತ್ರಾಸ್ತ್ರಗಳನ್ನು ಠಾಣೆಗೆ ಒಪ್ಪಿಸಿರುವುದು… (PC: The Wire)

ಇದನ್ನೂ ಓದಿರಿ: ಆತ್ಮಚರಿತ್ರೆಯಲ್ಲಿ ‘ಅಯೋಧ್ಯೆ ತೀರ್ಪು ಆಚರಣೆ’ ಶಿರ್ಷಿಕೆ; ವಿವಾದದ ನಂತರ ‘ಅದು ಆಚರಣೆಯಲ್ಲ’ ಎಂದ ನಿವೃತ್ತ ಸಿಜೆಐ ರಂಜನ್ ಗೊಗೊಯ್


ಪ್ರತಿಭಟನಾಕಾರರಲ್ಲಿ ಒಬ್ಬರಾದ ರಮೇಶ ಕೊಸರೆ ಮಾತನಾಡಿ, “ನನ್ನನ್ನು ಸಹಾಯಕ ಕಾನ್‌ಸ್ಟೆಬಲ್ ಆಗಿ ನಿಯೋಜಿಸಲಾಗಿದೆ. ನನ್ನ ಕುಟುಂಬ ಸದಸ್ಯರು ರಾಯ್‌ಪುರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಆದರೆ ರಾಜಧಾನಿಯಿಂದ 28 ಕಿಮೀ ಮುಂದಿರುವ ಅಭನ್‌ಪುರದಲ್ಲಿ ಅವರನ್ನು ತಡೆದು ಥಳಿಸಲಾಯಿತು. ನಮ್ಮ ಕುಟುಂಬದ ಮಹಿಳೆಯರನ್ನು ಇರಿಸಿದ್ದ ಕೊಠಡಿಗಳಲ್ಲಿ ದೀಪಗಳನ್ನು ಆಫ್ ಮಾಡಲಾಯಿತು. ಮಹಿಳೆಯರ ಮೇಲೆ ವಾರ್ಡನ್‌ಗಳು ಹಲ್ಲೆ ನಡೆಸಿದರು” ಎಂದು ಆರೋಪಿಸಿದ್ದಾರೆ.

“ಬಸ್ತಾರ್‌ ಪ್ರದೇಶವು ನಕ್ಸಲ್‌ ಚಟುವಟಿಕೆಗಳಿಗೆ ಪ್ರಸಿದ್ಧವಾಗಿದೆ. ನಕ್ಸಲ್ ಚಟುವಟಿಕೆ ಹೆಚ್ಚಿರುವ ಕಾಡುಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣಾಪಾಯವಿದ್ದರೂ ಸೇವೆ ಸಲ್ಲಿಸಲಾಗುತ್ತಿದೆ” ಎಂದು ಸಹಾಯಕ ಕಾನ್‌ಸ್ಟೆಬಲ್‌ಗಳು ಹೇಳುತ್ತಿದ್ದಾರೆ. ಆದರೆ ಪ್ರತಿಯಾಗಿ ಬಹಳ ಕಡಿಮೆ ವೇತನವನ್ನು ನೀಡಲಾಗುತ್ತದೆ. ವೇತನ ಹೆಚ್ಚಿಸಿ, ಸಕಾಲಿಕ ಬಡ್ತಿ ನೀಡಬೇಕಿದೆ. ಛತ್ತೀಸ್‌ಗಢದಲ್ಲಿ ಸಹಾಯಕ ಕಾನ್‌ಸ್ಟೇಬಲ್‌ಗಳಿಗೆ ತಿಂಗಳಿಗೆ 15,000 ರೂ., ರಹಸ್ಯ ಪಡೆಗಳು ಅಥವಾ ಪೊಲೀಸ್ ಮಾಹಿತಿದಾರರಿಗೆ 12,000 ರೂ. ಮತ್ತು ಗೃಹ ರಕ್ಷಕರಿಗೆ ತಿಂಗಳಿಗೆ 13,000 ರೂ. ನೀಡಲಾಗುತ್ತಿದೆ ಎಂಬುದು ಪ್ರತಿಭಟನೆಗೆ ಕಾರಣ.

ನಕ್ಸಲೀಯರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಸಲುವಾಗಿ, 2003 ಮತ್ತು 2018ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ರಮಣ್ ಸಿಂಗ್ ಸರ್ಕಾರವು ಬಸ್ತಾರ್‌ನಲ್ಲಿ ವಿಶೇಷ ಪೊಲೀಸ್ ಅಧಿಕಾರಿಗಳಾಗಿ (ಎಸ್‌ಪಿಒ) ಸೇವೆ ಸಲ್ಲಿಸಲು ಅನೇಕ ಯುವಕರನ್ನು ನೇಮಿಸಿಕೊಂಡಿತು. ಇವರಲ್ಲಿ ಹೆಚ್ಚಿನವರು ಶರಣಾದ ಮಾವೋವಾದಿಗಳಾಗಿದ್ದರು. ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಎಸ್‌ಪಿಒಗಳನ್ನು ಸಹಾಯಕ ಕಾನ್‌ಸ್ಟೆಬಲ್‌ಗಳಾಗಿ ಮಾಡಲಾಯಿತು.

ಆದರೆ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ ಎಸ್‌ಪಿಒಗಳು, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದರು. ಈಗ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂಬುದು ಪ್ರತಿಭಟನೆಯ ಹಿಂದಿನ ಆಕ್ರೋಶವಾಗಿದೆ.


ಇದನ್ನೂ ಓದಿರಿ: ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...