Homeಮುಖಪುಟರಣರಂಗವಾದ ಪಶ್ಚಿಮ ಬಂಗಾಳ ವಿಧಾನಸಭೆ: ಶಾಸಕರ ಹೊಡೆದಾಟ

ರಣರಂಗವಾದ ಪಶ್ಚಿಮ ಬಂಗಾಳ ವಿಧಾನಸಭೆ: ಶಾಸಕರ ಹೊಡೆದಾಟ

ಗಲಾಟೆಯ ನಂತರ ಸುವೇಂದು ಅಧಿಕಾರಿ ಮತ್ತು ಇತರ ನಾಲ್ವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿದೆ.

- Advertisement -
- Advertisement -

ಕೋಲ್ಕತ್ತಾ: ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸದನದಲ್ಲಿ ಮಾತನಾಡಬೇಕು ಎಂದು ಬಿಜೆಪಿ ಒತ್ತಾಯಿಸಿದ ನಂತರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ಶಾಸಕರು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಹೊಡೆದಾಡಿಕೊಂಡಿದ್ದಾರೆ.

ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ನಡೆದ ಭೀಕರ ಹತ್ಯೆಗಳ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿದೆ. ಐದು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರ ಮೇಲೆ ಹಲ್ಲೆ ನಡೆಸಿ ನಂತರ ಕೊಲ್ಲಲಾಗಿದೆ.

ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಭಾದು ಶೇಖ್ ಅವರು ಕಚ್ಚಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ ಈ ಘಟನೆಯು ನಡೆದಿದೆ ಎಂದು ಆರೋಪಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್ ಮಧ್ಯಪ್ರವೇಶದ ನಂತರ, ಸಿಬಿಐ ಘಟನೆಯ ಕುರಿತು ತನಿಖೆ ನಡೆಸುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಮತ್ತು ವಕ್ತಾರ ಶೆಹಜಾದ್ ಜೈ ಹಿಂದ್ ಸೇರಿದಂತೆ ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದು ಜನಪ್ರತಿನಿಧಿಗಳು ಜಗಳವಾಡುತ್ತಿರುವುದನ್ನು ಕಾಣಬಹುದು.

ಜಗಳದಲ್ಲಿ ತೃಣಮೂಲ ಶಾಸಕ ಅಸಿತ್ ಮಜುಂದಾರ್ ಅವರ ಮೂಗಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸೇರಿದ್ದಾರೆ, ವಿರೋಧ ಪಕ್ಷದ ನಾಯಕ ಬಿಜೆಪಿಯ ಸುವೇಂದು ಅಧಿಕಾರಿಯವರು ಮಜುಂದಾರ್‌ರಿಗೆ ಗುದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಗಲಾಟೆಯ ನಂತರ ಸುವೇಂದು ಅಧಿಕಾರಿ ಮತ್ತು ಇತರ ನಾಲ್ವರು ಬಿಜೆಪಿ ಶಾಸಕರನ್ನು ಈ ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ.

“ಪ್ರತಿಪಕ್ಷಗಳು ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ಒತ್ತಾಯಿಸಿದವು. ಆದರೆ ಸರ್ಕಾರ ನಿರಾಕರಿಸಿತು. ಅವರು ನಮ್ಮ ಶಾಸಕರೊಂದಿಗೆ ಘರ್ಷಣೆಗಾಗಿ ಸಿವಿಲ್ ಡ್ರೆಸ್‌ನಲ್ಲಿ ಕೋಲ್ಕತ್ತಾ ಪೊಲೀಸ್ ಸಿಬ್ಬಂದಿಯನ್ನು ಕರೆತಂದರು” ಎಂದು  ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ವಿಧಾನಸಭೆಯೊಳಗೆ ಶಾಸಕರು ಸುರಕ್ಷಿತವಾಗಿಲ್ಲ. ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ ನಮ್ಮ 8-10 ಶಾಸಕರನ್ನು ಕೆಲವು ಟಿಎಂಸಿ ಶಾಸಕರು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಆದರೆ ತೃಣಮೂಲ ನಾಯಕ ಮತ್ತು ರಾಜ್ಯ ಸಚಿವ ಫಿರ್ಹಾದ್ ಹಕೀಮ್ ಬಿಜೆಪಿ ಮೇಲೆ ಆರೋಪ ಹೊರಿಸಿದ್ದಾರೆ. ಸದನದೊಳಗೆ ನಮ್ಮ ಕೆಲವು ಶಾಸಕರು ಗಾಯಗೊಂಡಿದ್ದಾರೆ, ಬಿಜೆಪಿಯ ನಡವಳಿಕೆಯನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.


ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...