Homeಕರ್ನಾಟಕಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬಂಧನ ಸಾಧ್ಯತೆ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬಂಧನ ಸಾಧ್ಯತೆ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದ್ದು, ಯಾವುದೇ ಸಂದರ್ಭದಲ್ಲಿ ಭವಾನಿ ರೇವಣ್ಣ ಬಂಧನದ ಸಾಧ್ಯತೆ ಇದೆ.

ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಗೆ ಭವಾನಿ ರೇವಣ್ಣನ ತನಿಖೆ ಅಗತ್ಯವಿದೆ. ಹೀಗಾಗಿ ಅವರನ್ನು ಕಸ್ಟಡಿಗೆ ನೀಡಬೇಕು, ಭವಾನಿ ಕಿಡ್ನಾಪ್ ನಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿಗಳಿವೆ. ದೂರುದಾರ ಹಾಗೂ  ಆರೋಪಿ ಸತೀಶ್ ಬಾಬಣ್ಣ ಮಾತಾಡಿರುವ ಕಾಲ್ ರೆಕಾರ್ಡ್ ಇದೆ.  ಈ ಕಾಲ್ ರೆಕಾರ್ಡ್‌ನಲ್ಲಿ ಭವಾನಿ ಯಾವ ರೀತಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿ ಇದೆ. ಮೊಬೈಲ್‌ನ ಅಟೋ ರೆಕಾರ್ಡರ್‌ನಿಂದ ಕಾಲ್ ರೆಕಾರ್ಡ್ ಆಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಈ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳು ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮೇ 29ರಂದು ಈ ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ಮೇ 31 ರೇವಣ್ಣ ಕುಟುಂಬಕ್ಕೆ ಪ್ರಮುಖ ದಿನವಾಗಿತ್ತು. ಇಂದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್‌ ರೇವಣ್ಣ ಅವರನ್ನು 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕಾರಗೊಂಡಿದೆ. ಇದಲ್ಲದೆ ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದರು. ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವ ವಿಶೇಷ ನ್ಯಾಯಾಲಯದ ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಕರ್ನಾಟಕ ಹೈಕೋರ್ಟ್ ಇಂದು ಹೇಳಿದೆ.

ರೇವಣ್ಣ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 13 ರಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಮೌಖಿಕವಾಗಿ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನು ಓದಿ: ‘ನರಹಂತಕ’ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...