Homeಮುಖಪುಟ'ಹೋರಾಟದ ನಡಿಗೆ, ಹಾಸನದ ಕಡೆಗೆ..'; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

- Advertisement -
- Advertisement -

ದೇಶಾದ್ಯಂತ ಸುದ್ದಿಯಾಗಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ, ಎನ್‌ಡಿಎ ಲೋಕಸಭಾ ಚುನಾವಣೆ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳು ಇಂದು ಹಾಸನ ನಗರದಲ್ಲಿ ಹಮ್ಮಿಕೊಂಡಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಪ್ರತಿಭಟನಾ ಸಮಾವೇಶ ಆರಂಭಗೊಂಡಿದ್ದು, ಸಾವಿರಾರು ಜನರು ಭಾಗವಹಿಸಿದ್ದಾರೆ.

ಲೈಂಗಿಕ ಹಗರಣ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣನನ್ನ ಕೂಡಲೇ ಬಂಧಿಸಬೇಕು, ವಿಡಿಯೊ ಹಂಚಿಕೊಂಡ ಕಿಡಿಕೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ‘ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ’ದ ವತಿಯಿಂದ ಇಂದು ‘ಹಾಸನದ ಕಡೆಗೆ ನಮ್ಮ ನಡಿಗೆ’ ಘೋಷವಾಕ್ಯದಡಿ ‘ಹಾಸನ ಚಲೋ’ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಘಟನೆ ಬೆಳಕಿಗೆ ಬಂದು ತಿಂಗಳಾದರೂ ಈವರೆಗೆ ಪ್ರಜ್ವಲ್‌ ರೇವಣ್ಣ ಬಂಧನ ವಿಳಂಬವಾಗಿರುವುದನ್ನ ವಿರೋಧಿಸಿ, ಸಂತ್ರಸ್ತರಿಗೆ ಮನೋಧೈರ್ಯ ತುಂಬುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿರುವ ಸಂಘಟನೆಗಳು, ಕೂಡಲೇ ಕಾನೂನು ಕ್ರಮಗಳನ್ನು ಜರುಗಿಸಿ ನ್ಯಾಯ ಒದಗಿಸಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿವೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ 113ಕ್ಕೂ ಹೆಚ್ಚು ದಲಿತ, ಮಹಿಳಾ, ರೈತ, ಕಾರ್ಮಿಕ ಮತ್ತು ಪ್ರಗತಿಪರ ಸಂಘಟನೆಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಹಾಸನದ ಹೇಮಾವತಿ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಿದ್ದು, ಬಹುತೇಕ ಮಹಿಳೆಯರೇ ಜಾಥಾವನ್ನು ಮುನ್ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿಯ ಹೊಸ ಬಸ್‌ನಿಲ್ದಾಣ ರಸ್ತೆಯಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿದ್ದಾರೆ. ಈ ಬೃಹತ್‌ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಷ್ಟ್ರದ ವಿವಿಧ ಭಾಗಗಳಿಂದ ಹೋರಾಟಗಾರರು ಆಗಮಿಸಿದ್ದಾರೆ.

ಹಿರಿಯ ಸಾಮಾಜಿಕ ಹೋರಾಟಗಾರ ಎಸ್‌ ಆರ್‌ ಹಿರೇಮಠ, ಸಿಐಟಿಯುನ ರಾಜ್ಯ ಅಧ್ಯಕ್ಷೆ ವರಲಕ್ಷ್ಮಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ, ಲೇಖಕಿ ಹೋರಾಗಾರ್ತಿ ಕೆ. ನೀಲಾ, ಬಂಜಗೆರೆ ಜಯಪ್ರಕಾಶ, ಹಿ.ಶಿ. ರಾಮಚಂದ್ರೇಗೌಡ, ಸಬಿಹಾ ಭೂಮಿಗೌಡ, ಮಾವಳ್ಳಿ ಶಂಕರ್, ಬಡಗಲಪುರ ನಾಗೇಂದ್ರ ಸೇರಿದಂತೆ ಅನೇಕ ಪ್ರಗತಿಪರರು ಮುಖಂಡರು ಈ ಬೃಹತ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...